ಕಲಬುರಗಿ: ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ (ಜೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಐಎಎಸ್ ಅಧಿಕಾರಿ ಶಶಿಧರ ಕುರೇರ ಅವರನ್ನು ವರ್ಗಾವಣೆಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
ಕುರೇರ ಅವರು ಪ್ರಸ್ತುತ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದಾರೆ.
