Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಿರಿಯ ಸಾಹಿತಿ, ಕತೆಗಾರ ನಾ. ಡಿಸೋಜ ಅಸ್ತಂಗತ : ಇಂದು ಅಂತ್ಯಕ್ರಿಯೆ

ಮಂಗಳೂರು/ಶಿವಮೊಗ್ಗ: ಹಿರಿಯ ಸಾಹಿತಿ ನಾ.ಡಿಸೋಜ (87) (Na. D’Souza) ಅವರು ಅನಾರೋಗ್ಯದಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು. ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿರುವ ಇವರು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರಾಗಿದ್ದ ನಾ.ಡಿಸೋಜಾ ಅವರು ಮಡಿಕೇರಿಯಲ್ಲಿ ನಡೆದ 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ನಾ.ಡಿಸೋಜ ಅವರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ.

ನಾ.ಡಿಸೋಜ ಅವರ ನಿಧನದ ಬಗ್ಗೆ ಪುತ್ರ ನವೀನ್‌ ಡಿಸೋಜ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ಪ್ರಕಟಿಸಿದ್ದಾರೆ. ನಮ್ಮ ಪೂಜ್ಯ ತಂದೆ ಖ್ಯಾತ ಸಾಹಿತಿ, ಡಾ. ನಾ. ಡಿಸೋಜ ಅವರು ಭಾನುವಾರ ಸಂಜೆ 7.50 ಕ್ಕೆ ಅನಾರೋಗ್ಯದ ಕಾರಣ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ದೈವಾಧೀನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಸೋಮವಾರ ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.


ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು. ಅವರ ಜೀವನಚರಿತ್ರೆ ‘ಮಲೆನಾಡಿಗ’ 2012ರಲ್ಲಿ ಪ್ರಕಟವಾಗಿದೆ.





ನಾ ಡಿಸೋಜ ಅವರ ಕತೆಗಳು ಪಾಟೀಲ ಪುಟ್ಟಪ್ಪ ಅವರ ಪ್ರಪಂಚ ಪತ್ರಿಕೆಯಲ್ಲಿ ಮೊದಲು ಪ್ರಕಟಗೊಂಡು ಮುಂದೆ ಎಲ್ಲ ಪತ್ರಿಕೆಗಳಲ್ಲೂ ಬಹುಬೇಡಿಕೆ ಪಡೆದವು.  ಡಿಸೋಜ ಅವರ ಹಲವಾರು ಸಣ್ಣಕತೆಗಳು ಕೊಂಕಣಿ, ಮಲಯಾಳ, ತೆಲುಗು, ಹಿಂದಿ, ಇಂಗ್ಲಿಷ್  ಭಾಷೆಗಳಿಗೆ ಅನುವಾದಗೊಂಡಿವೆ.





ಲಿಂಗನಮಕ್ಕಿ ಅಣೆಕಟ್ಟೆ ನಿರ್ಮಾಣದ ವೇಳೆ ಮುಳುಗಡೆಯಿಂದಾಗಿ ಶರಾವತಿ ಕಣಿವೆಯಲ್ಲಿ ಆದ ತಲ್ಲಣಗಳ ಸೂಕ್ಷ್ಮವಾಗಿ ಗಮನಿಸುತ್ತಿದ್ದ ನಾ.ಡಿಸೋಜಾ ಅವರು ಅದನ್ನು ಕಥೆ, ಕಾದಂಬರಿಗಳ ಮೂಲಕ ಕಟ್ಟಿಕೊಟ್ಟಿದ್ದರು. ‘ಲಿಂಗನಮಕ್ಕಿ ಅಣೆಕಟ್ಟೆ ಜನರ ಜೀವನವನ್ನು ಸುಧಾರಿಸುತ್ತದೆ ಎಂದು ನಂಬಲಾಗಿತ್ತು. ಆದರೆ, ಅಂಥದ್ದೇನೂ ಆಗಲಿಲ್ಲ. 112 ಗ್ರಾಮಗಳು ಮುಳುಗಡೆಯಾಗಿದ್ದು, ಸುಮಾರು 90,000 ಜನರು ಸ್ಥಳಾಂತರಗೊಂಡಿದ್ದಾರೆ. ನಾನು ಆ ಜನರ ಸಂಕಷ್ಟಗಳನ್ನು ಆಲಿಸಿದೆ ಮತ್ತು ಅವರು ನನಗೆ ಕಾದಂಬರಿ ಮತ್ತು ಸಣ್ಣ ಕಥೆಗಳನ್ನು ಬರೆಯಲು ಪ್ರೇರೇಪಿಸಿದರು’ ಎಂದು ನಾ.ಡಿಸೋಜಾ ಹೇಳುತ್ತಿದ್ದರು.





‘ಮುಳುಗಡೆ ಸಂತ್ರಸ್ತರ ಅಂದಿನ ಸಮಸ್ಯೆಗಳು ಈಗಲೂ ಬಗೆಹರಿದಿಲ್ಲ. ನ್ಯಾಯಯುತ ಪರಿಹಾರ ಹಾಗೂ ಪರ್ಯಾಯ ಜಮೀನು ಪಡೆಯಲು ಹಲವರು ದಶಕಗಳ ನಂತರವೂ ಇನ್ನೂ ಹೋರಾಟ ಮಾಡುತ್ತಿದ್ದಾರೆ’ ಎಂದು ಆಗಾಗ ಬೇಸರ ವ್ಯಕ್ತಪಡಿಸುತ್ತಿದ್ದರು.


ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬಟ್ ಡಿಸೋಜ ಅವರು 1937ರ ಜೂನ್ 6ರಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜನಿಸಿದರು. ತಂದೆ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಎಫ್.ಪಿ. ಡಿಸೋಜ, ತಾಯಿ ರೂಪೀನಾ ಡಿಸೋಜ.
ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ.
ಬರಹಗಾರರಾದ ಇವರು ಲೋಕೋಪಯೋಗಿ ಇಲಾಖೆಯಲ್ಲಿ ನೌಕರರಾಗಿ ನಿವೃತ್ತಿ ಹೊಂದಿದವರು. ಪ್ರಾರಂಭದ ದಿನಗಳಲ್ಲಿ ‘ಪ್ರಪಂಚ’ ಪತ್ರಿಕೆಗೆ ಕಥೆಗಳನ್ನು ಬರೆಯುತ್ತಿದ್ದರು. 1964ರಲ್ಲಿ ಡಿಸೋಜರ ಮೊದಲ ಕಾದಂಬರಿ ‘ಬಂಜೆ ಬೆಂಕಿ’ ಪ್ರಕಟವಾಯಿತು. ನಂತರ ಮಂಜಿನ ಕಾನು, ಈ ನೆಲ ಈಜಲ, ಕೆಂಪು ತ್ರಿಕೋನ, ನೆಲೆ, ಮಾನವ, ಅಜ್ಞಾತ, ಒಂದು ಜಲಪಾತದ ಸುತ್ತ, ಕೈತಾನ್ ಗಾಂಧಿಯ ಸ್ವಾತಂತ್ರ ಹೋರಾಟ, ಜೀವಕಳೆ, ಪ್ರೀತಿಯೊಂದೆ ಸಾಲದೇ?, ಪುಜ್ಞಾಬಲಿ, ನೆಲೆ, ನಡುವೆ ನಿಂತ ಜನ, ಗಾಂಧಿ ಬಂದರು, ಒಡ್ಡು, ಮಾನವ, ಮುಳುಗಡೆ, ವಿಷಾನಿಲ ಸೇರಿದಂತೆ ಸುಮಾರು 40 ಕೃತಿಗಳನ್ನು ಬರೆದಿದ್ದಾರೆ.

ಇವರು ಬರೆದಿರುವ ದ್ವೀಪ, ಮುಳುಗಡೆ, ಕಾಡಿನ ಬೆಂಕಿ, ಬಳುವಳಿ, ಬೆಟ್ಟದಪುರದ ದಿಟ್ಟ ಮಕ್ಕಳು, ಆಂತರ್ಯ ಕೃತಿಗಳು ಚಲನಚಿತ್ರಗಳಾಗಿ ತೆರೆಮೇಲೆಯೂ ಮೂಡಿಬಂದಿದೆ. ಮಕ್ಕಳ ಸಾಹಿತ್ಯದಲ್ಲಿ ಸುಮಾರು ಹನ್ನೆರಡು ಕೃತಿಗಳನ್ನು ರಚಿಸಿದ್ದಾರೆ. ರೇಡಿಯೋ ನಾಟಕಗಳನ್ನೂ ಬರೆದಿದ್ದಾರೆ.
ಡಿಸೋಜ ಅವರಿಗೆ ಕರ್ನಾಟಕ ಸರ್ಕಾರ ಕೊಡಮಾಡುವ 2023-24ನೇ ಸಾಲಿನ ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಲ್ಲದೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕೇಂದ್ರಸಾಹಿತ್ಯ ಅಕಾಡಮಿಯ ಬಾಲ ಸಾಹಿತ್ಯ ಪುರಸ್ಕಾರ, ಗುಲ್ವಾಡಿ ವೆಂಕಟರಾವ್‌ ಪ್ರಶಸ್ತಿ, ನಿರಂಜನ ಸಾಹಿತ್ಯ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ ಕುವೆಂಪು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಆಳ್ವಾಸ್ ನುಡಿಸಿರಿ ಪ್ರಶಸ್ತಿ ನವದೆಹಲಿ ಕಳಾ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ