Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಮನೆಗಳ್ಳತನ ಇಬ್ಬರ ಬಂಧನ

ಬೆಳಗಾವಿ: ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣಗಳನ್ನು ಭೇದಿಸಿರುವ ಬೆಳಗಾವಿ ಪೊಲೀಸರು ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ.

ಕಿಣಿಯೇ ಗ್ರಾಮದ, ಹಾಲಿ ಗಣೇಶಪುರದ ಚೇತನ್ ಮಾರುತಿ ಶಿಂದೆ( 26 )ಮತ್ತು ಅನಗೋಳ ರಘುನಾಥಪೇಟೆಯ ಕರಣ್ ಉತ್ತಮ್ ಮುತಗೇಕರ(27) ಬಂಧಿತರು. ಇವರ ಮೇಲೆ ಖಡೇ ಬಜಾರ್, ಕ್ಯಾಂಪ್ ಮತ್ತು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣ ದಾಖಲಾಗಿತ್ತು.

ಪೊಲೀಸ್ ಆಯುಕ್ತರು ಬೆಳಗಾವಿ ನಗರ, ಉಪ ಪೊಲೀಸ್ ಆಯುಕ್ತರು (ಅ&ಸಂ) ಮತ್ತು ಸಹಾಯಕ ಪೊಲೀಸ್ ಆಯುಕ್ತರು ಖಡೇಬಜಾರ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಖಡೇಬಜಾರ ಪೊಲೀಸ್ ಠಾಣೆ ಇನ್ಸಪೇಕ್ಟರ್ ಹಾಗೂ ಕ್ಯಾಂಪ್ ಪೊಲೀಸ್ ಇನ್ಸಪೇಕ್ಟರ ರವರ ನೇತೃತ್ವದ ಅಧಿಕಾರಿ ಮತ್ತು ಸಿಬ್ಬಂದಿ ಜನರ ತಂಡವು ದಿನಾಂಕ: 09/07/2024 ರಂದು ಆರೋಪಿತರನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಒಟ್ಟು ಮೂರು ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, 1) 77 ಗ್ರಾಂ ಬಂಗಾರದ ಆಭರಣಗಳು, ಅ.ಕಿ: 5,54,400/-ರೂ, 2) 200 ಗ್ರಾಂ ಬೆಳ್ಳಿಯ ಆಭರಣಗಳು, ಅ.ಕಿ: 20,000/-ರೂ, 3) ಲ್ಯಾಪಟಾಪ್ ಒಂದು, ಅ.ಕಿ: 20,000/- ರೂ, 4) ಮೊಬೈಲ್ ಒಂದು, ಅ.ಕಿ: 3,000/- ರೂ,5) ನಗದು ಹಣ, 10,000/- ರೂ. ಹೀಗೆ ಒಟ್ಟು 6,07,000/-ರೂ ಕಿಮ್ಮತ್ತಿನವುಗಳನ್ನು ವಶಪಡಿಸಿಕೊಂಡಿದ್ದು ಪ್ರಕರಣದ ತನಿಖೆಯನ್ನು ಮುಂದುವರಿಸಿರುತ್ತಾರೆ.

ಸದರಿ ಮನೆಗಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಖಡೇಬಜಾರ ಉಪ ವಿಭಾಗದ ಎಸಿಪಿ ರವರಾದ ಶ್ರೀ ಶೇಖರಪ್ಪ ಎಚ್, ರವರ ಮಾರ್ಗದರ್ಶನದಲ್ಲಿ ವಿಶೇಷ ಕರ್ತವ್ಯ ನಿರ್ವಹಿಸಿದ ಖಡೇಬಜಾರ ಪೊಲೀಸ್ ಠಾಣೆಯ ಇನ್ಸಪೇಕ್ಟರ ಶ್ರೀ ಡಿ ಪಿ ನಿಂಬಾಳಕರ ಮತ್ತು ಕ್ಯಾಂಪ ಪೊಲೀಸ್ ಠಾಣೆಯ ಇನ್ಸಪೇಕ್ಟರ ಶ್ರೀ ಅಲ್ತಾಫ ಮುಲ್ಲಾ, ಪಿಎಸ್ಐ ಶ್ರೀ ಆನಂದ ಆದಗೊಂಡ ಮತ್ತು ಸಿಬ್ಬಂದಿ ಜನರಾದ ಎ ಬಿ ಶೆಟ್ಟಿ, ಬಿ ಎಸ್ ರುದ್ರಾಪೂರ, ಎಮ್ ವಿ ಅರಳಗುಂಡಿ, ಎಸ್ ಎಚ್ ತಳವಾರ, ಎಸ್ ಬಿ ಬರಗಿ, ಬಿ ಎಲ್ ಸರವಿ, ವಿ ವಾಯ್ ಗುಡಿಮೇತ್ರಿ, ಜಿ ಪಿ ಅಂಬಿ, ಎಸ್ ಬಿ ಭೂಸನೂರಮಠ ಹಾಗೂ ಬೆರಳು ಮುದ್ರ ಘಟಕದ ಸಿಬ್ಬಂದಿ ಜನರು ಮತ್ತು ತಾಂತ್ರಿಕ ವಿಭಾಗದ ಸಿಬ್ಬಂದಿ ರಮೇಶ ಎಸ್ ಅಕ್ಕಿ, ಮಹಾದೇವ ಕಾಶೀದ ರವರನ್ನೊಳಗೊಂಡ ತಂಡ ಕಾರ್ಯನಿರ್ವಹಿಸಿದ್ದು, ಇವರ ಕಾರ್ಯವೈಖರಿಯನ್ನು ಮಾನ್ಯ ಪೊಲೀಸ್ ಆಯುಕ್ತರು ಬೆಳಗಾವಿ ನಗರ, ಉಪ ಪೊಲೀಸ್ ಆಯುಕ್ತರು (ಕಾ&ಸು) ಮತ್ತು ಉಪ ಪೊಲೀಸ್ ಆಯುಕ್ತರು ಪಿ ವಿ ಸ್ನೇಹಾ (ಅ &ಸಂ) ಬೆಳಗಾವಿ ನಗರ ರವರು ಶ್ಲಾಘಿಸಿರುತ್ತಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ