Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹೊಸ ಶಾಸಕರಿಗೆ ಇಂದಿನಿಂದ ತರಬೇತಿ

 

ಬೆಂಗಳೂರು:
16ನೇ ವಿಧಾನ‌ಸಭೆಗೆ ನೂತನವಾಗಿ ಆಯ್ಕೆಯಾಗಿರುವ ಶಾಸಕರಿಗೆ ಸಂಸದೀಯ ಕಲಾಪದ ಕುರಿತು ಅರಿವು ಮೂಡಿಸಲು ನೆಲಮಂಗಲದಲ್ಲಿರುವ ‘ಕ್ಷೇಮವನ’ದಲ್ಲಿ (ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಆ್ಯಂಡ್‌ ಯೋಗಿಕ್ ಸೈನ್ಸಸ್) ಸೋಮವಾರದಿಂದ (ಜೂನ್ 26) ಮೂರು ದಿನ ತರಬೇತಿ ಶಿಬಿರ ನಡೆಯಲಿದೆ.

ಶಿಬಿರವನ್ನು 26ರಂದು ಬೆಳಿಗ್ಗೆ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ ಅಧ್ಯಕ್ಷತೆ ವಹಿಸುವರು. ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ‌.ಜೆ.ಜಾರ್ಜ್, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಉಪಸ್ಥಿತರಿರಲಿದ್ದಾರೆ.

ಮೂರೂ ದಿನ ಬೆಳಿಗ್ಗೆ 6ರಿಂದ 9ರವರೆಗೆ ಆರೋಗ್ಯಕ್ಕೆ ಸಂಬಂಧಿಸಿದ ಚಟುವಟಿಕೆ ನಡೆಯಲಿದೆ. 10ರಿಂದ ಸಂಜೆಯವರೆಗೆ ಹಿರಿಯ ಸದಸ್ಯರು ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಿದ್ದಾರೆ. ಕಲಾಪದಲ್ಲಿ ಭಾಗವಹಿಸುವಿಕೆ, ನಿಲುವಳಿ ಸೂಚನೆ, ನಿಯಮ-69, ವಿಶ್ವಾಸ ಮತ್ತು ಅವಿಶ್ವಾಸ ನಿರ್ಣಯ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾರ್ಗದರ್ಶನ ನೀಡಲಿದ್ದಾರೆ.

ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಾಸನ ರಚನೆ ಹಾಗೂ ಅದರಲ್ಲಿ ಸದಸ್ಯರುಗಳ ಭಾಗವಹಿಸುವಿಕೆ ಮತ್ತು ಉಭಯ ಸದನಗಳ ಸಂಬಂಧ ಕುರಿತು ಮಾತನಾಡಲಿದ್ದಾರೆ. ಟಿ.ಬಿ.ಜಯಚಂದ್ರ ಅವರು ಶಾಸಕರ ಕರ್ತವ್ಯಗಳು, ಜವಾಬ್ದಾರಿ ಮತ್ತು ಹಕ್ಕುಬಾಧ್ಯತೆಗಳ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.‌ ಪರಿಷತ್‌ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಅವರು ಸದಸ್ಯರು ಅಳವಡಿಸಿಕೊಳ್ಳಬೇಕಾದ ನೀತಿ ನಿಯಮಗಳು, ಪಾಲಿಸಬೇಕಾದ ನಿಯಮಗಳು ಸಂಸದೀಯ ಭಾಷೆಯ ಬಳಕೆ ಮತ್ತು ಜನ ಮೆಚ್ಚಿದ ಶಾಸಕನಾಗುವುದು ಹೇಗೆ ಎಂದು ತಿಳಿಸಿಕೊಡಲಿದ್ದಾರೆ. ಶಾಸನ ಸಭೆಯಲ್ಲಿ ಕರ್ತವ್ಯದ ಹಾಸ್ಯ ಭರಿತ ನಿರ್ವಹಣೆ ಕುರಿತು ‘ಮುಖ್ಯಮಂತ್ರಿ’ ಚಂದ್ರು‌ ತಿಳಿಸಿಕೊಡಲಿದ್ದಾರೆ. ಬಿ.ಎಸ್‌.ಯಡಿಯೂರಪ್ಪ, ಎಚ್‌.ಡಿ.ಕುಮಾರಸ್ವಾಮಿ ಸಂವಾದ ನಡೆಸಲಿದ್ದಾರೆ.

ಮೊದಲ ದಿನ ಸಂಜೆ ಬ್ರಹ್ಮಕುಮಾರೀಸ್‌ ಸಂಸ್ಥೆಯ ಬಿ.ಕೆ.ವೀಣಾ ಮತ್ತು ಬಿ.ಕೆ.ಭುವನೇಶ್ವರಿ ‘ಹಿತವಚನ’ ನೀಡಲಿದ್ದಾರೆ. ‘ಸಾಮರಸ್ಯ ಸಮಾಜ’ ವಿಷಯದ ಕುರಿತು 27ರಂದು ಸಂಜೆ ಡಿ.ವೀರೇಂದ್ರ ಹೆಗ್ಗಡೆ, ಕೊನೆಯ ದಿನ ಬೆಳಿಗ್ಗೆ ‘ಜನಪ್ರತಿನಿಧಿ ಮತ್ತು ಜನರ ಮಧ್ಯೆ ಸಂಬಂಧ/ ಬಾಂಧವ್ಯವನ್ನು ವೃದ್ಧಿಗೊಳಿಸುವುದು’ ವಿಷಯದ ಕುರಿತು ಜಮಾತೆ ಇಸ್ಲಾಮಿ ಹಿಂದ್‌ನ ಮಹಮ್ಮದ್‌ ಕುಂಞಿ ಮಾತನಾಡಲಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ