Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ತನ್ನ ಕ್ರಿಕೆಟ್ ತಂಡಕ್ಕೆ ಕನ್ನಡಿಗನನ್ನೇ ಕೋಚ್ ಆಗಿ ನೇಮಿಸಿಕೊಂಡಿತು ಈ ದೇಶ

ನೈರೋಬಿ : ಕೀನ್ಯಾ ಕ್ರಿಕೆಟ್ ಮಂಡಳಿಯು ಭಾರತದ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ ಅವರನ್ನು ತಮ್ಮ ತಂಡದ ನೂತನ ಮುಖ್ಯ ಕೋಚ್ ಆಗಿ ನೇಮಿಸಿದೆ. ಕರ್ನಾಟಕ ವೇಗಿ ಇದೀಗ ಕೀನ್ಯಾ ರಾಷ್ಟ್ರೀಯ ತಂಡದ ಪರ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

ದೊಡ್ಡ ಗಣೇಶ್ ಅವರ ನೇತೃತ್ವದಲ್ಲಿ ಕೀನ್ಯಾ ತಂಡವು ಮುಂಬರುವ ಐಸಿಸಿ ಡಿವಿಷನ್ 2 ಚಾಲೆಂಜ್ ಲೀಗ್​​ನಲ್ಲಿ ಕಣಕ್ಕಿಳಿಯಲಿದೆ. ಗಣೇಶ್ ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಬಲಗೈ ಬೌಲರ್ ಆಗಿದ್ದ ಗಣೇಶ ಅವರು, ನಾಲ್ಕು ಟೆಸ್ಟ್‌ಗಳನ್ನು ಆಡಿದ್ದು, ಐದು ವಿಕೆಟ್‌ಗಳ ಪಡೆದಿದ್ದಾರೆ. ಒಂದು ಏಕದಿನದ ಪಂದ್ಯವಾಡಿದ್ದು ಒಂದು ವಿಕೆಟ್‌ ಪಡೆದಿದ್ದಾರೆ.

ಅವರಿಗೆ ಒಂದು ವರ್ಷದ ಕಾಂಟ್ರಾಕ್ಟ್‌ ನೀಡಲಾಗಿದೆ. “ವಿಶ್ವಕಪ್‌ಗೆ ಅರ್ಹತೆ ಪಡೆಯುವುದು ನನ್ನ ಮೊದಲ ದೃಷ್ಟಿ” ಎಂದು ಕೀನ್ಯಾದ ಮುಖ್ಯ ಕೋಚ್ ಆದ ನಂತರ ಗಣೇಶ ಹೇಳಿದ್ದಾರೆ.
ಕೀನ್ಯಾ ನಾಲ್ಕು ಏಕದಿನದ ಪಂದ್ಯಗಳ ವಿಶ್ವಕಪ್‌ಗಳಲ್ಲಿ (1996, 1999, 2003 ಮತ್ತು 2011) ಮತ್ತು ಒಂದು T20 ವಿಶ್ವಕಪ್‌(2007)ನಲ್ಲಿ ಪಾಲ್ಗೊಂಡಿದೆ. ಆದರೆ, 2003 ಏಕದಿನದ ವಿಶ್ವಕಪ್‌ ನಲ್ಲಿ ಸೆಮಿಫೈನಲ್ ತಲುಪಿತ್ತು. ಕೀನ್ಯಾ ಸೆಪ್ಟೆಂಬರ್‌ನಲ್ಲಿ ಐಸಿಸಿ ವಿಶ್ವಕಪ್ ಅರ್ಹತಾ ಸ್ಪರ್ಧೆಯಲ್ಲಿ ಪಪುವಾ ನ್ಯೂಗಿನಿಯಾ, ಡೆನ್ಮಾರ್ಕ್, ಕುವೈತ್, ಜರ್ಸಿ ಮತ್ತು ಕತಾರ್‌ ತಂಡಗಳನ್ನು ಎದುರಸಲಿದೆ.

“ನಾನು ವೃತ್ತಿಪರ ಕೋಚ್ ಆಗಿದ್ದೇನೆ ಮತ್ತು ಇಲ್ಲಿಗೆ ಬರುವ ಮೊದಲು, ನಾನು ಬೌಲರ್‌ಗಳು ಮತ್ತು ಬ್ಯಾಟ್ಸ್‌ಮನ್‌ಗಳನ್ನು ವೀಕ್ಷಿಸಲು ಯೂಟ್ಯೂಬ್‌ಗೆ ಹೋಗಿದ್ದೆ ಮತ್ತು ಅವರು ಉತ್ತಮ ಸ್ಥಿತಿಯಲ್ಲಿದ್ದಾರೆ ಎಂದು ನಾನು ಹೇಳಬಲ್ಲೆ” ಎಂದು 51 ವರ್ಷ ವಯಸ್ಸಿನ ಗಣೇಶ ಹೇಳಿದ್ದಾರೆ.
ದೊಡ್ಡ ಗಣೇಶ ಅವರು ದೇಶೀಯ ಕ್ರಿಕೆಟ್‌ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದರು ಮತ್ತು 104 ಪ್ರಥಮ ದರ್ಜೆ ಪಂದ್ಯಗಳಲ್ಲಿ 29.42 ಸರಾಸರಿಯಲ್ಲಿ 20 ಸಲ ಐದು ವಿಕೆಟ್‌ಗಳನ್ನು ಒಳಗೊಂಡಂತೆ 365 ವಿಕೆಟ್‌ಗಳನ್ನು ಪಡೆದಿದ್ದಾರೆ. 89 ಲಿಸ್ಟ್‌ ಎ ಕ್ರಿಕೆಟ್‌ ನಲ್ಲಿ 128 ವಿಕೆಟ್‌ಗಳನ್ನು ಪಡೆದಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಕಲಗಿ ಪಟ್ಟಣದಲ್ಲಿ ವಿಜಯ ದಶಮಿ ನಿಮಿತ್ತ ಶ್ರೀ ಮಹಾಲಕ್ಷ್ಮೀ ದೇವಿ ಅಗ್ನಿ ಹಾಯುವ ಕಾರ್ಯಕ್ರಮ.ಮಾರ್ಕಂಡೇಯ ನದಿಯಲ್ಲಿ  ಮರ್ಡರ್..?ಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆRCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರು