Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಿರಿಯ ನಟಿ ಲೀಲಾವತಿ ವಿಧಿವಶ

 

ಬೆಂಗಳೂರು :
ತೀವ್ರ ಉಸಿರಾಟ ತೊಂದರೆ ಅನುಭವಿಸುತ್ತಿದ್ದ ಹಿರಿಯ
ನಟಿ ಲೀಲಾವತಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

 

ಲೀಲಾವತಿ (1938) ದಕ್ಷಿಣ ಭಾರತದ ಪ್ರಸಿದ್ದ ನಟಿ. ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು 6೦೦ ಚಿತ್ರಗಳಲ್ಲಿ ನಟಿಸಿದ್ದಾರೆ. ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು 1999-2೦೦೦ನೇ ಸಾಲಿನಲ್ಲಿ ಪಡೆದ ಲೀಲಾವತಿ ಅವರು, 'ತುಮಕೂರು ವಿಶ್ವವಿದ್ಯಾಲಯ'ದ ಗೌರವ ಡಾಕ್ಟರೇಟ್ ಪದವಿಯನ್ನು 2೦೦8ರಲ್ಲಿ ಪಡೆದರು.

ಲೀಲಾವತಿ ಶುಕ್ರವಾರ ಸಂಜೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಅವರಿಗೆ 86 ವರ್ಷ ವಯಸ್ಸಾಗಿತ್ತು.

ನೆಲಮಂಗಲದ ಸೋಲದೇವನ ಹಳ್ಳಿಯ ನಿವಾಸದಲ್ಲೇ ಅವರಿಗೆ ಆರೈಕೆ ಮಾಡಲಾಗುತ್ತಿತ್ತು. ಪುತ್ರ ವಿನೋದ್ ರಾಜ್ ಅವರು ನೋಡಿಕೊಳ್ಳುತ್ತಿದ್ದರು.

ದಕ್ಷಿಣ ಕನ್ನಡ ದ ಬೆಳ್ತಂಗಡಿ ಮೂಲದ ಲೀಲಾವತಿ ( ಲೀಲಾ ಕಿರಣ್) ಕನ್ನಡ, ತಮಿಳು, ತೆಲುಗು ಚಲನಚಿತ್ರಗಳಲ್ಲಿ ನಟಿಸಿದ್ದ ಹಿರಿಯ ಭಾರತೀಯ ನಟಿ. 50 ವರ್ಷಗಳಿಗೂ ಹೆಚ್ಚು ಕಾಲ ತಮ್ಮ ವೃತ್ತಿಜೀವನದುದ್ದಕ್ಕೂ 600 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದರು. ಕನ್ನಡದಲ್ಲಿ 400 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಮನೆ ಮಾತಾಗಿದ್ದರು. ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಮತ್ತು ಸಂತ ತುಕಾರಂ ಚಿತ್ರಗಳಲ್ಲಿನ ಸ್ಮರಣೀಯ ಅಭಿನಯಕ್ಕಾಗಿ ಅವರು ಜನಪ್ರಿಯತೆಯ ಉತ್ತುಂಗಕ್ಕೆ ಏರಿದ್ದರು. 1999 ರಲ್ಲಿ ಡಾ. ರಾಜ್‌ಕುಮಾರ್ ಪ್ರಶಸ್ತಿ ಮತ್ತು ಫಿಲ್ಮ್‌ಫೇರ್ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ