Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಿರಿಯ ಪತ್ರಕರ್ತ ರಾಮ ಮನಗೂಳಿ ನಿಧನ

 

ಬಾಗಲಕೋಟೆ :
ನಾಡಿನ ಹಿರಿಯ ಪತ್ರಕರ್ತರು ಹಾಗೂ ಬಾಗಲಕೋಟೆಯ ರಾಮ ಮನಗೂಳಿ ಸರ್ ಇಂದು ಅನಾರೋಗ್ಯದಿಂದ ಕೆರೂಡಿ ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಸಂಯುಕ್ತ ಕರ್ನಾಟಕ ಪತ್ರಿಕೆ ಸ್ಥಾನಿಕ ಸಂಪಾದಕರು, ಹಾಗೂ ನಾಡನುಡಿ‌‌ ದಿ‌ನ ಪತ್ರಿಕೆಯ ಸಂಪಾದಕರಾಗಿದ್ದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ರಾಗಿ ಕಾರ್ಯನಿರ್ವಹಿಸಿದ್ದರು , ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿದ್ದರು, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹತ್ತು ಹಲವಾರು ಪ್ರಶಸ್ತಿಗೆ ಇವರು ಭಾಜನರಾಗಿದ್ದರು.
2002 ರಲ್ಲಿ ಬಾಗಲಕೋಟೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ‌ಸಂಘದ ಅಧ್ಯಕ್ಷರಾಗಿ ಕೆಲಸ‌ ಮಾಡುವ ಸಂದರ್ಭದಲ್ಲಿ ಬಾಗಲಕೋಟೆ ಯಲ್ಲಿ ಅವರ ನೇತೃತ್ವದಲ್ಲಿ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಯಶಸ್ವಿಯಾಗಿ ನಡೆಸಿಕೊಟ್ಟರು.
ಬಾಗಲಕೋಟೆ ಜಿಲ್ಲೆಯಲ್ಲಿ ಪ್ರೆಸ್ ಕ್ಲಬ್ ವತಿಯಿಂದ ಅವರ ನೇತೃತ್ವದಲ್ಲಿ ಬೆಳಗಾವಿ ವಿಭಾಗಮಟ್ಟದ ಪತ್ರಕರ್ತರ ಕಾರ್ಯಾಗಾರ ನಡೆಸಿದ್ದು ವಿಶೇಷವಾಗಿತ್ತು.
ನಾಡಿನ ಹಿರಿಯ ಪತ್ರಕರ್ತರಾಗಿದ್ದ ರಾಮ ಮನಗೂಳಿ ಅವರು ಪತ್ರಕರ್ತರಿಗೆ ಸದಾ ಮಾರ್ಗದರ್ಶನ ನೀಡುವ ಜತೆಗೆ , ಕಾರ್ಯನಿರತ ಪತ್ರಕರ್ತರ ಸಂಘಟನೆಗೂ ಹೆಚ್ಚು ಒತ್ತು ನೀಡುತ್ತಿದ್ದರು, ಸಂಘಟನೆಗೆ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆಯ ಸಂದರ್ಭದಲ್ಲಿ ಯಾವುದೇ ಚುನಾವಣೆ ನಡೆಸದಂತೆ ಎಲ್ಲರೊಂದಿಗೆ ಮಾತನಾಡಿ ಅವಿರೋಧ ಆಯ್ಕೆ ಆಗುವಂತೆ ನೋಡಿಕೊಳ್ಳುತ್ತಿದ ಅವರ ಕೆಲಸ ಎಲ್ಲರಿಗೂ ಮೆಚ್ಚುಗೆ ಆಗುತ್ತಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ