Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಹುದೊಡ್ಡ ಗರಿ-ರಿಷಬ್‌ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ

ನವದೆಹಲಿ: 2024ನೇ ಸಾಲಿನ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದೆ. ಕನ್ನಡದ ಕೆಜಿಎಫ್ ಚಾಪ್ಟರ್-2 ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಈ ಚಿತ್ರಕ್ಕೆ ಅತ್ಯುತ್ತಮ ನಿರ್ದೇಶನ ಹಾಗೂ ಅತ್ಯುತ್ತಮ ಸಾಹಸ ನಿರ್ದೇಶನ ಪ್ರಶಸ್ತಿ ದೊರೆತಿದೆ.

ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಾಪ್ಟರ್-2 ಸಿನಿಮಾ 2022ರಲ್ಲಿ ಬಿಡುಗಡೆಯಾಗಿತ್ತು. 2022ರಲ್ಲಿ ಈ ಚಿತ್ರ ಐಎಂಡಿಬಿಯಲ್ಲಿಯೂ 8.5 ರೇಟಿಂಗ್ ಪಡೆದುಕೊಂಡಿತ್ತು.

ಚಂದನವನದಲ್ಲಿ ಹೊಸ ಅಲೆ ಸೃಷ್ಟಿಸಿದ್ದ ಕಾಂತಾರ ಚಿತ್ರಕ್ಕೆ ರಿಷಬ್‌ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ.

ಮಣ್ಣಿನ ಘಮಲಲ್ಲಿ ಸಂಘರ್ಷ-ಸೌಹಾರ್ದವನ್ನು ಸಾರಿದ ಕಾಂತಾರ ಚಿತ್ರ ಕನ್ನಡಿಗರಿಗೆ ಸಂಸ್ಕೃತಿಯ ಹೊಸ ಲೋಕವೊಂದು ಕಾಣುವಂತೆ ಮಾಡಿತ್ತು.

ಕನ್ನಡ ಸಿನಿಮಾ ನಟರೊಬ್ಬರಿಗೆ ರಾಷ್ಟ್ರಪ್ರಶಸ್ತಿ ದೊರೆತು ದಶಕಗಳೇ ಆಗಿಬಿಟ್ಟಿದ್ದವು. ಆ ಬರವನ್ನು ಈಗ ನೀಗಿದ್ದು, ನಟ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ದೊರೆತಿದೆ. 'ಕಾಂತಾರ' ಸಿನಿಮಾದ ಅತ್ಯುತ್ತಮ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ದೊರೆತಿದೆ. ಈ ವರ್ಷ ರಿಷಬ್ ಶೆಟ್ಟಿಗೆ ಮಲಯಾಳಂ ನಟ ಮಮ್ಮುಟಿ, ಹಿಂದಿಯ ವಿಕ್ರಾಂತ್ ಮೆಸ್ಸಿ ಇನ್ನೂ ಹಲವು ನಟರಿಂದ ಸ್ಪರ್ಧೆ ಇತ್ತು. ಆದರೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಒಲಿದಿದೆ. ಕನ್ನಡ ಸಿನಿಮಾಕ್ಕೆ, ಕರ್ನಾಟಕದ್ದೇ ನಟನಿಗೆ ಒಲಿಯುತ್ತಿರುವ ಮೊದಲ ರಾಷ್ಟ್ರ ಪ್ರಶಸ್ತಿ ಇದು ಎನ್ನಲಾಗುತ್ತಿದೆ.

ದಶಕಗಳ ಹಿಂದೆ ನಟ ಕಮಲ್ ಹಾಸನ್ ಸಹೋದರ ಚಾರುಹಾಸನ್ ಅವರಿಗೆ ಕನ್ನಡದ 'ತಬರನ ಕತೆ' ಸಿನಿಮಾದ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ದೊರೆತಿತ್ತು. ಅದಾದ ಬಳಿಕ ಕನ್ನಡ ಸಿನಿಮಾದಲ್ಲಿ ನಟಿಸಿದ್ದಕ್ಕೆ ಇನ್ಯಾವುದೇ ನಟರಿಗೆ ರಾಷ್ಟ್ರ ಪ್ರಶಸ್ತಿ ದೊರೆತಿರಲಿಲ್ಲ. ಅದರಲ್ಲಿಯೂ ಕರ್ನಾಟಕದವರೇ ಆದ ನಟರಿಗೆ ರಾಷ್ಟ್ರಪ್ರಶಸ್ತಿ ದೊರೆತಿರಲಿಲ್ಲ. ಇದೀಗ ಆ ಬಹು ಸಮಯದ ಬರವನ್ನು ರಿಷಬ್ ಶೆಟ್ಟಿ ನೀಗಿಸಿದ್ದಾರೆ. ಅಂದಹಾಗೆ ನಟಿ ತಾರಾ ಅವರಿಗೆ ರಾಷ್ಟ್ರಪ್ರಶಸ್ತಿ ದೊರೆತಿದ್ದನ್ನು ಇಲ್ಲಿ ಸ್ಮರಿಸಬಹುದು.

ರಿಷಬ್ ಶೆಟ್ಟಿ 'ಕಾಂತಾರ' ಸಿನಿಮಾವನ್ನು ನಿರ್ದೇಶನ ಮಾಡಿ ನಟನೆಯನ್ನೂ ಮಾಡಿದ್ದರು. ಆ ಸಿನಿಮಾದಲ್ಲಿ ಬೇಜವಾಬ್ದಾರಿಯುತ, ಸಿಡುಕು ಸ್ವಭಾವದ, ತಮಾಷೆ ಸ್ವಭಾವದ ಕಾಡುಬೆಟ್ಟು ಶಿವನ ಪಾತ್ರದಲ್ಲಿ ನಟಿಸಿದ್ದಾರೆ. ಅದೇ ಸಿನಿಮಾದಲ್ಲಿ ದೈವದ ವೇಷಧಾರಿಯಾಗಿ ಅಂತಿಮ ದೃಶ್ಯಗಳಲ್ಲಿ ಗುಳಿಗ ಮೈಮೇಲೆ ಬಂದಾಗಿನ ಅವರ ಅದ್ಭುತ ನಟನೆ ಇವೆಲ್ಲವನ್ನೂ ಪರಿಗಣಿಸಿ ರಿಷಬ್ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಲಾಗದೆ. ಕಳೆದ ವರ್ಷ ರಾಷ್ಟ್ರಪ್ರಶಸ್ತಿಯಲ್ಲಿ ಪುಷ್ಪ ಸಿನಿಮಾದ ಅತ್ಯುತ್ತಮ ನಟನೆಗಾಗಿ ಅಲ್ಲು ಅರ್ಜುನ್ ಅವರಿಗೆ ನೀಡಲಾಗಿತ್ತು. ಈ ಬಾರಿ ರಿಷಬ್ ಶೆಟ್ಟಿ ಪಾಲಾಗಿದೆ.

ಸಾಮಾನ್ಯ ಸೈಡ್ ರೋಲ್ ಆ ಬಳಿಕ ವಿಲನ್‌ಗಳ ಗುಂಪಿನಲ್ಲಿ ಒಬ್ಬ ವ್ಯಕ್ತಿ ಹೀಗೆ ತೀರ ಸಣ್ಣ ಪುಟ್ಟ ಪಾತ್ರಗಳಿಂದ ನಟನೆ ಆರಂಭಿಸಿದ ರಿಷಬ್ ಶೆಟ್ಟಿ ಇಂದು ರಾಷ್ಟ್ರಪ್ರಶಸ್ತಿಯನ್ನು ಗಳಿಸಿದ್ದಾರೆ.

ರಿಷಬ್ ಸಾಧನೆ :
ನಾಟಕ -ಯಕ್ಷಗಾನಗಳಲ್ಲಿ ಆಸಕ್ತಿ
ಬಾಲ್ಯದ ದಿನಗಳಲ್ಲಿ ನಾಟಕ ಹಾಗೂ ಯಕ್ಷಗಾನಗಳಲ್ಲಿ ರಿಷಬ್ ಶೆಟ್ಟಿ ನಟಿಸುತ್ತಿದ್ದರು. ರಂಗಭೂಮಿಯಲ್ಲಿ ಗುರುತಿಸಿಕೊಂಡಿದ್ದರು. ಚಿಕ್ಕ ವಯಸ್ಸಿನಲ್ಲಿ ಸಿನಿಮಾದ ಗೀಳು ಅಂಟಿಸಿಕೊಂಡಿದ್ದರು. ಡಾ. ರಾಜ್​ಕುಮಾರ್ ಹಾಗೂ ಶಂಕರ್​ನಾಗ್ ಚಿತ್ರಗಳು ಅಂದರೆ ಈ ನಟನಿಗೆ ಪಂಚಪ್ರಾಣ. ಮುಖ್ಯವಾಗಿ ರಿಷಬ್ ಶೆಟ್ಟಿ ಅವರಿಗೆ ತಾನು ಹೀರೋ ಆಗಬೇಕು ಎಂಬ ಸ್ಫೂರ್ತಿ ಆಗಿದ್ದು ಕನ್ನಡ ಚಿತ್ರರಂಗದ ಮೇರು ನಟನರಾದ ದಿ. ಡಾ. ರಾಜ್​ಕುಮಾರ್. ಅವರ ಮನೋಜ್ಞ ಅಭಿನಯ ಹಾಗು ಸಿನಿಮಾಗಳು ʼಡಿವೈನ್​ ಸ್ಟಾರ್ʼ​ ಗಮನ ಸೆಳೆದಿತ್ತು. ಆಗ್ಲೇ ಅಣ್ಣಾವ್ರ ರೀತಿ ನಟನಾಗಬೇಕು ಎಂದು ರಿಷಬ್ ಶೆಟ್ಟಿ ನಿರ್ಧಾರ ಮಾಡಿದ್ದರು. ಕಾಲೇಜು ವಿದ್ಯಾಭ್ಯಾಸ ವೇಳೆ ಸಿನಿಮಾ ಕ್ರೇಜ್ ಜಾಸ್ತಿ ಮಾಡಿದ್ದು ಉಪೇಂದ್ರ ಅವರ ಸಿನಿಮಾಗಳು. ಆಗ ಕುಂದಾಪುರದಿಂದ ರಿಷಬ್ ಶೆಟ್ಟಿ ಬೆಂಗಳೂರಿಗೆ ಬರುತ್ತಾರೆ. ನಿರ್ದೇಶಕ ಎ.ಎಂ.ಆರ್ ರಮೇಶ್ ಜೊತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಾರೆ. ಅರವಿಂದ್ ಕೌಶಿಕ್ ನಿರ್ದೇಶನದ ತುಘ್ಲಕ್ ಚಿತ್ರದಲ್ಲಿ, ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡುತ್ತಾ, ಇದೇ ಚಿತ್ರದಲ್ಲಿ ಒಂದು ಸಣ್ಣ ಪಾತ್ರವನ್ನೂ ಮಾಡ್ತಾರೆ. ಅಲ್ಲಿಂದ ಲೂಸಿಯಾ ಹಾಗೂ ಉಳಿದವರು ಕಂಡಂತೆ ಚಿತ್ರಗಳಲ್ಲಿ ನಟಿಸುವ ಮೂಲಕ ರಿಷಬ್ ಶೆಟ್ಟಿ ಗಾಂಧಿನಗರದಲ್ಲಿ ಗಮನ ಸೆಳೆದರು.

ರಿಷಬ್ ಶೆಟ್ಟಿ ಅವರಿಗೆ ಸ್ಟಾರ್ ಡೈರೆಕ್ಟರ್ ಪಟ್ಟ ತಂದುಕೊಟ್ಟ ಸಿನಿಮಾ ಕಿರಿಕ್ ಪಾರ್ಟಿ. 2016ರಲ್ಲಿ ʼರಿಕ್ಕಿʼ ಚಿತ್ರ ನಿರ್ದೇಶಿಸುವ ಮೂಲಕ ಅವರು ಸ್ಯಾಂಡಲ್‌ವುಡ್‌ಗೆ ಕಾಲಿಟ್ಟರು. ಬಳಿಕ ತೆರೆಕಂಡ ʼಕಿರಿಕ್‌ ಪಾರ್ಟಿʼ ಮತ್ತು ʼಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡುʼ ಸಿನಿಮಾದಿಂದ ಸ್ಯಾಂಡಲ್‌ವುಡ್‌ನ ಗಮನ ಸೆಳೆದರು. ರಿಷಬ್ ಶೆಟ್ಟಿ ಬೆಲ್ ಬಾಟಮ್ ಚಿತ್ರದಲ್ಲಿ ನಟಿಸುವ ಮೂಲ ತಮ್ಮ ಬಾಲ್ಯದ ಕನಸನ್ನು ಈಡೇರಿಸಿಕೊಳ್ಳುತ್ತಾರೆ. ಮೊದಲ ಬಾರಿಗೆ ನಾಯಕ ನಟನಾಗಿ ನಟಿಸಿದ ರಿಷಬ್ ಶೆಟ್ಟಿ ಅವರಿಗೆ, ಬೆಲ್ ಬಾಟಮ್ ಚಿತ್ರ ಸ್ಟಾರ್ ಪಟ್ಟ ತಂದು ಕೊಡುತ್ತದೆ. ʻಕಾಂತಾರʼ ಚಿತ್ರದ ಶಿವ ಪಾತ್ರದ ಮೂಲಕ ಅತ್ಯುತ್ತಮ ನಟ ವಿಭಾಗದಲ್ಲಿ ರಿಷಬ್‌ ಶೆಟ್ಟಿ ಪ್ರಬಲ ಪೈಪೋಟಿ ಒಡ್ಡಿ ಇದೀಗ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ತುಳುನಾಡಿನ ವಿಶಿಷ್ಟ ಭೂತಾರಾಧನೆಯ ಸಂಸ್ಕೃತಿಯನ್ನು ಜಗತ್ತಿಗೇ ಸಾರಿದ ಈ ಸಿನಿಮಾ ಮೇಕಿಂಗ್‌ನಿಂದಲೇ ಪ್ರೇಕ್ಷಕರ ಗಮನ ಸೆಳೆದಿತ್ತು. ಅದರಲ್ಲಿಯೂ ನಾಯಕನಾಗಿ ರಿಷಬ್‌ ಶೆಟ್ಟಿ ಎಲ್ಲರ ಮೆಚ್ಚುಗೆ ಗಳಿಸಿದ್ದರು. ಕ್ಲೈಮಾಕ್ಸ್‌ನಲ್ಲಂತೂ ಅವರ ಅಭಿನಯ ಅಮೋಘ ಎಂದಿದ್ದ ಹಲವರು ಅಂದೇ ನ್ಯಾಷನಲ್‌ ಅವಾರ್ಡ್‌ ಬಗ್ಗೆ ಭವಿಷ್ಯ ನುಡಿದಿದ್ದರು.

ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿರುವ ರಿಷಬ್‌
`ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಕಾಸರಗೋಡು’ ಸಿನಿಮಾ ಮಾಡಿದಾಗಿನಿಂದಲೂ ರಿಷಬ್ ಶೆಟ್ಟಿಯವರು ಶಿಕ್ಷಣ ಕ್ಷೇತ್ರದಲ್ಲಿ ಕೈಲಾದ ಸೇವೆ ಮಾಡುತ್ತಲೇ ಇದ್ದಾರೆ. ಸಮಾಜ ಸೇವೆ ಅದರಲ್ಲಿಯೂ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ಕೊಡುವುದು ರಿಷಬ್​ಗೆ ಬಹಳ ಇಷ್ಟವಾಗುವ ಕೆಲಸ. ರಿಷಬ್‌ ಶೆಟ್ಟಿ ಫೌಂಡೇಶನ್ ಮೂಲಕ ಅಳಿವಿನಂಚಿನಲ್ಲಿದ್ದ ತಾವು ಓದಿದ ಕೆರಾಡಿ ಸರ್ಕಾರಿ ಕನ್ನಡ ಶಾಲೆಯನ್ನು ದತ್ತು ಪಡೆದಿದ್ದಾರೆ.

ಸಿನಿಮಾ ನಿರ್ಮಾಣಕ್ಕೂ ಸೈ
ರಿಷಬ್ ಶೆಟ್ಟಿ ನಿರ್ಮಾಣ ಮಾಡಿ, ಪ್ರಸ್ತುತಪಡಿಸಿದ ‘ಶಿವಮ್ಮ’ ಸಿನಿಮಾ ವಿಶ್ವಾದ್ಯಂತ ವಿವಿಧ ಸಿನಿಮೋತ್ಸವಗಳಲ್ಲಿ ಪ್ರದರ್ಶನ ಕಂಡು ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿತ್ತು. ‘ಬುಸಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2022’ರಲ್ಲಿ ನ್ಯೂ ಕರೆಂಟ್ಸ್ ಪುರಸ್ಕಾರ ಪಡೆದಿತ್ತು. ‘ಥ್ರೀ ಕಾಂಟಿನೆಂಟ್ಸ್ ಫೆಸ್ಟಿವಲ್ 2022’ದಲ್ಲಿ ಯುವ ಜ್ಯೂರಿ ಪ್ರಶಸ್ತಿ, ‘ಫಾಜರ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ’ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿತ್ತು. ಜಯಶಂಖರ್ ಆರ್ಯರ್ ನಿರ್ದೇಶನದ ‘ಶಿವಮ್ಮ’ ಸಿನಿಮಾ ಜೂನ್ 14ಕ್ಕೆ ತೆರೆಗೆ ಬಂದಿತ್ತು. ಸದ್ಯ ರಿಷಬ್‌ ಶೆಟ್ಟಿ ನಿರ್ಮಾಣದ ಪ್ರಮೋದ್ ಶೆಟ್ಟಿ ನಟನೆಯ ‘ಲಾಫಿಂಗ್ ಬುದ್ಧ’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ. ತೆರೆಗೆ ಬರಲು ಸಜ್ಜಾಗುತ್ತಿದೆ.

ಸಾಲು ಸಾಲು ಪ್ರಶಸ್ತಿಗಳು
ರಿಷಬ್‌ ಶೆಟ್ಟಿ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ ಪಡೆದ ಬೆನ್ನಲ್ಲೇ ಬಾಲಿವುಡ್ ಲೈಫ್ ಅವಾರ್ಡ್ಸ್‌ನ ದಕ್ಷಿಣ ಸಿನಿಮಾ ವಿಭಾಗದಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಗೆದ್ದಿದ್ದರು. 2023ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮಾ ಉತ್ಸವದಲ್ಲಿ ‘ಭರವಸೆಯ ನಟ’ ಎಂಬ ಪ್ರಶಸ್ತಿ ಸ್ವೀಕರಿಸಿದ್ದರು. ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದೈವಿಕ ಕತೆಯನ್ನು ಹೊಂದಿರುವ ಕಾಂತಾರ ಸಿನಿಮಾ ಚೊಚ್ಚಲ ಆವೃತ್ತಿಯ “ಸಿಲ್ವರ್ ಪಿಕಾಕ್​ ಅವಾರ್ಡ್’​​ ತನ್ನದಾಗಿಸಿಕೊಂಡಿತ್ತು. ಕಾಂತಾರ ಸಿನಿಮಾ ತಂಡದ ಹಾಗೂ ಕನ್ನಡಿಗರ ಪಾಲಿಗೆ ವಿಶೇಷವಾಗಿದೆ. ಇದು ಕನ್ನಡ ಸಿನಿಮಾ ಒಂದಕ್ಕೆ ದೊರೆತ ಮೊಟ್ಟ ಮೊದಲ ಪ್ರಶಸ್ತಿಯೂ ಹೌದು. ದುಬೈನಲ್ಲಿ ನಡೆದ ಸೈಮಾ ಅವಾರ್ಡ್ಸ್ 2023 ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳಲ್ಲಿ ಕಾಂತಾರ ಸಿನಿಮಾ 10 ಪ್ರಶಸ್ತಿಗಳನ್ನು ಬಾಚಿಕೊಂಡಿತ್ತು.

ವಿಶೇಷವಾಗಿ ʼಕಾಂತಾರʼ ಚಿತ್ರಕ್ಕೆ ಬೆನ್ನೆಲುಬಾಗಿದ್ದಂತಹ ದೈವ ನರ್ತಕರಾದ ಮುಖೇಶ್ ಲಕ್ಷ್ಮಣ್ ಅವರು ದುಬೈನಲ್ಲಿ ಸೈಮಾ ಪ್ರಶಸ್ತಿ ಸ್ವೀಕರಿಸಿದ್ದರು. ಉಳಿದಂತೆ ಅತ್ಯುತ್ತಮ ನಟಿ, ಖಳನಟ, ಹಾಸ್ಯನಟ, ಸಂಗೀತ ನಿರ್ದೇಶಕ, ಗಾಯಕ, ಸಾಹಿತಿ ಸೇರಿ ಒಟ್ಟು 10 ಅವಾರ್ಡ್ಸ್ ಕಾಂತಾರ ಸಿನಿಮಾ ಗೆದ್ದು ಸದ್ದು ಮಾಡಿತ್ತು. ಇದುವರೆಗೆ ಸೈಮಾ ಅವಾರ್ಡ್ಸ್‌ನಲ್ಲಿ ಅತಿ ಹೆಚ್ಚು ಅವಾರ್ಡ್‌ಗಳನ್ನು ಪಡೆದ ಚಿತ್ರ ಎಂಬ ಹೆಗ್ಗಳಿಕೆಗೆ ಕಾಂತಾರ ಪಾತ್ರವಾಗಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ