Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಗೆ ವಂದೇ ಭಾರತ್ ಬಂದೇ ಬರುತ್ತಾ ?

ಬೆಳಗಾವಿ : ಲೋಕಸಭಾ ಸದಸ್ಯ ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರು ಕೇಂದ್ರ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಅವರ ಉಪಸ್ಥಿತಿಯಲ್ಲಿ ನೈರುತ್ಯ ವಲಯದ ರೈಲ್ವೆ ಪ್ರಧಾನ ವ್ಯವಸ್ಥಾಪಕ ( ಜಿ.ಎಮ್ ) ಅರವಿಂದ ಶ್ರೀನಿವಾಸ್ ಅವರನ್ನು ಭೇಟಿ ಮಾಡಿ, ಬೆಳಗಾವಿಗೆ ಸಂಬಂಧಿಸಿದಂತೆ ರೈಲು ಸೇವೆ ಒದಗಿಸುವ ಬಗ್ಗೆ ಸುದೀರ್ಘವಾದ ಚರ್ಚೆ ನಡೆಸಿದರು.

ಬೆಂಗಳೂರು - ಧಾರವಾಡ ವಂದೇ ಭಾರತ್ ಎಕ್ಸ್ ಪ್ರೆಸ್:
ಪ್ರಸ್ತಾಪಿತ ರೈಲು ಸಂಚಾರವನ್ನು ಬೆಳಗಾವಿವರೆಗೆ ವಿಸ್ತರಿಸುವುದು ಬಹಳ ಅವಶ್ಯವಿದ್ದು ಮತ್ತು ಬೆಳಗಾವಿ ಜಿಲ್ಲೆಯ ಸಾರ್ವಜನಿಕರ ಬೇಡಿಕೆಯೂ ಸಹ ಆಗಿದೆ. ಆದಕಾರಣ ಈ ರೈಲಿನ ಪ್ರವಾಸದ ಅಲ್ಪ ಸಮಯ ಬದಲಾವಣೆಯೊಂದಿಗೆ ಇದು ಸಾಧ್ಯವಿದ್ದು ಪ್ರಯುಕ್ತ ಈ ವಿಷಯವನ್ನು ಗಂಭೀರವಾಗಿ ಅವಲೋಕಿಸಿ ಕ್ರಮವನ್ನು ಜರುಗಿಸಲು ರೈಲ್ವೆ ಮಹಾಪ್ರಬಂಧಕರಿಗೆ ತಿಳಿಸಲಾಯಿತು.

ಬೆಳಗಾವಿ-ಮಿರಜ್ ನಡುವೆ ದಿನನಿತ್ಯ ಸಂಚರಿಸುವ ರೈಲು:
ಈ ರೈಲು ಸೇವೆಯನ್ನು ಪ್ರತಿ ಮಾಹೆ ಮುಂದುವರಿಸುತ್ತಾ ಬಂದಿದ್ದು, ಇದರ ಸೇವೆಯನ್ನು ಖಾಯಂ ಮಾಡುವಂತೆಯೂ ಮತ್ತು ಇದನ್ನು "ಮೆಮು"ರೈಲನ್ನಾಗಿ ಪರಿವರ್ತಿಸುವ ಬಗ್ಗೆ ಕ್ರಮವನ್ನು ಜರುಗಿಸಲು ಸೂಚಿಸಲಾಯಿತು.

ಲೋಕಾಪುರ - ರಾಮದುರ್ಗ - ಸವದತ್ತಿ - ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣ :
ಪ್ರಸ್ತಾಪಿತ ರೈಲು ಮಾರ್ಗ ನಿರ್ಮಾಣ ಅವಶ್ಯಕತೆ ಇದ್ದು, ಈ ಕುರಿತು ಮುಂಚಿತ ಸಮೀಕ್ಷೆ ನಡೆಸುವುದು ಅವಶ್ಯಕ. ಈ ನಿಟ್ಟಿನಲ್ಲಿ ಕೂಡಲೇ ಮುಂದಿನ ಅಗತ್ಯ ಕ್ರಮವನ್ನು ಜರುಗಿಸಲು ಸೂಚಿಸಿ, ರೈಲ್ವೆ ಪ್ರಧಾನ ವ್ಯವಸ್ಥಾಪಕರಿಗೆ (ಜಿ.ಎಮ್ ) ಅವರಿಗೆ ಮನವಿ ಸಲ್ಲಿಸಿದರು.

ಎಲ್ಲ ಬೇಡಿಕೆಗಳನ್ನು ಅವಲೋಕಿಸಿದ ರೈಲ್ವೆ ಪ್ರಧಾನ ವ್ಯವಸ್ಥಾಪಕರು (ಜಿ.ಎಮ್ ) ಈ ಕುರಿತು ಶೀಘ್ರ ಅನುಕೂಲಕರವಾದ ಕ್ರಮವನ್ನು ಕೈಗೊಳ್ಳುವುದಾಗಿ ಪ್ರಸ್ತಾಪಿಸಿದರೆಂದು ಜಗದೀಶ ಶೆಟ್ಟರ ತಿಳಿಸಿದ್ದಾರೆ.

ಸಭೆಯಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಭಾಗವಹಿಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ