Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಯ್ಯಪ್ಪ ವ್ರತಧಾರಿಗಳ ಕಾಲ್ನಡಿಗೆ ಪಯಣದಲಿ ಹೆಜ್ಜೆ ಹಾಕುತ್ತಿದೆ ಈ ಶ್ವಾನ..!

 

ಬೆಳಗಾವಿ :
ನಾಯಿ ಮನುಷ್ಯರ ಪಾಲಿನ ಅತ್ಯಂತ ನಿಷ್ಠಾವಂತ ಪ್ರಾಣಿ ಎಂಬ ವಿಶ್ವಾಸಕ್ಕೆ ಪಾತ್ರವಾಗಿವೆ. ಇಲ್ಲೊಂದು ನಾಯಿ ಇದೀಗ ಬಹು ದೂರದ ಪರಮಪವಿತ್ರ ಯಾತ್ರಾಸ್ಥಳ ಶಬರಿಮಲೆಯತ್ತ ತೆರಳುತ್ತಿರುವ ಮಾಲಾಧಾರಿಗಳ ಜೊತೆ ಹೆಜ್ಜೆ ಹಾಕುತ್ತಿರುವುದು ಎಲ್ಲರನ್ನೂ ಅಚ್ಚರಿಗೊಳಗಾಗುವಂತೆ ಮಾಡಿದೆ.

ಯಾವುದೇ ಜಾತಿ ಮತ ಧರ್ಮದ ಬೇದವಿಲ್ಲದೆ ಪ್ರತಿಯೊಬ್ಬರನ್ನು ಸಮಾನರನ್ನಾಗಿ ಕಾಣುವ ಏಕೈಕ ದೇವಸ್ಥಾನ ಶಬರಿಮಲೆ. ದೇಶದಲ್ಲಿ ಅತೀ ಹೆಚ್ಚು ಭಕ್ತರನ್ನು ಸೆಳೆಯುವ ದೇವಸ್ಥಾನವಾಗಿರುವ ಶಬರಿಮಲೆ ಇದೀಗ ಮಂಜಲ ಪೂಜೆಗಾಗಿ ಮತ್ತೆ ತೆರೆದಿದೆ. ಈಗಾಗಲೇ ಶಬರಿಮಲೆ ಭಕ್ತರು ವೃತ ಕೈಗೊಂಡು ಶಬರಿಮಲೆ ಕಡೆಗೆ ತೆರಳುತ್ತಿದ್ದಾರೆ.

ಅದರಲ್ಲೂ ಕಾಲ್ನಡಿಗೆ ಮೂಲಕ ಅಯ್ಯಪ್ಪನ ದರ್ಶನಕ್ಕೆ ತೆರಳುವ ಭಕ್ತರ ಸಂಖ್ಯೆ ಇದೀಗ ಹೆಚ್ಚಾಗುತ್ತಲೇ ಇದೆ. ಈ ರೀತಿ ಕಾಲ್ನಡಿಗೆಯಲ್ಲಿ ತೆರಳುವ ಭಕ್ತರ ಜೊತೆ ಶ್ವಾನಗಳು ತೆರಳುವ ಉದಾಹರಣೆಗಳು ಹಲವಾರು ಇದೆ.

ನಾಯಿಯೊಂದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೆಕ್ಕೇರಿ ಗ್ರಾಮದ ಅಯ್ಯಪ್ಪ ಭಕ್ತರ ಜೊತೆ 600 ಕಿಲೋಮೀಟರ್ ಸಾಗಿ ಕಾಸರಗೋಡು ಜಿಲ್ಲೆಯನ್ನು ತಲುಪಿದೆ. ನವೆಂಬರ್ 4 ರಂದು ಬೆಕ್ಕೇರಿ ಗ್ರಾಮದ 10 ಮಂದಿ ಅಯ್ಯಪ್ಪ ವೃತಾಧಾರಿಗಳು ಶಬರಿಮಲೆಗೆ ಕಾಲ್ನಡಿಗೆ ಮೂಲಕ ತೆರಳಿದ್ದರು. ತಮ್ಮ ಗ್ರಾಮದಿಂದ ಸುಮಾರು 40 ಕಿಲೋಮೀಟರ್ ದೂರ ಕ್ರಮಿಸಿದ್ದ ಅಯ್ಯಪ್ಪ ಮಾಲಾಧಾರಿಗಳನ್ನು ಶ್ವಾನವೊಂದು ಸದ್ದಿಲ್ಲದೆ ಹಿಂಬಾಲಿಸುತ್ತಿರುವುದು ತಂಡದ ಸದಸ್ಯರ ಗಮನಕ್ಕೆ ಬಂದಿತ್ತು.

 

ಶ್ವಾನವನ್ನು ಎಷ್ಟು ಓಡಿಸಿದರೂ ಶ್ವಾನ ಅಯ್ಯಪ್ಪ ಭಕ್ತರನ್ನು ಹಿಂಬಾಲಿಸುವುದನ್ನು ಬಿಟ್ಟಿಲ್ಲ. ಬಳಿಕ ದಾರಿ ಕಾಣದೆ ಅಯ್ಯಪ್ಪ ಭಕ್ತಾದಿಗಳು ಆ ಶ್ವಾನವನ್ನೂ ತಮ್ಮ ಜೊತೆ ಸೇರಿಸಿಕೊಂಡು ಸುಮಾರು 600 ಕಿಲೋಮೀಟರ್ ಸಾಗಿ ಇದೀಗ ಕಾಸರಗೋಡು ತಲುಪಿದ್ದಾರೆ. ಶ್ವಾನ ನಮ್ಮ ಜೊತೆ ಬರುತ್ತಿದ್ಧು, ನಾವು ನೀಡಿದ ಆಹಾರವನ್ನೇ ಸೇವಿಸುತ್ತದೆ. ಬೇರೆ ಯಾವುದೇ ಆಹಾರವನ್ನು ಸೇವಿಸುವುದಿಲ್ಲ ಎನ್ನುತ್ತಾರೆ ಅಯ್ಯಪ್ಪ ಸ್ವಾಮಿ ವ್ರತಧಾರಿಗಳು.

ಬೆಳಿಗ್ಗೆ 3 ಗಂಟೆ ಹೊತ್ತಿಗೆ ಪ್ರತಿದಿನ ಕಾಲ್ನಡಿಗೆಯನ್ನು ಆರಂಭಿಸುತ್ತೇವೆ. ರಾತ್ರಿ 8 ಗಂಟೆಗೆ ದಾರಿ ಮಧ್ಯೆ ಸಿಗುವ ದೇವಸ್ಥಾನಗಳಲ್ಲಿ ವಿಶ್ರಾಂತಿಯನ್ನು ಪಡೆದುಕೊಳ್ಳುತ್ತೇವೆ. ಶ್ವಾನ ನಾವು ತಂಗುವ ಪಕ್ಕದಲ್ಲೇ ವಿಶ್ರಾಂತಿ ತೆಗೆದುಕೊಳ್ಳುತ್ತದೆ. ನಾವು ಹೊರಡುವ ಮೊದಲೇ ಶ್ವಾನವು ಹೊರಟು ನಿಲ್ಲುತ್ತದೆ ಎನ್ನುತ್ತಾರೆ ಅಯ್ಯಪ್ಪ ಮಾಲಾಧಾರಿ ಮೌನೇಶ ಬಡಿಗೇರ. ಪಾದಯಾತ್ರೆ ಆರಂಭಿಸಿ ಈಗಾಗಲೇ 14 ದಿನಗಳು ಕಳೆದಿದ್ದು, 600 ಕಿಲೋಮೀಟರ್ ಶ್ವಾನವೂ ನಮ್ಮ ಜೊತೆಗೆ ಬರುತ್ತಿದೆ. ಅಯ್ಯಪ್ಪ ಸ್ವಾಮಿಯೇ ನಮ್ಮ ಜೊತೆಗೆ ನಮಗಾಗಿ ಬರುತ್ತಿದ್ದಾರೆ ಎನ್ನುವ ಭಾವನೆ ಮೂಡುತ್ತಿದ್ದು, ಇನ್ನೂ 500 ಕಿಲೋಮೀಟರ್ ನಮ್ಮ ಜೊತಗೇ ಬರುತ್ತದೆ ಎನ್ನುವ ಭರವಸೆ ಇದೆ. ಡಿಸೆಂಬರ್ 4 ಅಥವಾ 5 ನೇ ತಾರೀಖಿಗೆ ಶಬರಿಮಲೆ ತಲುಪಲಿದ್ದೇವೆ ಎನ್ನುತ್ತಾರೆ.

ಒಟ್ಟಾರೆ ಇದೀಗ ಅಯ್ಯಪ್ಪ ಸ್ವಾಮಿ ವ್ರತಧಾರಿಗಳ ಜೊತೆಗೆ ಹೆಜ್ಜೆ ಹಾಕುತ್ತಿರುವ ಈ ನಾಯಿ ಜನರ ಗಮನ ಸೆಳೆದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ