Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ಸೋಮವಾರ (ಮಾರ್ಚ್‌ 24) ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್ 25 ರವರೆಗೆ ರಾಜ್ಯಾದ್ಯಂತ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಗುಡುಗು, ಮಿಂಚು ಮತ್ತು ಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಗಾಳಿಯ ವೇಗ ಗಂಟೆಗೆ 30-50 ಕಿಮೀ ತಲುಪುವ ಸಾಧ್ಯತೆ ಇದ್ದು, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದ್ದು, ಅಲ್ಲಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಿದೆ.
ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳು
ಮುಂದಿನ 24 ಗಂಟೆ ಮೋಡ ಕವಿದ ಆಕಾಶವಿರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ .ಕೆಲವೊಮ್ಮೆ ಮೇಲೆ ಗಾಳಿ ಬಲವಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30°C ಮತ್ತು ಕನಿಷ್ಠ 20°C ಆಗುವ ಸಾಧ್ಯತೆ ಇದೆ.

ರಾಜ್ಯದ ವಿವಿಧೆಡೆ ಮೂರ್ನಾಲ್ಕು ದಿನ ಮಳೆ
ಮಾರ್ಚ್‌ 24ರಂದು ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ.
ಮಾರ್ಚ್‌ 25ರಂದು ಚಿಕ್ಕಮಗಳೂರು, ಕೊಡಗು, ಹಾಸನ, ಮಂಡ್ಯ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ, ಮುಖ್ಯವಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಮಾ.26ರಂದು ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ