Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಮಳೆ ಕಡಿಮೆಯಾಗುತ್ತಿದ್ದರೂ ಮಂಗಳವಾರ (ನವೆಂಬರ್‌ 4) ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಕೆಲವೆಡ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿಲ್ಲ. ಉತ್ತರ ಒಳನಾಡಿನ ಬೀದರ, ಕಲಬುರ್ಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು (ನಗರ/ಗ್ರಾಮಾಂತರ) ಜಿಲ್ಲೆಗಳ ಕೆಲವೆಡೆ ಹಗುರ ಮಳೆ ಸುರಿಯಲಿದೆ.

ನವೆಂಬರ್‌ 5ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳು ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ನವೆಂಬರ್‌ 6ರಂದು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳು ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ