Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಈ ವರ್ಷ 5, 8, 9ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ಇಲ್ಲ: ಶಿಕ್ಷಣ ಇಲಾಖೆ

ಬೆಂಗಳೂರು: ರಾಜ್ಯ ಪಠ್ಯ ಕ್ರಮದ ಶಾಲೆಗಳ 5, 8 ಹಾಗೂ 9ನೇ ತರಗತಿ ಮಕ್ಕಳಿಗೆ ಈ ವರ್ಷ ಪಬ್ಲಿಕ್‌ ಪರೀಕ್ಷೆ ನಡೆಸಲಾಗುವುದಿಲ್ಲ ಎಂದು ರಾಜ್ಯ ಶಿಕ್ಷಣ ಇಲಾಖೆ ತಿಳಿಸಿದೆ. ಈ ತರಗತಿಗಳ ಬೋರ್ಡ್ ಪರೀಕ್ಷೆಯ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿ ಇರುವುದರಿಂದ 2024-25ನೇ ಸಾಲಿನಲ್ಲಿ ಈ ಹಿಂದೆ ಇದ್ದಂತೆ ಎಲ್ಲ ತರಗತಿಗಳಿಗೂ ಮೌಲ್ಯಾಂಕನ ಪದ್ಧತಿಯೇ ಮುಂದುವರಿಯಲಿದೆ ಎಂದು ಇಲಾಖೆ ಸೂಚಿಸಿದೆ.

2024-25ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ರಾಜ್ಯ ಪಠ್ಯ ಕ್ರಮದ 1ರಿಂದ 10ನೇ ತರಗತಿ ಶಾಲೆಗಳಿಗೆ 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕ್ರಿಯಾಯೋಜನೆ ಹಾಗೂ ಶೈಕ್ಷಣಿಕ ಮಾರ್ಗದರ್ಶಿಯನ್ನು ಹೊರಡಿಸಲಾಗಿದೆ. ಇದನ್ನು ಆಧರಿಸಿ ಶಾಲೆಗಳಲ್ಲಿ ಪಠ್ಯ ವಸ್ತು ಬೋಧನೆ ಹಾಗೂ ಮೌಲ್ಯಾಂಕನ ಕುರಿತು ವಹಿಸಬೇಕಾದ ಕ್ರಮಗಳನ್ನು ಸೂಚಿಸಿ, ಅದರಂತೆ ಕ್ರಮವಹಿಸಲು ತಿಳಿಸಿದೆ.

ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಿನಾಂಕ: 29-05-2024ರಿಂದ ಶೈಕ್ಷಣಿಕ ವರ್ಷವು ಪ್ರಾರಂಭವಾಗಿದೆ. 2022-23ನೇ ʼಶೈಕ್ಷಣಿಕ ಸಾಲಿನಲ್ಲಿ ಕಲಿಕಾ ಚೇತರಿಕೆ’ ಉಪಕ್ರಮವನ್ನು ಮತ್ತು 2023-24ನೇ ಸಾಲಿನಲ್ಲಿ ʼಕಲಿಕಾ ಬಲವರ್ಧನೆ’ ಕಾರ್ಯಕ್ರಮದಡಿ ವಿದ್ಯಾರ್ಥಿಗಳ ಚಟುವಟಿಕೆ ಪುಸ್ತಕ ಹಾಗೂ ಶಿಕ್ಷಕರ ಚಟುವಟಿಕೆ ಕೋಶಗಳನ್ನು ಸಿದ್ಧಪಡಿಸಿ ಬೋಧನಾ ಕಲಿಕಾ ಪ್ರಕ್ರಿಯೆಯಲ್ಲಿ ಅಳವಡಿಸಿ ಕಲಿಕಾ ಅಂತರವನ್ನು ಬೆಸೆಯಲು ನಿರಂತರವಾಗಿ ಉಪಕ್ರಮಗಳನ್ನು ಅನುಷ್ಠಾನಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಸಜ್ಜುಗೊಳಿಸಲು ಶೈಕ್ಷಣಿಕ ವರ್ಷದ ಆರಂಭದಲ್ಲಿ ʼಸೇತುಬಂಧ’ ಕಾರ್ಯಕ್ರಮವನ್ನು ಜೂನ್ ತಿಂಗಳಿನಲ್ಲಿ ನಡೆಸುವುದು. 1ರಿಂದ 10ನೇ ತರಗತಿಗಳಿಗೆ ಸೇತುಬಂಧ ಸಾಹಿತ್ಯವನ್ನು ಸಿದ್ಧಪಡಿಸಿ DSERT website ನಲ್ಲಿ ಅಳವಡಿಸಲಾಗಿದೆ. ಕಾರ್ಯಕ್ರಮ ಅನುಷ್ಠಾನಿಸುವ ಕುರಿತು ಸೇತುಬಂಧ ಸುತ್ತೋಲೆಯ ಮೂಲಕ ಮಾರ್ಗದರ್ಶನ ನೀಡಲಾಗಿದೆ.

ಶಾಲಾ ಬ್ಯಾಗ್‌ ಹೊರೆ ತಗ್ಗಿಸುವ ನಿಟ್ಟಿನಲ್ಲಿ 2024-25ನೇ ಸಾಲಿನಲ್ಲಿ ಪಠ್ಯ ಪುಸ್ತಕಗಳನ್ನು ಭಾಗ-1 ಮತ್ತು ಭಾಗ-2ರಂತೆ ಪ್ರತ್ಯೇಕವಾಗಿ ಮುದ್ರಿಸಲಾಗಿದೆ. ಭಾಗ-1ರ ಪಠ್ಯ ಶೇ.50 ಹಾಗೂ ಭಾಗ-2ರ ಪಠ್ಯ ಶೇ.50 ಒಟ್ಟು ಸೇರಿ ಶೇ.100ರಷ್ಟು ಪಠ್ಯವನ್ನು ಮೌಲ್ಯಾಂಕನಕ್ಕೆ ಒಳಪಡಿಸುವ ವಿಧಾನವನ್ನು ನೀಡಲಾಗಿದ್ದು, ಅದರಂತೆ ಕ್ರಮವಹಿಸುವುದು.

ಉಲ್ಲೇಖಿತ ಸುತ್ತೋಲೆ ಹಾಗೂ 2024-25ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯನ್ನು ಆಧರಿಸಿ, ವಾರ್ಷಿಕ ಪಾಠ ಹಂಚಿಕೆ ಮಾಡಿಕೊಂಡು, ಕಲಿಕೆಯನ್ನು ಅನುಕೂಲಿಸುತ್ತಾ, ರೂಪಣಾತ್ಮಕ ಹಾಗೂ ಸಂಕಲನಾತ್ಮಕ ಮೌಲ್ಯಾಂಕನ ನಿರ್ವಹಿಸಲು ಅನುವಾಗುವಂತೆ ಮಾಹಿತಿಯನ್ನು ನೀಡಲಾಗಿರುತ್ತದೆ. ಅದರಂತೆ, ಶಾಲಾಹಂತದಲ್ಲಿ ನಿಗದಿತ ಕಾಲಾವಧಿಯೊಳಗೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕ್ರಮವಹಿಸುವುದು.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು