Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜಕೀಯ ಪದವಿ ಕಾಲೇಜು ಪ್ರಾರಂಭಿಸಲು ಚಿಂತನೆ

ಮಂಗಳೂರು: ಕರ್ನಾಟಕ ವಿಧಾನ ಮಂಡಲದ ವತಿಯಿಂದ ರಾಜಕೀಯ ಪದವಿ ಕಾಲೇಜ್‌ವೊಂದನ್ನು ಬರುವ ಜೂನ್‌ನಿಂದ ಬೆಂಗಳೂರಿನಲ್ಲಿ ಪ್ರಾರಂಭಿಸಲು ಯೋಚಿಸಲಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 'ಮೂರು ವರ್ಷಗಳ ಪದವಿ ಶಿಕ್ಷಣದಲ್ಲಿ ರಾಜಕೀಯ ಸಂಹಿತೆ ಒಳಗೊಂಡ ಪಠ್ಯಕ್ರಮ ರೂಪಿಸಲು ತಜ್ಞರನ್ನು ಸಂಪರ್ಕಿಸಲಾಗಿದೆ. ನಿವೃತ್ತ ಪ್ರಾಧ್ಯಾಪಕರು, ಮುತ್ಸದ್ದಿ ರಾಜಕಾರಣಿಗಳು, ರಾಜಕೀಯ ಪರಿಣಿತಿ ಹೊಂದಿರುವ ಸಾಮಾನ್ಯ ಜನರ ಅಭಿಪ್ರಾಯ ಪಡೆಯಲಾಗುವುದು. ಒಂದು ತಿಂಗಳಲ್ಲಿ ಇದರ ಸ್ಪಷ್ಟ ಚಿತ್ರಣ ಸಿಗಲಿದೆ. ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ಮತ್ತು ನಾನು ಈ ಬಗ್ಗೆ ಚರ್ಚಿಸಿದ್ದು, ಮುಖ್ಯಮಂತ್ರಿ ಬಳಿ ವಿಷಯ ಪ್ರಸ್ತಾಪಿಸಿದ್ದೇವೆ. ಅವರು ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ' ಎಂದರು.

ರಾಜ್ಯದಲ್ಲಿ 29 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ. 1,900 ಪ್ರಾಥಮಿಕ ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ಮಕ್ಕಳು ಇದ್ದಾರೆ. ಕನ್ನಡ ಮಾಧ್ಯಮ ಶಾಲೆಗಳು ಬಡವಾಗುತ್ತಿವೆ. ದಶಕದ ಈಚೆಗೆ ಸರ್ಕಾರ ನಡೆಸುವವರು ತೆಗೆದುಕೊಳ್ಳುವ ತೀರ್ಮಾನ ಇದಕ್ಕೆ ಕಾರಣವಾಗಿದೆ. ಶಿಕ್ಷಕರೇ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುತ್ತಿಲ್ಲ ಎಂಬ ಆರೋಪವೂ ಇದೆ. ಎಲ್ಲರೂ ತಮ್ಮ ಮಕ್ಕಳನ್ನು ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಕಳುಹಿಸಲು ಉತ್ಸುಕತೆ ತೋರುತ್ತಾರೆ. ಶಿಕ್ಷಣ ಸಂಸ್ಥೆಗಳನ್ನು ನಡೆಸುವ ರಾಜಕಾರಣಿಗಳು ತಮ್ಮ ಶಾಲೆಗಳ ಸುಧಾರಣೆ ಬಗ್ಗೆ ಯೋಚಿಸುತ್ತಾರೆ. ಕೆಲವರು ಮಾತ್ರ ಇದಕ್ಕೆ ಹೊರತಾಗಿರಬಹುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಹೆಚ್ಚು ಅನುಭವ ಇರುವವರಿಗೆ ಶಿಕ್ಷಣ ಖಾತೆಯ ಹೊಣೆ ನೀಡಿದರೆ ಉತ್ತಮ. ನಾನು ಶಿಕ್ಷಣ ಸಚಿವನಾಗಿದ್ದಾಗ ಕನ್ನಡ ಮಾಧ್ಯಮಕ್ಕೆ ಅನುಮತಿ ಪಡೆದು ಇಂಗ್ಲಿಷ್ ಮಾಧ್ಯಮ ಶಿಕ್ಷಣ ನೀಡುತ್ತಿದ್ದ ರಾಜ್ಯದ 417 ಶಾಲೆಗಳನ್ನು ಬಂದ್‌ ಮಾಡಿಸಿದ್ದೆ. 17 ಮಂದಿ ಶಾಸಕರು ನನ್ನ ವಿರುದ್ಧ ಹೋರಾಟ ನಡೆಸಿದ್ದರು. ಈಗ ಕನ್ನಡ ಮಾಧ್ಯಮಕ್ಕೆ ಅನುಮತಿ ಪಡೆದು ಇಂಗ್ಲಿಷ್ ಮಾಧ್ಯಮ ನಡೆಸುವ ಶಾಲೆಗಳೂ ಇವೆ. ಅಧಿಕಾರಿಗಳ ಹಂತದಿಂದ ಮೇಲಿನವರೆಗೆ ಎಲ್ಲೆಡೆ ಭ್ರಷ್ಟಾಚಾರವೂ ಹೆಚ್ಚಾಗಿದೆ ಎಂದು ಹೇಳಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ