ದಂಬುಲಾ: ಭಾರತ 'ಎ' ತಂಡದ ಯುವ ಎಡಗೈ ಸ್ಫೋಟಕ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ, ಕೇವಲ 11 ಎಸೆತಗಳಲ್ಲೇ ಅರ್ಧಶತಕ ಗಳಿಸಿ ಮಿಂಚಿದ್ದಾರೆ.
ಶ್ರೀಲಂಕಾ 'ಎ' ವಿರುದ್ಧ ನಡೆಯುತ್ತಿರುವ ತ್ರಿಕೋನ ಏಕದಿನ ಸರಣಿಯ ಫೈನಲ್ ಪಂದ್ಯದಲ್ಲಿ ವೈಭವ್ ಅಬ್ಬರಿಸಿದ್ದಾರೆ.
ಲಿಸ್ಟ್ 'ಎ' ಕ್ರಿಕೆಟ್‌ನಲ್ಲಿ ವೇಗದ ಅರ್ಧಶತಕ ಗಳಿಸಿದ ಬ್ಯಾಟರ್ ಎಂಬ ದಾಖಲೆಗೆ ಭಾಜನರಾಗಿದ್ದಾರೆ.
ಪ್ರಿಯಾಂಶ್ ಆರ್ಯ ಜೊತೆಗೂಡಿದ ವೈಭವ್ ಮೊದಲ ವಿಕೆಟ್‌ಗೆ 8.5 ಓವರ್‌ಗಳಲ್ಲೇ 132 ರನ್‌ಗಳ ಜೊತೆಯಾಟ ಕಟ್ಟಿದ್ದಾರೆ. ಈ ಪೈಕಿ 7ನೇ ಓವರ್‌ನಲ್ಲೇ ಭಾರತದ ಮೊತ್ತ 100ರ ಗಡಿ ದಾಟಿತು.
ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ವೈಭವ್ ಕೇವಲ ಆರು ರನ್ ಅಂತರದಲ್ಲಿ ಶತಕ ಮಿಸ್ ಮಾಡಿಕೊಂಡರು. 29 ಎಸೆತಗಳಲ್ಲಿ ಎಂಟು ಸಿಕ್ಸರ್ ಹಾಗೂ 10 ಬೌಂಡರಿಗಳ ನೆರವಿನಿಂದ 94 ರನ್ ಗಳಿಸಿ ಔಟ್ ಆದರು.
ಶ್ರೀಲಂಕಾ 'ಎ' ವಿರುದ್ದ ನಡೆದ ಕೊನೆಯ ಪಂದ್ಯದಲ್ಲಿ ಭಾರತ ಸೂಪರ್ ಓವರ್‌ನಲ್ಲಿ ಪರಾಭವಗೊಂಡಿತ್ತು.
ಶ್ರೀಲಂಕಾ 'ಎ' ವಿರುದ್ದ ನಡೆದ ಕೊನೆಯ ಪಂದ್ಯದಲ್ಲಿ ಭಾರತ ಸೂಪರ್ ಓವರ್‌ನಲ್ಲಿ ಪರಾಭವಗೊಂಡಿತ್ತು. ಈ ಪಂದ್ಯದಲ್ಲಿ ವೈಭವ್ ಹಾಗೂ ಶ್ರೀಲಂಕಾ ಆಟಗಾರರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈಗ ಫೈನಲ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.
IPL ಅಲ್ಲ ಮನೆಗೆ ಹೋಗು' ಎಂದಿದ್ದ ಲಂಕಾ ಆಟಗಾರ:
ಇಂಡಿಯನ್ ಪ್ರೀಮಿಯರ್ ಲೀಗ್ 2026ರಲ್ಲಿ ಮಿಂಚಿನ ಪ್ರದರ್ಶನ ತೋರುವ ಮೂಲಕ ಆರೆಂಜ್ ಕ್ಯಾಪ್ ಸೇರಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದ 15 ವರ್ಷದ ವೈಭವ್ ಸೂರ್ಯವಂಶಿ ಅವರನ್ನು ಭಾರತ ಎ ತಂಡಕ್ಕೆ ಆಯ್ಕೆ ಮಾಡಲಾಗಿತ್ತು.
ಶ್ರೀಲಂಕಾದಲ್ಲಿ ನಡೆಯುತ್ತಿವ ಭಾರತ 'ಎ', ಶ್ರೀಲಂಕಾ 'ಎ' ಹಾಗೂ ಅಫ್ಘಾನಿಸ್ತಾನ 'ಎ' ತಂಡಗಳ ನಡುವಿನ ತ್ರಿಕೋನ ಸರಣಿಯ ಮೊದಲ 4 ಪಂದ್ಯಗಳಲ್ಲಿ ವೈಭವ್ ಸೂರ್ಯವಂಶಿ ಅವರು ದೊಡ್ಡ ಮೊತ್ತ ಕಲೆಹಾಕುವಲ್ಲಿ ವಿಫಲರಾಗಿದ್ದರು. ಆದರೆ, ಇಂದು (ಜೂನ್ 21) ನಡೆಯುತ್ತಿವ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಅಬ್ಬರಿಸಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ ಎ ತಂಡದ ಪರವಾಗಿ ಎಂದಿನಂತೆ ಸ್ಪೋಟಕ ಬ್ಯಾಟಿಂಗ್ ಆರಂಭಿಸಿದ ವೈಭವ್ ಸೂರ್ಯವಂಶಿ ಕೇವಲ 11 ಎಸೆತಗಳಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. ಮಾತ್ರವಲ್ಲ, 29 ಎಸೆತಗಳಲ್ಲಿ 8 ಸಿಕ್ಸರ್ ಹಾಗೂ 10 ಬೌಂಡರಿಗಳ ನೆರವಿನಿಂದ 320ರ ಸ್ಟೋಕ್‌ರೇಟ್‌ನಲ್ಲಿ ಸ್ಫೋಟಕ 94 ರನ್ ಸಿಡಿಸಿದರು.
ವಿಶ್ವದಾಖಲೆ ತಪ್ಪಿಸಿಕೊಂಡ ವೈಭವ್
ಐಪಿಎಲ್‌ನಲ್ಲಿಯೂ 28 ಎಸೆತಗಳಲ್ಲಿ 97 ರನ್ ಸಿಡಿಸಿದ್ದಾಗ 29ನೇ ಸೆತದಲ್ಲಿ ದೊಡ್ಡ ಹೊಡೆತಕ್ಕೆ ಕೈ ಹಾಕಿ ವಿಕೆಟ್ ಒಪ್ಪಿಸಿದ್ದ ವೈಭವ್, ಇಲ್ಲಿಯೂ ದೊಡ್ಡ ಹೊಡೆತಕ್ಕೆ ಕೈಹಾಕಿ ವಿಕೆಟ್ ಒಪ್ಪಿಸಿದರು. ಆ ಮೂಲಕ, ಭಾರತ ಎ ಪರ ವೇಗದ ಶತಕ ಸಿಡಿಸುವ ಅವಕಾಶ ತಪ್ಪಿಸಿಕೊಂಡರು.