Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇಂದು ಭಾರತ-ಒಮಾನ್ ಕ್ರಿಕೆಟ್ ಪಂದ್ಯ

ಅಬುದಾಬಿ : 'ಎ' ಗುಂಪಿನ ಕೊನೆಯ ಪಂದ್ಯ ಇಂದು ನಡೆಯಲಿದ್ದು, ಒಮಾನ್ ಸವಾಲನ್ನು ಭಾರತ ಎದುರಿಸಲಿದೆ. ಈ ಪಂದ್ಯವನ್ನು ಗೆದ್ದು ಗುಂಪಿನ ಅಗ್ರಸ್ಥಾನಿಯಾಗಿ ಭಾರತ ಸೂಪರ್ ಫೋರ್‌ಗೆ ಲಗ್ಗೆ ಇಡುವುದು ಬಹುತೇಕ ಖಚಿತವೆನಿಸಿದೆ.

ಏಷ್ಯಾ ಕಪ್‌ ಟಿ20 ಪಂದ್ಯಾವಳಿಯಲ್ಲಿ ಈಗಾಗಲೇ ಸೂಪರ್‌-4ಗೆ ಪ್ರವೇಶಿಸಿರುವ ಭಾರತ "ಎ' ಗುಂಪಿನ ತನ್ನ ಕೊನೆಯ ಪಂದ್ಯದಲ್ಲಿ ಶುಕ್ರವಾರ ಅಬುಧಾಬಿಯಲ್ಲಿ ದುರ್ಬಲ ಒಮಾನ್‌ ತಂಡವನ್ನು ಎದುರುಗೊಳ್ಳಲಿದೆ. ಒಮಾನ್‌ ಈಗಾಗಲೇ ಕೂಟದಿಂದ ಹೊರಬಿದ್ದಿರುವುದರಿಂದ ಎರಡೂ ತಂಡಗಳ ಪಾಲಿಗೂ ಇದೊಂದು ಔಪಚಾರಿಕ ಪಂದ್ಯವಾಗಿರಲಿದೆ.

ಪಂದ್ಯಾವಳಿಯಲ್ಲಿ ಆಡಿರುವ 2 ಪಂದ್ಯಗಳಲ್ಲಿ ಭಾರತ ಕ್ರಮವಾಗಿ ಯುಎಇ ಮತ್ತು ಪಾಕಿಸ್ಥಾನ ವಿರುದ್ಧ ಗೆದ್ದಿದೆ. ಹೀಗಾಗಿ ಶುಕ್ರವಾರದ ಪಂದ್ಯವನ್ನೂ ಗೆದ್ದು ಮುನ್ನುಗ್ಗುವ ವಿಶ್ವಾಸದಲ್ಲಿ ಸೂರ್ಯಕುಮಾರ್‌ ಯಾದವ್‌ ನೇತೃತ್ವದ ಭಾರತ ತಂಡವಿದೆ. ಇತ್ತ ಒಮಾನ್‌ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ಥಾನ ವಿರುದ್ಧ ಸೋತಿತ್ತು. ಮುಂದಿನ ಪಂದ್ಯದಲ್ಲಿ ಯುಎಇಗೆ ಶರಣಾಗಿತ್ತು.

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಭಾರತ ಮತ್ತು ಒಮಾನ್‌ ತಂಡಗಳು ಎಂದಿಗೂ ಮುಖಾಮುಖೀ ಆಗಿದ್ದಿಲ್ಲ. ಹೀಗಾಗಿ ಇದು ಇತ್ತಂಡಗಳ ನಡುವಿನ ಮೊದಲ ಪಂದ್ಯಕ್ಕೆ ಸಾಕ್ಷಿಯಾಗಲಿದೆ.

ಇದು ಔಪಚಾರಿಕ ಪಂದ್ಯವಾಗಿರುವ ಕಾರಣ ಭಾರತೀಯ ತಂಡದಲ್ಲಿ ಸಣ್ಣಪುಟ್ಟ ಬದಲಾವಣೆಗಳು ನಿರೀಕ್ಷಿತ. ಮುಖ್ಯವಾಗಿ ತಂಡದ ಪ್ರಮುಖ ವೇಗಿ ಜಸ್‌ಪ್ರೀತ್‌ ಬುಮ್ರಾ ಪಂದ್ಯದಿಂದ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ. ಇವರ ಬದಲಿಗೆ ಅರ್ಶದೀಪ್‌ ಸಿಂಗ್‌ ಕಣಕ್ಕಿಳಿಯುವ ನಿರೀಕ್ಷೆಯಿದೆ.

ಜತೀಂದರ್‌ ಸಿಂಗ್‌ ನಾಯಕತ್ವದ ಒಮಾನ್‌ ತಂಡದಲ್ಲಿ ಹೇಳಿಕೊಳ್ಳುವ ಬ್ಯಾಟರ್‌ಗಳಿಲ್ಲ. ಆದರೆ ಬೌಲರ್‌ಗಳ ಬಣ ತಕ್ಕಮಟ್ಟಿಗೆ ಚೆನ್ನಾಗಿದೆ. ಮಧ್ಯಮ ವೇಗಿ ಜುನೈದ್‌ ಸಿದ್ದಿಕ್‌, ಹೈದರ್‌ ಅಲಿ, ಮೊಹಮ್ಮದ್‌ ಜವಾದುಲ್ಲ ಇವರೆಲ್ಲ ಪಂದ್ಯದ ವೇಳೆ ಗಮನ ಸೆಳೆಯಬಲ್ಲರು.

ಬಿ ಗುಂಪಿನಿಂದ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಮತ್ತು 'ಎ' ಗುಂಪಿನಿಂದ ಭಾರತ ಹಾಗೂ ಪಾಕಿಸ್ತಾನ ತಂಡಗಳು ತೇರ್ಗಡೆ ಹೊಂದಿವೆ.

'ಬಿ' ಗುಂಪಿನ ಎಲ್ಲ ಪಂದ್ಯಗಳು ಕೊನೆಗೊಂಡಿವೆ. ಶ್ರೀಲಂಕಾ ವಿರುದ್ಧ ಗುರುವಾರ ನಡೆದ ಗೆಲ್ಲಲೇಬೇಕಾದ ಪಂದ್ಯದಲ್ಲಿ ಸೋಲನುಭವಿಸಿರುವ ಅಫ್ಘಾನಿಸ್ತಾನ ಕೂಟದಿಂದಲೇ ನಿರ್ಗಮಿಸಿದೆ.

ಎಲ್ಲ ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಶ್ರೀಲಂಕಾ, ಒಟ್ಟು ಆರು ಅಂಕ ಗಳಿಸಿ 'ಬಿ' ಗುಂಪಿನ ಅಗ್ರಸ್ಥಾನಿಯಾಗಿ ಸೂಪರ್ ಫೋರ್ ಹಂತಕ್ಕೆ ಲಗ್ಗೆ ಇಟ್ಟಿದೆ.

ಬಾಂಗ್ಲಾದೇಶ ಮೂರು ಪಂದ್ಯಗಳಲ್ಲಿ ಎರಡು ಗೆಲುವು ಹಾಗೂ ಒಂದು ಸೋಲಿನೊಂದಿಗೆ ನಾಲ್ಕು ಅಂಕಗಳೊಂದಿಗೆ ಎರಡನೇ ಸ್ಥಾನಿಯಾಗಿ ಮುನ್ನಡೆದಿದೆ.

ಈ ಗುಂಪಿನಲ್ಲಿ ಅಫ್ಘಾನಿಸ್ತಾನದೊಂದಿಗೆ ಎಲ್ಲ ಮೂರು ಪಂದ್ಯಗಳಲ್ಲಿ ಮುಗ್ಗರಿಸಿರುವ ಹಾಂಕ್‌ಕಾಂಗ್ ಸಹ ಹೊರಬಿದ್ದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ