Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಧಾರವಾಡದಲ್ಲಿ ಯುವಕರ ಗಲಾಟೆ: ಮೂವರಿಗೆ ಗಾಯ

ಧಾರವಾಡ: ನಗರದ ಹಳೇ ಎಪಿಎಂಸಿ ಆವರಣದಲ್ಲಿ ಜಾನುವಾರು ವಿಚಾರದಲ್ಲಿ ಹಿಂದೂ-ಮುಸ್ಲಿಂ ಯುವಕರ ನಡುವೆ ಶುಕ್ರವಾರ ಗಲಾಟೆ ನಡೆದಿದೆ. ಮೂವರಿಗೆ ಪೆಟ್ಟಾಗಿದೆ.

ಧಾರವಾಡ ಹಳೇ ಎಪಿಎಂಸಿಯಲ್ಲಿ ಅಕ್ರಮವಾಗಿ ಕಟ್ಟಿದ್ದ ಹಸುಗಳನ್ನು ರಕ್ಷಣೆ ಮಾಡಲು ಹೋಗಿದ್ದ ಸೋಮಶೇಖರ ಚನ್ನಶೆಟ್ಟಿ, ಇತರರ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ಮಾಡಿದವರನ್ನು ಶೀಘ್ರವಾಗಿ ಬಂಧಿಸಬೇಕು. ತನಿಖೆ ನಡೆಸಿ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು.‌

ಸೋಮಶೇಖರ ಚನ್ನಶೆಟ್ಟಿ, ಗಣೇಶ, ಅಮಿತ ಎಂಬವರಿಗೆ ಪೆಟ್ಟಾಗಿದೆ. ಚಿಕಿತ್ಸೆ ಪಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆ ನಡೆಸಿರುವ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಧಾರವಾಡ ಉಪ ನಗರ ಪೊಲೀಸ್ ಠಾಣೆ ಎದುರು ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಗೋವು ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಆದರೂ ಗೋವು ಹತ್ಯೆ ಮಾಡಲು ಗೋವುಗಳನ್ನು ಸಾಗಾಟ ಮಾಡಲಾಗುತ್ತಿದೆ. ಪೊಲೀಸರು ಕ್ರಮ ಕೈಗೊಂಡಿಲ್ಲ' ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರು ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು.

ಶಾಸಕ ಅರವಿಂದ ಬೆಲ್ಲದ ಅವರು, ಸೋಮಶೇಖರ ಚೆನ್ನಶಟ್ಟಿ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ. ಎಫ್ಐಆರ್ ದಾಖಲಿಸಿಕೊಂಡು ಶೀಘ್ರವಾಗಿ ಬಂಧಿಸಬೇಕು. ಕ್ರಮ ವಹಿಸದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರಿಗೆ ತಿಳಿಸಿದರು. ನಂತರ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ