Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವೀರಶೈವ ಧರ್ಮ: ಗೊಂದಲ ಮೂಡಿಸುವ ಹೇಳಿಕೆಗೆ ಪೀಠಾಧಿಪತಿಗಳ ಖಂಡನೆ

ಬೆಂಗಳೂರು: ವೀರಶೈವ ಧರ್ಮದ ಪ್ರಾಚೀನತೆಯ ಬಗ್ಗೆ ನೂರಾರು ಶಾಸನಗಳಲ್ಲಿ ಹಾಗೂ ಹಲವಾರು ಶರಣರ ವಚನಗಳಲ್ಲಿ ಉಲ್ಲೇಖಗೊಂಡಿದೆ. ಈ ಬಗ್ಗೆ ಸಮಾಜದಲ್ಲಿ ಗೊಂದಲ ಮೂಡಿಸುವ ಹೇಳಿಕೆ ನೀಡುತ್ತಿರುವುದನ್ನು ವೀರಶೈವ ಪೀಠಾಧಿಪತಿಗಳು ಖಂಡಿಸಿದ್ದಾರೆ.

ಉಜ್ಜಯಿನಿ ಪೀಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀಶೈಲ ಪೀಠದ ಚನ್ನಸಿದ್ದರಾಮ ಪಂಡಿತಾರಾಧ್ಯ ಸ್ವಾಮೀಜಿ, ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ಮಲ್ಲಿಕಾರ್ಜುನ ವಿಶ್ವಾರಾಧ್ಯ ಸ್ವಾಮೀಜಿ ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ವೀರಶೈವ ಲಿಂಗಾಯತ ಪ್ರತ್ಯೇಕಗೊಳಿಸುವ ಪೂರ್ವಗ್ರಹ ಪೀಡಿತ ಹೇಳಿಕೆಗಳಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕ್ರಿಸ್ತಪೂರ್ವದಿಂದ 19ನೇ ಶತಮಾನದವರೆಗಿನ ನೂರಾರು ಶಾಸನಗಳಲ್ಲಿ ವೀರಶೈವದ ಪ್ರಸ್ತಾಪವಿದೆ. ಸಂಸ್ಕೃತ, ಕನ್ನಡ, ತಮಿಳು, ತೆಲುಗು ಭಾಷೆಯ ಸಾಹಿತ್ಯ ಮತ್ತು ಶಾಸನಗಳು ವೀರಶೈವ ಪ್ರಾಚೀನತೆಯನ್ನು ಸಾಬೀತುಪಡಿಸಿವೆ. ಎಂ.ಎಂ. ಕಲಬುರ್ಗಿ ಪ್ರಧಾನ ಸಂಪಾದಕತ್ವದ ಕರ್ನಾಟಕ ಸರ್ಕಾರ ಪ್ರಕಟಿತ ವಚನ ಸಂಪುಟಗಳಲ್ಲಿ ಬಸವಣ್ಣನವರೂ ಸೇರಿ 30 ಶರಣರು ತಮ್ಮ 142 ವಚನಗಳಲ್ಲಿ 221 ಬಾರಿ ವೀರಶೈವ ಪದಪ್ರಯೋಗ ಮಾಡಿದ್ದಾರೆ ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಬಸವಣ್ಣನವರೇ ತಮ್ಮ ವಚನದಲ್ಲಿ ತಾವು ನಿಜ ವೀರಶೈವ ಎಂದು ಹೇಳಿಕೊಂಡಿದ್ದಾರೆ. ಈಗ ಕೇವಲ ಮೀಸಲಾತಿಗಾಗಿ ವೀರಶೈವ ಧರ್ಮದ ಸನಾತನ ಘನತೆಗೆ ಧಕ್ಕೆ ತರುವ ಕೆಲಸವನ್ನು ಯಾರೂ ಮಾಡಬಾರದು ಎಂದು ಉಜ್ಜಯಿನಿ, ಶ್ರೀಶೈಲ ಹಾಗೂ ಕಾಶಿ ಪೀಠದ ಶ್ರೀಗಳು ಸಲಹೆ ನೀಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ