Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಂಗಾಂಗ ದಾನ ಮಾಡಿ ಮಾದರಿಯಾದವರು

 

 

ಬೆಳಗಾವಿ :
ಮಾಸ್ತಮರಡಿ ಗ್ರಾಮದ ಹತ್ತಿರ ರಸ್ತೆ ಅಪಘಾತದಲ್ಲಿ ಗಾಯಗೊಂಡು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 43 ವರ್ಷದ ಯುವಕನ ತಲೆಗೆ ಗಂಭೀರ ಪೆಟ್ಟು ಬಿದ್ದ ಕಾರಣ ಮೆದುಳು ನಿಷ್ಕ್ರೀಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಯುವಕ ಅಂಗಾಂಗ ದಾನ ಮಾಡಿ ಮೂವರಿಗೆ ಜೀವದಾನ ನೀಡಿದರೆ, ಧಾರವಾಡದ ಎಸಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 40 ವರ್ಷದ ಮಹಿಳೆಯೋರ್ವಳು ತಮ್ಮ ಅಂಗಾಂಗಳನ್ನು ಇತ್ತೀಚೆಗೆ ದಾನ ಮಾಡಿ ನಾಲ್ವರ ಜೀವ ಉಳಿಸಿ ಇಬ್ಬರು ಅಂಧರಿಗೆ ಬೆಳಕಾಗಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಯುವಕನ ಹೃದಯ ಹಾಗೂ ಕಿಡ್ನಿಯನ್ನು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗೆ ಕಸಿ ಮಾಡಲು ಅಣಿಯಾದರೆ ಒಂದು ಕಿಡ್ನಿಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ರೋಗಿಗೆ ಕಸಿ ಮಾಡಲು ಗ್ರೀನ್ ಕಾರಿಡಾರ್ (ಜೀರೋ ಟ್ರಾಫಿಕ್) ಮೂಲಕ ಕಳುಹಿಸಿಕೊಡಲಾಯಿತು. ಇನ್ನೊಂದೆಡೆ ಎಸ್ ಡಿಎಂ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಮಹಿಳೆಯ ಹೃದಯ ಹಾಗೂ ಲೀವರ್ ಅನ್ನು ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಗೆ ಜೀರೋ ಟ್ರಾಫಿಕ್ ಅಥವಾ ಗ್ರೀನ ಕಾರಿಡಾರ (ಹಸಿರು ಪಥ) ಮೂಲಕ ಅಂಗಾಂಗಗಳನ್ನು ಸ್ಥಳಾಂತರಿಸಿ ಕಸಿ ಮಾಡಲಾಯಿತು.

ಬೆಳಗಾವಿ ತಾಲೂಕಿನ ಮಾಸ್ತಮರಡಿ ಗ್ರಾಮದ ನಿವಾಸಿ ಕಟ್ಟಡ ಕಾರ್ಮಿಕ ರಾಜು ಮಲ್ಲಪ್ಪ ಪರಂಡೆ (43) ಅವರು ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮನೆಯಲ್ಲಿ ಆಕಸ್ಮಿಕವಾಗಿ ಬಿದ್ದು ತೀವ್ರ ಗಾಯಗೊಂಡಿದ್ದ ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಗ್ರಾಮದ ಬಸವ್ವ ಕರಿಕಟ್ಟಿ (40) ಎಂಬ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೇ ಮೆದುಳು ನಿಷ್ಕ್ರೀಯಗೊಂಡು ತನ್ನ ಕಾರ್ಯವನ್ನು ನಿಲ್ಲಿಸಿದ್ದರು. ಆದರೆ ಉಳಿದ ಅಂಗಾಂಗಗಳು ಕಾರ್ಯನಿರ್ವಹಿಸುತ್ತಿದ್ದವು. ಮೆದುಳು ನಿಷ್ಕ್ರಿಯಗೊಂಡ ಯುವಕನ ಪತ್ನಿ, ತಾಯಿ ಹಾಗೂ ಕುಟುಂಬ ಸದಸ್ಯರಿಗೆ ಆಪ್ತಸಮಾಲೋಚನೆ ಮಾಡಿ, ನೀವು ನೀಡುವ ಅಂಗಾಂಗಗಳಿಂದ ಇನ್ನೊಬ್ಬರ ಜೀವ ಉಳಿಯುತ್ತದೆ ಎಂದು ಹೇಳಿದಾಗ, ಸ್ವಇಚ್ಚೆಯಿಂದ ಅಂಗಾಂಗಗಳನ್ನು ದಾನ ಮಾಡಲು ಒಪ್ಪಿದರು.
ಮಹಿಳೆಯ ಹೃದಯ ಮತ್ತು ಲೀವರ ಅನ್ನು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೆ ಹಸಿರು ಪಥದ ಮೂಲಕ ತೆಗೆದುಕೊಂಡು ಬಂದು ಕಸಿ ಮಾಡಿದರೆ, ಒಂದು ಕಿಡ್ನಿಯನ್ನು ಎಸಡಿಎಂ ಆಸ್ಪತ್ರೆ ಹಾಗೂ ಸುಚಿರಾಯು ಆಸ್ಪತ್ರೆಯಲ್ಲಿದ್ದ ರೋಗಿಗೆ ಕಸಿ ಮಾಡಲಾಯಿತು. ಮೃತಪಟ್ಟರೂ ಇನ್ನೊಬ್ಬರ ಜೀವ ಉಳಿಸಿ ಸಾರ್ಥಕತೆ ಮೆರೆದರು. ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸ ಇಲಾಖೆಯ ಕಾರ್ಯ ಅತ್ಯಂತ ಶ್ಲಾಘನೀಯವಾದ್ದು. ಅತ್ಯಂತ ಜನಸಂದಣಿ ಹಾಗೂ ಸಂಚಾರ ದಟ್ಟಣೆಯಿಂದ ಕೂಡಿದ ರಸ್ತೆಯಲ್ಲಿ ಗ್ರೀನ್ ಕಾರಿಡಾರ ನಿರ್ಮಿಸಿ ಅಂಗಾಂಗಗಳನ್ನು ಶೀಘ್ರ ಸ್ಥಳಾಂತರಿಸಲು ಅವಕಾಶ ಕಲ್ಪಿಸಿಕೊಟ್ಟರು. ಮೃತರು ತಂದೆ, ತಾಯಿ, ಸಹೋದರ ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
ಅಂಗಾಂಗಗಳನ್ನು ದಾನ ಮಾಡಿದ ವ್ಯಕ್ತಿ ಹಾಗೂ ಆತನ ಕುಟುಂಬ ಸದಸ್ಯರ ಕಾರ್ಯವನ್ನು ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಹಾಗೂ ಆಡಳಿತ ಮಂಡಳಿ ಸದಸ್ಯರು, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. (ಕರ್ನಲ್) ಎಂ.ದಯಾನಂದ ಅಭಿನಂದಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ