Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಯೋಧನಿಗೆ ನಡು ರಸ್ತೆಯಲ್ಲೆ ಪೋಲಿಸರಿಂದ ಹಲ್ಲೆ

ಅಥಣಿ: ಪಟ್ಟಣದ ಶಿವಯೋಗಿ (ಹಲ್ಯಾಳ) ವೃತ್ತದಲ್ಲಿ ರಸ್ತೆ ಬದಿ ವಾಹನದೊಂದಿಗೆ ನಿಂತಿದ್ದ ಸೈನಿಕನಿಗೆ ಪೊಲೀಸರು ಏಕವಚನದಲ್ಲಿ ಮಾತನಾಡಿದ್ದರಿಂದ, ಗೌರವಕೊಟ್ಟು ಮಾತನಾಡಿ ಎಂದು ಮರಳಿ ಹೇಳಿದ್ದರಿಂದ ಉಂಟಾದ ವಾಗ್ವಾದದಲ್ಲಿ ಪೊಲೀಸರು ಸೈನಿಕನಿಗೆ ಶುಕ್ರವಾರ ನಡುರಸ್ತೆಯಲ್ಲಿಯೇ ಥಳಿಸಿ ಬಳಿಕ ಕ್ಷಮೆಯಾಚಿಸಿದ್ದಾರೆ.

ಈ ಘಟನೆ ಬಳಿಕ ಮಾಜಿ ಸೈನಿಕರ ಸಂಘದಿಂದ ಪೊಲೀಸ್‌ ಠಾಣೆಗೆ ಮುತ್ತಿಗೆ ಯತ್ನ ನಡೆಯಿತು. ಪೋಲಿಸರು ಬಹಿರಂಗ ಕ್ಷಮೆಯಾಚಿಸಿದ ಬಳಿಕ ಮುತ್ತಿಗೆ ಹಿಂಪಡೆದರು.

ಹಲ್ಲೆಗೊಳಗಾದ ಯೋಧ ಮಲ್ಲಿಕಾರ್ಜುನ ಪಾಟೀಲ ಮಾತನಾಡಿ, ಗೌರವದಿಂದ ಮಾತನಾಡಿ ಎಂದು ಹೇಳಿದ್ದಕ್ಕೆ ಅವಾಚ್ಯವಾಗಿ ನಿಂದಿಸಿ ಐದಾರು ಪೊಲೀಸರು ಸೇರಿ ನಡು ರಸ್ತೆಯಲ್ಲೆ ಹಲ್ಲೆ ಮಾಡಿದ್ದಾರೆ. ಬಳಿಕ ಠಾಣೆಗೆ ಕರೆತಂದು ಅಲ್ಲಿಯೂ ಅವಾಚ್ಯವಾಗಿ ನಿಂದಿಸಿದ್ದಾರೆ. ನಾವು ಸಹ ದೇಶ ಸೇವೆ ಮಾಡುತ್ತೇವೆ. ಆದರೆ ನಮಗೆ ಸ್ಥಳೀಯವಾಗಿ ಈ ತರಹ ಅಗೌರವ ತೋರಿದ್ದು ಬೇಸರ ತಂದಿದೆ ಎಂದು ಬೇಸರಿಸಿದರು.

ಮಾಜಿ ಸೈನಿಕ ಗುರಪ್ಪಾ ಮಗದುಮ್ ಮಾತನಾಡಿ, ವೀರ ಮರಣ ಹೊಂದಿದ ಯೋಧರಿಗೆ ಇಡೀ ದೇಶದಲ್ಲಿಯೇ ಸಾಕಷ್ಟು ಗೌರವ ನೀಡುತ್ತಿದ್ದಾರೆ. ಆದರೆ ಸ್ಥಳಿಯವಾಗಿ ಪೋಲಿಸರು ಈ ತರಹ ವರ್ತನೆ ಮಾಡಿದ್ದು ಖಂಡನಿಯ. ಇದನ್ನು ಖಂಡಿಸಿ ನಾವು ಪೋಲಿಸ್‌ ಠಾಣೆಗೆ ಮುತ್ತಿಗೆ ಹಾಕಲು ಹೋಗಿದ್ದೆವು, ಆದರೆ ಪೋಲಿಸರು ಬಹಿರಂಗವಾಗಿ ಯೋಧನಿಗೆ ಕ್ಷಮೆ ಕೇಳಿದ್ದಕ್ಕೆ ಮುತ್ತಿಗೆ ಹಿಂಪಡೆದುಕೊಂಡಿದ್ದೇವೆ ಎಂದು ಹೇಳಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ