Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೂತ್ರ ವಿಸರ್ಜನೆ ಪ್ರಕರಣ : ಬುಡಕಟ್ಟು ಕಾರ್ಮಿಕನ ಪಾದ ತೊಳೆದು ಪೂಜಿಸಿದ ಸಿಎಂ

 

ಭೋಪಾಲ್‌:
ಬುಡಕಟ್ಟು ಸಮುದಾಯದ ಕಾರ್ಮಿಕನೊಬ್ಬನ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್‌, ಕಾರ್ಮಿಕ ದಶಮತ್‌ ರಾವತ್‌ ಅವರ ಪಾದ ತೊಳೆಯುವ ಮೂಲಕ ಕ್ಷಮೆಯಾಚಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ‘ನನ್ನ ಮನಸ್ಸು ದುಃಖದಲ್ಲಿದೆ. ದಶಮತ್‌ ಅವರೆ, ನಿಮ್ಮ ದುಃಖವನ್ನು ಹಂಚಿಕೊಳ್ಳಲು ಇದೊಂದು ಸಣ್ಣ ಪ್ರಯತ್ನ. ನಾನು ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ನನಗೆ ಜನರೇ ದೇವರು‘ ಎಂದು ಬರೆದುಕೊಂಡಿದ್ದಾರೆ.

ಕಾರ್ಮಿಕ ದಶಮತ್ ಅವರನ್ನು ಕುರ್ಚಿಯ ಮೇಲೆ ಕೂರಿಸಿ, ಆತನ ಪಾದಗಳನ್ನು ಬಟ್ಟಲ ಮೇಲೆ ಇರಿಸಿ ಪಾದ ತೊಳೆದಿದ್ದಾರೆ. ನಂತರ ಆತನನ್ನು ಭೋಪಾಲ್‌ನ ಸ್ಮಾರ್ಟ್ ಸಿಟಿ ಪಾರ್ಕ್‌ಗೆ ಕರೆದುಕೊಂಡು ಹೋಗಿ ಆತನಿಂದ ಸಸಿ ನೆಟ್ಟಿಸಿದ್ದಾರೆ.

ಏಳು ದಿನಗಳ ಹಿಂದೆ ಮಧ್ಯಪ್ರದೇಶದ ಸಿಂಧಿ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. ಬುಡಕಟ್ಟು ಸಮುದಾಯಕ್ಕೆ ಸೇರಿದ ದಶಮತ್ ರಾವತ್ ಪಾದಾಚಾರಿ ಮಾರ್ಗದಲ್ಲಿ ಕುಳಿತಿದ್ದರು. ಈ ವೇಳೆ ಅಲ್ಲಿಗೆ ಬಂದ ಆರೋಪಿ ಪ್ರವೇಶ್‌ ಶುಕ್ಲಾ, ದಶಮತ್‌ ಅವರ ಮೇಲೆ ಮೂತ್ರ ವಿಸರ್ಜನೆ ಮಾಡಿ, ವಿಡಿಯೊ ಮಾಡಿದ್ದನು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಆರೋಪಿ ಬಂಧನಕ್ಕೆ ನೆಟ್ಟಿಗರು ಒತ್ತಾಯಿಸಿದ್ದರು.

ತಕ್ಷಣ ಆರೋಪಿ ಪ್ರವೇಶ್‌ ಶುಕ್ಲಾ ಅವರನ್ನು ಬಂಧಿಸಿದ ಪೊಲೀಸರು ಆತನ ವಿರುದ್ಧ ಐಪಿಸಿ ಸೆಕ್ಷನ್‌ 294 (ಅಸಭ್ಯ ವರ್ತನೆ), 504 (ಉದ್ದೇಶ ಪೂರ್ವಕ ಅವಹೇಳನ), ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಆರೋಪಿಗೆ ಸೇರಿದ ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡುವುದಾಗಿಯೂ ಗೃಹ ಸಚಿವರು ತಿಳಿಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ