Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೋಟ್ ದುರಂತದ ತಾಯಿ-ಮಗುವಿನ ವೈರಲ್ ಫೋಟೋ ಸತ್ಯವಲ್ಲ..!

ಜಬಲ್ಪುರ: ನರ್ಮದಾ ನದಿಗೆ ನಿರ್ಮಿಸಲಾಗಿರುವ ಬಾರ್ಗಿ ಅಣೆಕಟ್ಟೆಯಲ್ಲಿ ಪ್ರವಾಸಿಗರು ಇದ್ದ ಬೋಟ್ ಮಗುಚಿ 9 ಜನ ಮೃತಪಟ್ಟು, ನಾಲ್ವರು ನಾಪತ್ತೆಯಾಗಿದ್ದಾರೆ. ಈ ದುರಂತವು ಮಧ್ಯಪ್ರದೇಶದ ಜಬಲ್ಪುರದಲ್ಲಿ ಏಪ್ರಿಲ್ ಗುರುವಾರ ಸಂಜೆ ಸಂಭವಿಸಿದೆ.

ದುರಂತಕ್ಕೀಡಾದ ಬೋಟ್‌ನಲ್ಲಿ ಒಟ್ಟು 41 ಜನರಿದ್ದರು. ಅವರಲ್ಲಿ 28 ಮಂದಿಯನ್ನು ರಕ್ಷಿಸಲಾಗಿದೆ.


ದುರ್ಘಟನೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೊಗಳು, ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ದುರಂತದ ವೇಳೆ ತಾಯಿ ಹಾಗೂ ಮಗು ಒಬ್ಬರನ್ನೊಬ್ಬರು ಬಿಗಿದಪ್ಪಿದ ಸ್ಥಿತಿಯಲ್ಲೇ ಮೃತಪಟ್ಟಿದ್ದಾರೆ ಎನ್ನಲಾದ ಚಿತ್ರವೊಂದು ನೋಡುಗರ ಮನಕಲಕುತ್ತಿದೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಮುಳುಗುತಜ್ಞರೊಬ್ಬರು, ತಾಯಿಯ ತೋಳುಗಳಲ್ಲಿ ಮಗುವನ್ನು ನೋಡಿ ಆಘಾತವಾಯಿತು ಎಂದು ಮಾಧ್ಯಮದವರ ಎದುರು ಹೇಳಿದ್ದರು. ಅವರು ಹೇಳಿದ ವಿಚಾರ ನಿಜವೇ. ಆದರೆ, ಹರಿದಾಡುತ್ತಿರುವ ಚಿತ್ರ ನಕಲಿ ಎಂಬುದು ಇದೀಗ ಬಹಿರಂಗವಾಗಿದೆ. ಈ ವಿಚಾರವನ್ನು ಜಬಲ್ಪುರ ಜಿಲ್ಲಾಧಿಕಾರಿಯೇ ಖಚಿತಪಡಿಸಿದ್ದಾರೆ.

ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿರುವ ಜಬಲ್ಪುರ ಜಿಲ್ಲಾಧಿಕಾರಿ ಖಾತೆಯಲ್ಲಿ, 'ವ್ಯಾಪಕವಾಗಿ ಹಂಚಿಕೆಯಾಗುತ್ತಿರುವ ಚಿತ್ರವು ಎಐ ಮೂಲಕ ರೂಪಿಸಿದ್ದಾಗಿದೆ. ಅದು ನಿಜವಲ್ಲ' ಎಂಬುದಾಗಿ ಪೋಸ್ಟ್ ಹಂಚಿಕೊಳ್ಳಲಾಗಿದೆ.

ಮೂವರು ಮಕ್ಕಳು ಸೇರಿದಂತೆ ನಾಪತ್ತೆಯಾಗಿರುವ ನಾಲ್ವರಿಗಾಗಿ ಸೇನೆಯ ಮುಳುಗುತಜ್ಞರು ಮತ್ತು ವಿಪತ್ತು ನಿರ್ವಹಣಾ ತಂಡಗಳು ಹುಡುಕಾಟ ಮುಂದುವರಿಸಿವೆ. ಬಾರ್ಗಿ ಅಣೆಕಟ್ಟೆಯ ಹಿನ್ನೀರಿನ 5 ಕಿ.ಮೀ. ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳುಸಾವಿರಾರು ಕೋಟಿ ಹೂಡಿಕೆ ಮಾಡಿದವರಿಗೆ ಆತಂಕ :  ICE CREAM ಮಾರುತ್ತಿದ್ದವ ಈ ಪರಿ ಬೆಳೆದದ್ದು ಹೇಗೆ ?ಕೊನೆಗೂ ಶಿವಾನಂದ ನೀಲಣ್ಣವರ ಬಂಧನ..!ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆ