Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ದಾಖಲೆರಹಿತ ಎರಡು ಕೋಟಿ ನಗದು ವಶ

ಬೆಳಗಾವಿ: ಸೂಕ್ತ ದಾಖಲೆಗಳಿಲ್ಲದೇ ಖಾಸಗಿ ಬಸ್ ನಲ್ಲಿ ಸಾಗಿಸಲಾಗುತ್ತಿದ್ದ ಎರಡು ಕೋಟಿ ರೂಪಾಯಿ ನಗದು ಹಣವನ್ನು ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ.ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್(KA 70 1459) ಅನ್ನು ನಸುಕಿನಜಾವ 3.30 ರ ವೇಳೆಗೆ ಚುನಾವಣಾ ಕಾರ್ಯನಿರತ ಎಫ್‌ಎಸ್ ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಜಂಟಿಯಾಗಿ ಪರಿಶೀಲನೆ‌ ನಡೆಸಿದಾಗ ಅಕ್ರಮ ಹಣ ಪತ್ತೆಯಾಗಿರುತ್ತದೆ.ಕೆ.ಪಿ.ಆ್ಯಕ್ಟ್ ಪ್ರಕಾರ ಪ್ರಕರಣವನ್ನು ದಾಖಲಿಸಿಕೊಂಡು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ‌ ಮಾಹಿತಿಯನ್ನು ನೀಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಸುದ್ದಿ ತಿಳಿದ ತಕ್ಷಣವೇ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಅವರು ಭೇಟಿ ಪ್ರಕರಣವನ್ನು ಪರಿಶೀಲಿಸಿದರು.
ಹಿರೇಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿರುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿರುತ್ತದೆ.
ಡಿಸಿಪಿ ಸ್ನೇಹಾ, ಗ್ರಾಮೀಣ ಎಸಿಪಿ ಗೋಪಾಲಕೃಷ್ಣ ಗೌಡರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಚುನಾವಣಾಧಿಕಾರಿ ರಾಜಶೇಖರ್ ಡಂಬಳ, ಸಿಪಿಐ ಅಮರೇಶ್, ಎಫ್.ಎಸ್.ಟಿ. ತಂಡದ ಶಂಭುಲಿಂಗಪ್ಪ, ರಾಜೇಂದ್ರ ಮೊರಬದ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.ಪೊಲೀಸ್ ಹಾಗೂ ಎಫ್.ಎಸ್.ಟಿ. ತಂಡದ ಕಾರ್ಯವನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ ಅವರು ಶ್ಲಾಘಿಸಿದ್ದಾರೆ.

Today morning at 3.30 am canara Pinto bus KA 70 1459; checked at Hirebagewadi toll plaza .Without any documents; 2 Crores seized Hirebagewadi CPI Shri Amaresh and Election FST team head Shri Shambhulingappa and Shri Rajendra Morabad , Shri Gopalkrishna Goudar ACP rural, Rajshekhar Dambal Returning officer Belagavi Rural,Shneha DCP crime and traffic were present during the seizure. A case is being lodged under KP Act under section 98. IT officials have been informed for further necessary action.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ