ಅಂಕೋಲಾ:ಅಂಕೋಲಾ ತಾಲೂಕಿನ ಅಚವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ವಿಭೂತಿ ಜಲಪಾತಕ್ಕೆ ಜೂನ್ 8 ರಿಂದ ಪ್ರವಾಸಿಗರಿಗೆ ಸುರಕ್ಷತೆ ದೃಷ್ಟಿಯಿಂದ ತಾತ್ಕಾಲಿಕ ಅವಧಿಯ ನಿರ್ಬಂಧ ಹೇರಲಾಗಿದೆ.
ಹಸಿರು ಕಾನನದ ನಡುವೆ ಭೋರ್ಗರೆಯುವ ಜಲಪಾತ ಪ್ರವಾಸಿಗರನ್ನು ಆಕರ್ಷಿಸಿ ಪ್ರತಿದಿನ ನೂರಾರು ಸಂಖ್ಯೆಯ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಬರುತ್ತಿದ್ದರು. ತಾಲೂಕಿನಲ್ಲಿ ಮಳೆ ಆರಂಭವಾಗಿದ್ದು ಮುಂದಿನ ದಿನಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆ ಇದೆ.