Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಈ ವಾರ ಗಾಳಿ- ಮಳೆ ಹೆಚ್ಚಳ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಗಾಳಿ-ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ. ಸೋಮವಾರದಿಂದ ನಾಲ್ಕು ದಿನಗಳು ಬಹುತೇಕ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೊ ಅಲರ್ಟ್ ಘೋಷಿಸಿದೆ.

ಕರಾವಳಿಯ ದಕ್ಷಿಣ ಕನ್ನಡದ ಕೆಲವೆಡೆ ಸೋಮವಾರ ಗುಡುಗು ಸಹಿತ ಮಳೆ ಆಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ.

ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಜಿಲ್ಲೆಯ ಕೆಲವೆಡೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಜೊತೆಗೆ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಸೋಮವಾರ 19 ಜಿಲ್ಲೆಗಳಿಗೆ, ಮಂಗಳವಾರ 26 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ನೀಡಲಾಗಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬುಧವಾರ ಹಾಗೂ ಗುರುವಾರ 25 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಹಾಗೂ ಚಿತ್ರದುರ್ಗ ಜಿಲ್ಲೆಗೆ 'ಆರೆಂಜ್ ಅಲರ್ಟ್' ನೀಡಲಾಗಿದೆ.

ಮುನ್ನೆಚ್ಚರಿಕೆಯಾಗಿ ಮಳೆ ವೇಳೆ ಅನಗತ್ಯ ಪ್ರಯಾಣ ತಪ್ಪಿಸಿ, ಸುರಕ್ಷಿತ ಸ್ಥಳದಲ್ಲಿ ಇರುವಂತೆ ಇಲಾಖೆ ಸಲಹೆ ನೀಡಿದೆ.

ಕರಾವಳಿ, ಉತ್ತರ ಒಳನಾಡಿನ ಕೆಲವೆಡೆ ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ 1ರಿಂದ 3 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಳವಾಗಿತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ (42 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ