Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರು

ಮಂಗಳೂರು: ಸ್ವಾತಂತ್ರ್ಯೋತ್ಸವದಂದು ಕಾಂಗ್ರೆಸ್‌ ಪ್ರಧಾನ ಕಚೇರಿಯಲ್ಲಿ ನಡೆದ ‘ವಂದೇ ಮಾತರಂ’ ಗಾಯನಕ್ಕೆ ಸಂಬಂಧಿಸಿದ ವಿವಾದ ತೀವ್ರಗೊಂಡಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್‌ ಠಾಣೆಯಲ್ಲಿ ಭಾನುವಾರ ದೂರು ದಾಖಲಿಸಿದ್ದಾರೆ. ಸೋನಿಯಾ ಗಾಂಧಿ ವಂದೇ ಮಾತರಂಗೆ (Vande Mataram Row) ಅಪಮಾನ ಮಾಡಿದ್ದಾರೆಂದು ಆರೋಪಿಸಿ ಈ ದೂರು ನೀಡಲಾಗಿದೆ. ರಾಷ್ಟ್ರೀಯ ಗೀತೆಯ ಕುರಿತ ವಿವಾದದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸ್ವಾತಂತ್ರ್ಯೋತ್ಸವದ ಅಂಗವಾಗಿ ಶನಿವಾರ ನವದೆಹಲಿಯ ಕಾಂಗ್ರೆಸ್‌ ಪ್ರಧಾನ ಕಚೇರಿಯಲ್ಲಿ ‘ವಂದೇ ಮಾತರಂ’ ಗಾಯನ ನಡೆಯುತ್ತಿದ್ದ ವೇಳೆ ಪಕ್ಷದ ಹಿರಿಯ ನಾಯಕರು ಪರಸ್ಪರ ಮಾತನಾಡುತ್ತಿರುವ ದೃಶ್ಯಗಳು ವೈರಲ್‌ ಆಗಿದ್ದವು. ಇದನ್ನು ಆಧರಿಸಿ ಬಿಜೆಪಿ ನಾಯಕರು ಕಾಂಗ್ರೆಸ್‌ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ವರ್ತನೆಯಿಂದ ರಾಷ್ಟ್ರೀಯ ಗೀತೆಗೆ ಸಂಬಂಧಿಸಿದ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಉರ್ವಾ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿರುವ ಬಿಜೆಪಿ ನಾಯಕ ವಿಕಾಸ ಪುತ್ತೂರು, ಈ ಪ್ರಕರಣದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS)ಯ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ಎಫ್‌ಐಆರ್‌ ದಾಖಲಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.
ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಕಾಸ ಪುತ್ತೂರು, ವಂದೇ ಮಾತರಂ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿ ನೀಡಿದ ಗೀತೆಯಾಗಿದ್ದು, ಇದನ್ನು ಪೂರ್ಣವಾಗಿ ಹಾಡಲು ಬಿಡದೆ ಅರ್ಧಕ್ಕೆ ನಿಲ್ಲಿಸುವುದು 140 ಕೋಟಿ ಭಾರತೀಯರಿಗೆ ಮಾಡಿದ ಅಪಮಾನ. ಒಂದು ವೇಳೆ ಪೊಲೀಸರು ಪ್ರಭಾವಕ್ಕೆ ಒಳಗಾಗಿ ಎಫ್‌ಐಆರ್ ದಾಖಲಿಸದಿದ್ದರೆ, ನಾವು ಹೈಕೋರ್ಟ್ ಮೊರೆ ಹೋಗುತ್ತೇವೆ ಅಥವಾ ಖಾಸಗಿ ದೂರನ್ನು ದಾಖಲಿಸಿ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?ಅಮೆರಿಕ ಸೈನಿಕನನ್ನು ಕೊಂದ್ರೆ ಅಥವಾ ಸೆರೆ ಹಿಡಿದ್ರೆ 30 ಸಾವಿರ ಡಾಲರ್ ಬಹುಮಾನ : ಮಹಿಳೆಯರಿಗೆ ದುಪ್ಪಟ್ಟು ಹಣ; ಇರಾನ್‌ ಘೋಷಣೆನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರುಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಕಾರ್ಮಿಕನಿಗೆ ಸಿಕ್ಕಿತು 98 ಕೋಟಿ ರೂ. ಮೌಲ್ಯದ ನಿಧಿ….!ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನಕನ್ನಡ ಸಾಹಿತ್ಯ ಕಣಜವನ್ನು ಶ್ರೀಮಂತಗೊಳಿಸಿದವರು ಡಾ. ಸರಜೂ ಕಾಟ್ಕರ್ : ಡಾ. ಬಸವರಾಜ ಜಗಜಂಪಿಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!