Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರ ಠರಾವ್ ಅಂಗೀಕರಿಸದೆ ಇದ್ದಲ್ಲಿ ಕರ್ನಾಟಕ ಬಂದ್ ಎಚ್ಚರಿಕೆ ನೀಡಿದ ವಾಟಾಳ ನಾಗರಾಜ

Advertisement

ಬೆಳಗಾವಿ: ಬೆಳಗಾವಿ ಮಹಾನಗರ ಪರಿಷತ್ ಸಭೆಯಲ್ಲಿ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಠರಾವ್ ಅಂಗೀಕರಿಸಬೇಕು. ಇಲ್ಲದೆ ಇದ್ದಲ್ಲಿ ಕರ್ನಾಟಕ ಬಂದ್ ಕರೆ ನೀಡಲಾಗುವುದು ಎಂದು ಕನ್ನಡ ಹೋರಾಟಗಾರರು ಇದೀಗ ಇಲ್ಲಿನ ಮೇಯರ್ ಗೆ ಎಚ್ಚರಿಕೆ ರವಾನೆ ಮಾಡಿದ್ದಾರೆ. ಜೂನ್ ಎರಡರವರೆಗೆ ಗಡುವು ನೀಡಿದ್ದು ಅಷ್ಟರ ಒಳಗೆ ಬೇಡಿಕೆ ಈಡೇರದೇ ಇದ್ದರೆ ಜೂನ್ 4ರಂದು ಬೆಂಗಳೂರಿನಲ್ಲಿ ಕನ್ನಡ ಹೋರಾಟಗಾರರು ರಾಜ್ಯ ಮಟ್ಟದಲ್ಲಿ ಸಭೆ ನಡೆಸಿ ಇಡೀ ಕರ್ನಾಟಕ ಬಂದ್ ಕರೆ ನೀಡುವುದಾಗಿ ಮಾಜಿ ಶಾಸಕ ಮತ್ತು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಎಚ್ಚರಿಕೆ ನೀಡಿದರು. 

ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಮಂಗಳವಾರ 20ಕ್ಕೂ ಹೆಚ್ಚು ಕನ್ನಡ ಸಂಘಟನೆಗಳ ಕಾರ್ಯಕರ್ತರು ಬೆಳಗಾವಿ ಮಹಾನಗರ ಪಾಲಿಕೆ ಕರ್ನಾಟಕ ಪರ ಠರಾವ್ ಅಂಗೀಕರಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿ ಆಗ್ರಹ ಮಾಡಿದ್ದಾರೆ. ಪಾಲಿಕೆಗೆ ಮುತ್ತಿಗೆ ಹಾಕಲು ನೂರಾರು ಸಂಖ್ಯೆಯಲ್ಲಿ ಕನ್ನಡ ಕಾರ್ಯಕರ್ತರೊಂದಿಗೆ ತೆರಳುತ್ತಿದ್ದಾಗ ವಾಟಾಳ್ ನಾಗರಾಜ್ ಅವರನ್ನು ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.

ಕನ್ನಡ ಹೋರಾಟಗಾರರಾದ ಸಾ.ರಾ. ಗೋವಿಂದ, ಕೆ.ಆರ್. ಕುಮಾರ್, ಅಶೋಕ ಚಂದರಗಿ ಮೊದಲಾದವರು ಮಾತನಾಡಿ, ಬೆಳಗಾವಿ ಮಹಾನಗರ ಪಾಲಿಕೆ ತಕ್ಷಣ ಕರ್ನಾಟಕದ ಪರ ಠರಾವ್ ಅಂಗೀಕಾರ ಮಾಡಬೇಕು, ಇಲ್ಲದೆ ಇದ್ದರೆ ನಾವು ಯಾವುದೇ ಕಾರಣಕ್ಕೆ ಹೋರಾಟವನ್ನು  ಮುಕ್ತಾಯಗೊಳಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಬೆಳಗಾವಿ ಎಲ್ಲಿದೆ ?
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ವಾಟಾಳ್ ನಾಗರಾಜ್ ಅವರು, ಮಹಾನಗರ ಪಾಲಿಕೆ ಯಾವ ನೆಲದಲ್ಲಿದೆ..? ಎಂಬುದನ್ನು ಪಾಲಿಕೆಯಲ್ಲಿ ಅಧಿಕಾರದಲ್ಲಿ ಇರುವವರು ಅರ್ಥ ಮಾಡಿಕೊಳ್ಳಬೇಕು. ಬೆಳಗಾವಿ ಕನ್ನಡಿಗರ ಗಂಡು ಮೆಟ್ಟಿದ ನೆಲ. ಇದು ಕರ್ನಾಟಕದ ಅವಿಭಾಜ್ಯ ಅಂಗ. ಮಹಾಜನ್ ವರದಿ ಜಾರಿ ಆಗಲೇಬೇಕು ಎಂದು ನಿರ್ಣಯ ಮಾಡಬೇಕು. ಮಾಡದಿದ್ದರೆ ಬೆಳಗಾವಿಯಲ್ಲಿ ಕಂಡು ಕೇಳರಿಯದ ರೀತಿಯ ಕ್ರಾಂತಿ ಆಗುತ್ತದೆ. ಇವತ್ತಿನಿಂದ ಒಂದು ವಾರದೊಳಗೆ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ, ಮಹಾನಜನ್ ವರದಿ ಜಾರಿಗೆ ತರಬೇಕು ಎಂದು ನಿರ್ಣಯ ತೆಗೆದುಕೊಳ್ಳಬೇಕು. ಅಲ್ಲಿಯವರೆಗೆ ನಾವು ಗಡುವು ಕೊಡುತ್ತೇವೆ. ಆಗಲೂ ನೀವು ಎಚ್ಚೆತ್ತುಕೊಳ್ಳದಿದ್ದರೆ, ಜೂನ್4ರಂದು ಬೆಂಗಳೂರಲ್ಲಿಎಲ್ಲಾ ಕನ್ನಡ ಸಂಘಟನೆಗಳು ಸಭೆ ಸೇರುತ್ತೇವೆ. ಪ್ರವೀಣ ಶೆಟ್ಟಿ, ಶಿವರಾಮೇಗೌಡ, ನಾರಾಯಣಗೌಡ ಸೇರಿ ಎಲ್ಲ ಬಣಗಳ ಕನ್ನಡ ಸಂಘಟನೆಗಳ ಮುಖಂಡರನ್ನು ಸಭೆಗೆ ಆಹ್ವಾನಿಸುತ್ತೇವೆ. ಅಲ್ಲಿ ಅಖಂಡ ಕರ್ನಾಟಕ ಬಂದ್ ಗೆ ಕರೆ ಕೊಡುತ್ತೇವೆ ಎಂದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯರಿದ್ದಾರೆ...ಏನಿದರ ಅರ್ಥ ?ವಿದ್ಯಾರ್ಥಿನಿಗೆ ಕಿರುಕುಳ: ಕವಿವಿ ಪ್ರಾಧ್ಯಾಪಕ ಡಾ. ದೇವರಾಜನ್ ತಂಗದುರೈ ಅಮಾನತುಇರಾನ್‌-ಅಮೆರಿಕ ಶಾಂತಿ ಒಪ್ಪಂದಕ್ಕೆ ಪೆಜೆಶ್ಕಿಯಾನ್-ಟ್ರಂಪ್ ಸಹಿ ; ತಕ್ಷಣದಿಂದ ಹಾರ್ಮುಜ್ ಜಲಸಂಧಿ ಓಪನ್‌ ; 14 ಅಂಶಗಳ ಒಪ್ಪಂದದಲ್ಲಿ ಏನಿದೆ?ಜಿಂಕೆಯನ್ನೇ ನುಂಗಿದ ಹೆಬ್ಬಾವು !ಪುಸ್ತಕ ಅವಲೋಕನ ಕಾರ್ಯಕ್ರಮಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..! ಶತಮಾನದ ಇತಿಹಾಸ ಹೊಂದಿದೆ ಈ ಪ್ರತಿಷ್ಠಿತ ಶಾಲೆಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!ಭಾರತದ ಆಕಾಶದಲ್ಲಿಲ್ಲ ಮಳೆ ತರುವ ಮೋಡಗಳು ; ಆತಂಕಕಾರಿ ವಾಸ್ತವ ಬಿಂಬಿಸಿದ 3 ಉಪಗ್ರಹಗಳ ಚಿತ್ರಗಳು ; ಇದಕ್ಕೆ ಕಾರಣಗಳೇನು?ಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!ಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!