Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಟೊಮೆಟೊ ₹100, ಬೀನ್ಸ್ ₹200 ತರಕಾರಿಗಳ ಬೆಲೆ ಏರಿಕೆಗೆ ಜನ ತತ್ತರ

ಬೆಂಗಳೂರು: ಮಳೆ ವ್ಯತ್ಯಯವಾಗಿರುವುದರಿಂದ ರಾಜ್ಯದಲ್ಲಿ ತರಕಾರಿಗಳ ಪೂರೈಕೆ ಕಡಿಮೆಯಾಗಿದೆ. ಬಹುತೇಕ ಎಲ್ಲ ತರಕಾರಿ ಬೆಲೆ ತೀವ್ರ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಏರಿಕೆ 2 ತಿಂಗಳಿನಿಂದಲೇ ಆಗುತ್ತಿದೆ. ಟೊಮೆಟೋ ಕೇಜಿಗೆ 100 ರು., ಬೀನ್ಸ್ 200 ರು., ಕ್ಯಾಪ್ತಿಕಂ 110 ರು. ದಾಟಿವೆ.

ಟೊಮೆಟೊ ದರದಲ್ಲಿ ಆಗಾಗ ಏರಿಳಿತ ಕಂಡು ಬರುತ್ತಿದೆ. ಇದೀಗ ಮತ್ತೆ ಟೊಮೊಟೊ ದರ ಗಗನಮುಖಿಯಾಗಿದೆ. ಕೆಲವೊಮ್ಮೆ ಟೊಮ್ಯಾಟೊ ಒಂದು ರೂ.ಗೂ ವ್ಯಾಪಾರವಾಗುತ್ತಿಲ್ಲ. ಆ ಸಂದರ್ಭದಲ್ಲಿ ಟೊಮೆಟೊ ಬೆಳೆಗಾರರು ಟನ್ ಗಟ್ಟಲೇ ಟೊಮೆಟೊವನ್ನು ರಸ್ತೆಗೆ ಚೆಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಾರೆ. ಆದರೆ ಇದೀಗ ಟೊಮೇಟೊಗೆ ಚಿನ್ನದ ಬೆಲೆ ಬಂದಿದೆ. ಇದರಿಂದ ಗ್ರಾಹಕರು ಪರಿತಪಿಸುವಂತಾಗಿದೆ.

ಹವಾಮಾನ ವೈಪರಿತ್ಯದಿಂದ ಟೊಮೆಟೋ ಇಳುವರಿ ಕಡಿಮೆಯಾಗಿದೆ. ಏಷ್ಯಾ ಖಂಡದಲ್ಲೇ ಅತಿ ದೊಡ್ಡ ಟೊಮೆಟೋ ಮಾರುಕಟ್ಟೆಯಾಗಿರುವ ಕೋಲಾರ ಎಪಿಎಂಸಿಯಲ್ಲಿ ಟೊಮೆಟೋ ಸೇರಿ ಇತರ ತರಕಾರಿ ವಹಿವಾಟು ಹೆಚ್ಚಿದೆ. ಪ್ರಸ್ತುತವಾಗಿ ಇನ್ನಿತರ ತರಕಾರಿಗಳಿಗಿಂತ ಟೊಮೆಟೋಗೆ ಬೇಡಿಕೆ ಹೆಚ್ಚಾಗಿದೆ.

ಜಿಲ್ಲೆಯಲ್ಲಿ ಈಗಾಗಲೇ ಸುಗ್ಗಿ ಪ್ರಾರಂಭವಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಆವಕ ತೀರ ಕಡಿಮೆಯಾಗಿದೆ. ಸುಗ್ಗಿಯಲ್ಲಿ ಪ್ರತಿದಿನ 25,೦೦೦ ಕ್ವಿಂಟಾಲ್‌ಗೂ ಆಧಿಕ ಆವಕ ಆಗುತ್ತದೆ, ಆದರೆ ಇಳುವರಿ ಕಡಿಮೆಯಾಗಿರುವುದರಿಂದ ಕೇವಲ 10,500 ಕ್ವಿಂಟಾಲ್ ಆವಕ ಆಗುತ್ತಿದೆ. ಇದರಿಂದಾಗಿ 15 ಕೆಜಿ ಬಾಕ್ಸ್ 400 ಯಿಂದ 700 ರೂ.ವರೆಗೆ ಮಾರಾಟವಾಗುತ್ತಿದೆ.

ತೀವ್ರ ಬರದಿಂದ ಟೊಮೆಟೋ ಬೆಳೆದವರ ಸಂಖ್ಯೆ ಕಡಿಮೆಯಾಗಿದೆ. ಕೆರೆಗಳಲ್ಲಿ ನೀರು ಬತ್ತಿದ ಕಾರಣ ಕೊಳವೆ ಬಾವಿಗಳಲ್ಲೂ ಸಹ ನೀರಿನ ಪ್ರಮಾಣ ಕುಸಿದಿದ್ದರಿಂದ ಟೊಮೆಟೋ ನಾಟಿ ಮಾಡುವುದು ಕುಸಿದಿದೆ, ಬರಗಾಲದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿ ಬೆಳೆ ಸಂರಕ್ಷಣೆ ಮಾಡುವುದು ಬೆಳೆಗಾರರಿಗೆ ಸವಾಲಿನ ಕೆಲಸವಾಗಿತ್ತು. ಆಗ ನೀರಿನ ಕೊರತೆ ಇತ್ತು ಎಂಬುದು ಬಿಟ್ಟರೆ ರೋಗಗಳ ಬಾಧೆ ಅಷ್ಟೇನು ಇರಲಿಲ್ಲ.

ಆದರೆ ನೀರಿನ ಮಟ್ಟದಲ್ಲಿ ಇಳುವರಿ ಸಿಗುತ್ತಿರಲಿಲ್ಲ. ಈಗ ಜಿಲ್ಲೆಯಲ್ಲಿ 10/15 ದಿನಗಳಲ್ಲಿ ಹವಾಮಾನ ವೈಫರೀತ್ಯದಿಂದ ಟೊಮೆಟೋ ಬೆಳೆ ಸಂರಸುವುದು ಕಷ್ಟವಾಗುತ್ತಿದೆ. ಮೋಡ ಮುಸುಕಿನ ವಾತಾವರಣದಿಂದ ಬೆಳೆಗೆ ಅಂಗಮಾರಿ, ಎಲೆ ಮುದುಡು ರೋಗ, ಕಾಂಡ ಕೋರಕ, ನುಸಿ ರೋಗ ಬಾಧೆ ಬಾಧಿಸುತ್ತಿದೆ. ಎಷ್ಟೇ ಔಷಧ ಸಿಂಪಡಣೆ ಮಾಡಿದರೂ ರೋಗ ಹತೋಟಿಗೆ ಬರುತ್ತಿಲ್ಲ. ಲಭ್ಯವಿರುವ ಸಾಲನ್ನು ಕೊಯ್ಲು ಮಾಡಿಕೊಂಡು ಉಳಿದದ್ದನ್ನು ಹಾಗೆಯೇ ಬಿಡುವ ಪರಿಸ್ಥಿತಿ ಎದುರಾಗಿದೆ.

ಜಿಲ್ಲೆಯಲ್ಲಿ ಒಟ್ಟು96,805 ಹೆಕ್ಟೇರ್ ತೋಟಗಾರಿಕೆ ಪ್ರದೇಶವಿದ್ದು, ಆ ಪೈಕಿ 48,629 ಹೆಕ್ಟೇರ್ ಪ್ರದೇಶದಲ್ಲಿ ಹಣ್ಣಿನ ಬೆಳೆಗಳನ್ನು ಹಾಗೂ 40,571ಹೆಕ್ಟೇರ್ ಪ್ರದೇಶದಲ್ಲಿ ತರಕಾರಿ ಬೆಳೆ ಬೆಳೆಯುತ್ತಾರೆ. ಜಿಲ್ಲೆಯ ಬಹುತೇಕ ರೈತರು ಟೊಮೆಟೋ ಬೆಳೆಯನ್ನು ವಾಣಿಜ್ಯ ಬೆಳೆಯನ್ನಾಗಿಸಿಕೊಂಡಿದ್ದು, ಸುಗ್ಗಿ ಹೊರತುಪಡಿಸಿ ಬೇರೆ ಸಮಯದಲ್ಲೂ ಟೊಮೆಟೋ ಬೆಳೆಯುವ ರೈತರಿದ್ದಾರೆ. ಫೆಬ್ರವರಿ, ಮಾರ್ಚ್‌ನಲ್ಲಿ ಟೊಮೆಟೋ ಸಸಿ ನಾಟಿ ಮಾಡಿದ್ದರೆ ಮೇ ತಿಂಗಳಿನಲ್ಲಿ ಫಸಲು ಕೊಯ್ಲಿಗೆ ಬರುತ್ತಿತ್ತು.

ಬಿಸಿಲಿನ ತಾಪಮಾನ ಹೆಚ್ಚಾಗಿದ್ದ ಕಾರಣ ನಾಟಿ ಮಾಡಿದ ಸಸಿಗಳನ್ನು ರಕ್ಷಣೆ ಮಾಡಲಾಗದೆ ಬೆಳೆಗಾರರು ಕಂಗಾಲಾಗಿದ್ದ ಪರಿಣಾಮ ಆವಕ ಕಡಿಮೆಯಾಗಿದೆ. ಅಂತೆಯೇ, ಸ್ಥಿತಿವಂತ ರೈತರು ನೇಟ್ ಹೌಸ್ ಹಾಗೂ ಪಾಲಿ ಹೌಸ್‌ನಲ್ಲಿ ಬೆಳೆ ತೆಗೆದಿರುವ ರೈತರಿಗೆ ಮಾತ್ರ ಲಾಭ ಸಿಗುತ್ತಿದೆ. ಸತತವಾಗಿ ಮೋಡ ಮುಸುಕಿನ ವಾತಾವರಣ ಇರುವುದರಿಂದ ಇದು ಟೊಮೆಟೋ ಬೆಳೆಯ ಮೇಲೆ ಪರಿಣಾಮ ಬೀರುತ್ತಿದೆ. ಬಿಳಿ ನೋಣ, ಅಂಗಮಾರಿ ರೋಗ ಹರಡುವ ಲಕ್ಷಣಗಳು ಹೆಚ್ಚಾಗಿದ್ದು, ರೋಗ ನಿಯಂತ್ರಣ ಮಾಡುವುದು ರೈತರಿಗೆ ಸವಾಲಾಗಿದೆ.

ಸಿಎಂಆರ್ ಮಂಡಿ ಮಾಲೀಕ ಶ್ರೀನಾಥ್‌ ಹೇಳುವಂತೆ, ಮಾರ್ಚ್ ಹಾಗೂ ಮೇ ತಿಂಗಳಲ್ಲಿ 18ರಿಂದ 28 ತಾಪಮಾನ ಇದ್ದರೆ ಮಾತ್ರ ಟೊಮೆಟೋ ಬೆಳೆ ಬೆಳೆಯಲು ಸಾಧ್ಯ, ಆದರೆ ಈ ಬಾರಿ 37 ರಿಂದ 38 ಡಿಗ್ರಿ ತಾಪಮಾನ ಜೊತೆಗೆ ನೀರಿನ ಕೊರತೆಯಿಂದ ಟೊಮೆಟೋ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ