Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಂದೇ ಭಾರತ್‌ ರೈಲು; ಕೊನೆಗೂ ಟಿಕೆಟ್‌ ದರ ಪ್ರಕಟ

ಬೆಳಗಾವಿ : ಹುಬ್ಬಳ್ಳಿ–ಬೆಳಗಾವಿ-ಪುಣೆ ನಡುವೆ ವಾರದಲ್ಲಿ ಮೂರು ದಿನ ಸಂಚರಿಸುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಟಿಕೆಟ್‌ ದರ ಪ್ರಕಟಿಸಲಾಗಿದೆ. ಈ ಬಗ್ಗೆ ಜನರಲ್ಲಿ ಕುತೂಹಲ ಇತ್ತು. ಕೊನೆಗೂ ಇದಕ್ಕೆ ತೆರೆ ಬಿದ್ದಿದೆ. ಸೋಮವಾರದಿಂದ ಇದಕ್ಕೆ ಅಧಿಕೃತವಾಗಿ ಚಾಲನೆ ಸಿಗಲಿದ್ದು ಬೆಳಗಾವಿಯಿಂದ ಪುಣೆಗೆ ತೆರಳಲಿರುವ ಪ್ರಯಾಣಿಕರಿಗೆ ಬಹು ದೊಡ್ಡ ಪ್ರಮಾಣದಲ್ಲಿ ಅನುಕೂಲತೆ ಆಗಲಿದೆ.

ಪ್ರಧಾನಿ ನರೇಂದ್ರ ಮೋದಿ ಸೆ.16ರಂದು ರೈಲು ಸಂಚಾರಕ್ಕೆ ವರ್ಚ್ಯುವಲ್‌ ಮೂಲಕ ಚಾಲನೆ ನೀಡಲಿದ್ದು, ಸೆ.18ರಂದು ರೈಲು ಹುಬ್ಬಳ್ಳಿಯಿಂದ ಮೊದಲ ಕಾರ್ಯಾಚರಣೆ ಆರಂಭಿಸಲಿದೆ.

ಹುಬ್ಬಳ್ಳಿಯಿಂದ ಧಾರವಾಡವರೆಗಿನ ಚೇರ್ ಕಾರ್‌‌ (ಸಿಸಿ) ಪ್ರಯಾಣಕ್ಕೆ ₹365, ಎಕ್ಸಿಕ್ಯೂಟಿವ್ ಕ್ಲಾಸ್‌ (ಇಸಿ) ಪ್ರಯಾಣಕ್ಕೆ ₹690 ನಿಗದಿಪಡಿಸಲಾಗಿದೆ. ಹುಬ್ಬಳ್ಳಿಯಿಂದ ಬೆಳಗಾವಿಗೆ ಕ್ಯಾಟರಿಂಗ್ ಸೇರಿ ಚೇರ್ ಕಾರ್ ಪ್ರಯಾಣಕ್ಕೆ ₹ 520, ಎಕ್ಸಿಕ್ಯೂಟಿವ್ ಕ್ಲಾಸ್‌ಗೆ ₹1,005 ಮತ್ತು ಕ್ಯಾಟರಿಂಗ್ ಇಲ್ಲದೆ ಚೇರ್‌ ಕಾರ್‌ಗೆ ₹505, ಎಕ್ಸಿಕ್ಯೂಟಿವ್ ಕ್ಲಾಸ್‌ಗೆ ₹990 ದರ ಇದೆ.

ಹುಬ್ಬಳ್ಳಿಯಿಂದ ಪುಣೆಗೆ ಕ್ಯಾಟರಿಂಗ್ ಶುಲ್ಕ ಸೇರಿ ಚೇರ್ ಕಾರ್‌ ಪ್ರಯಾಣಕ್ಕೆ ₹1,530, ಎಕ್ಸಿಕ್ಯೂಟಿವ್‌ ಕ್ಲಾಸ್‌ಗೆ ₹2,780 ಮತ್ತು ಕ್ಯಾಟರಿಂಗ್ ಇಲ್ಲದೆ ಚೇರ್‌ ಕಾರ್‌ –₹1,185, ಎ‌ಕ್ಸಿಕ್ಯೂಟಿವ್‌ ಕ್ಲಾಸ್‌ಗೆ ₹2,385 ದರ ನಿಗದಿಪಡಿಸಲಾಗಿದೆ.

ಬುಧವಾರ, ಶುಕ್ರವಾರ ಮತ್ತು ಭಾನುವಾರ ಹುಬ್ಬಳ್ಳಿಯ ಶ್ರೀಸಿದ್ಧಾರೂಢಸ್ವಾಮಿ ರೈಲು ನಿಲ್ದಾಣದಿಂದ ಬೆಳಿಗ್ಗೆ 5 ಗಂಟೆಗೆ ಹೊರಡುವ ರೈಲು (20669), ಮಧ್ಯಾಹ್ನ 1.30ಕ್ಕೆ ಪುಣೆ ತಲುಪಲಿದೆ.

ಧಾರವಾಡ (ಬೆಳಿಗ್ಗೆ 5.15ರಿಂದ 5.17), ಬೆಳಗಾವಿ (6.55 ರಿಂದ 7), ಮೀರಜ್‌ (9 ರಿಂದ 9.05), ಸಾಂಗ್ಲಿ (9.15ರಿಂದ 9.17), ಸತಾರಾದಲ್ಲಿ (10.47ರಿಂದ 10.50) ನಿಲುಗಡೆ ಇರಲಿದೆ.

ಪುಣೆಯಿಂದ (ರೈಲು ಸಂಖ್ಯೆ 20670) ಗುರುವಾರ, ಶನಿವಾರ ಮತ್ತು ಸೋಮವಾರ ಮಧ್ಯಾಹ್ನ 2.15ಕ್ಕೆ ಹೊರಡುವ ರೈಲು ರಾತ್ರಿ 10.45ಕ್ಕೆ ಹುಬ್ಬಳ್ಳಿ ತಲುಪಲಿದೆ.

ಸತಾರ (4.37ರಿಂದ 4.40), ಸಾಂಗ್ಲಿ (6.10ರಿಂದ 6.12), ಮೀರಜ್ (6.40ರಿಂದ 6.45), ಬೆಳಗಾವಿ (8.35ರಿಂದ 8.40), ಧಾರವಾಡದಲ್ಲಿ (10.20ರಿಂದ 10.22) ರೈಲು ನಿಲ್ಲಲಿದೆ.

ರೈಲಿನಲ್ಲಿ ಎಂಟು ಬೋಗಿಗಳು ಇದ್ದು, ಅದರಲ್ಲಿ ಎಕ್ಸಿಕ್ಯೂಟಿವ್‌ ಕ್ಲಾಸ್‌ನ 52 ಆಸನಗಳು ಮತ್ತು 478 ಚೇರ್‌ ಕಾರ್ (ಸಿಸಿ) ಆಸನಗಳಿವೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ