Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2 ದಿನ ಗುಡುಗು ಸಹಿತ ಮಳೆ ; ಮುನ್ಸೂಚನೆ

 

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾನುವಾರದಿಂದ ಮೇ 26 ಹಾಗೂ 27ರಂದು ಎರಡು ದಿನ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರು ಸೇರಿ ಇತರ ಹಲವು ಜಿಲ್ಲೆಗಳಲ್ಲಿಯೂ ಭಾಗಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯೆತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 26ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಬೀಳಲಿದೆ. ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆ ಮಳೆ ಸುರಿಯಲಿದೆ.

ಬೆಂಗಳೂರು ನಗರ, ರಾಮನಗರ, ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಆಗುವ ಸಾಧ್ಯತೆಯಿದೆ. ಈ ವೇಳೆ ಗಾಳಿಯ ವೇಗವು 40 ರಿಂದ 50 ಕಿಲೋ ಮಿಟರ್‌ ಇರಲಿದೆ ಎಂದು ತಿಳಿಸಲಾಗಿದೆ. ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು,ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಕೂಡ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ದಕ್ಷಿಣ ಭಾಗದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆ ಬೀಳುವ ನಿರೀಕ್ಷೆಯಿದೆ ಎಂದು ಹೇಳಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ