Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಗೆ ವಂದೇ ಭಾರತ್ ಏನಿದು ಹೊಸ ಬೆಳವಣಿಗೆ ?

ಬೆಳಗಾವಿ : ಬೆಂಗಳೂರು- ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ "ವಂದೇ ಭಾರತ ಎಕ್ಸಪ್ರೆಸ್ ರೈಲು" ಸೇವೆಯನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸುವ ಕುರಿತಾದ ನಮ್ಮ ಬೇಡಿಕೆಯ ಬದಲು, ಬೆಳಗಾವಿಯಿಂದ ಬೆಂಗಳೂರು ವರೆಗೆ ಹೊಸದೊಂದು ವಂದೇ ಭಾರತ ಎಕ್ಸ್ ಪ್ರೆಸ್ ರೈಲು ಚಲಿಸಲಾಗುವ ಕುರಿತು ಅಗತ್ಯ ಅನುಮೋದನೆ / ಆದೇಶ ನೀಡಿರುವ ಬಗ್ಗೆ ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ತಿಳಿಸಿರುವುದಾಗಿ ಬೆಳಗಾವಿ ಲೋಕಸಭಾ ಸದಸ್ಯ ಹಾಗೂ ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರ್ ತಿಳಿಸಿದ್ದಾರೆ.

ಬೆಂಗಳೂರು- ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ ವಂದೇ ಭಾರತ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸುವ ಕುರಿತು ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ರೇಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಇವರೊಂದಿಗೆ ಹಲವು ಬಾರಿ ಸಭೆಯನ್ನು / ಚರ್ಚೆಯನ್ನು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ಅವರ ಉಪಸ್ಥಿತಿಯಲ್ಲಿ ನಡೆದಿದ್ದು ಮತ್ತು ಒತ್ತಾಯಿಸಿದ್ದು ಇಲ್ಲಿ ಸ್ಮರಣೀಯ.

ಆದರೆ ಪ್ರಸ್ತಾಪಿತ ವಿಷಯವಾಗಿ ಬೆಳಗಾವಿ-ಬೆಂಗಳೂರು ನಡುವೆ ಬೆಳಗಾವಿ ನಗರದಿಂದ ಹೊಸ ವಂದೇ ಭಾರತ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಬೆಳಿಗ್ಗೆ ಪ್ರಾರಂಭಿಸಿ ಬೆಂಗಳೂರು ತಲುಪಿ ತದನಂತರ ಮದ್ಯಾಹ್ನ ಬೆಂಗಳೂರಿನಿಂದ ಹೊರಟು ರಾತ್ರಿ ಬೆಳಗಾವಿ ತಲುಪುವ ಬಗ್ಗೆ ವಿಷಯ ತಿಳಿದು ಬಂದಿದೆ.

ನೂತನ ವಂದೇ ಭಾರತ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಬೆಳಗಾವಿಯಿಂದ ಪ್ರಾರಂಭಿಸುವ ವಿಷಯವಾಗಿ ಅಗತ್ಯ ಅನುಮೋದನೆ ನೀಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ಇವರಿಗೆ ಹಾಗೂ ಕೇಂದ್ರ ರೇಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.

ಅದರಂತೆ ಅದಷ್ಟು ಬೇಗನೆ ಈ ಸೇವೆಯನ್ನು ಪ್ರಾರಂಭಿಸುವ ಬಗ್ಗೆ ದಿನಾಂಕ ನಿಗದಿಪಡಿಸಿ ಬೆಳಗಾವಿ ಜಿಲ್ಲಾ ರಹವಾಸಿಗಳಿಗೆ ಅನುಕೂಲತೆ ಕಲ್ಪಿಕೊಡುವಂತೆ ಕೇಂದ್ರ ರೇಲ್ವೆ ಸಚಿವರಲ್ಲಿ ವಿನಂತಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ