ಬೆಂಗಳೂರು: ವಿಧಾಸಭೆಯಿಂದ ವಿಧಾನಪರಿಷತ್ತಿಗೆ ಚುನಾವಣೆಗೆ ಕಾಂಗ್ರೆಸ್ ನಾಲ್ಕು ಅಭ್ಯರ್ಥಿಗಳನ್ನು ಘೋಷಿಸಿದೆ.
ಒಟ್ಟು ಏಳು ಸ್ಥಾನಗಳು ಖಾಲಿ ಇದ್ದು, 4 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಬುಧವಾರ ಅಖೈರು ಮಾಡಿದೆ.
ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ. ಮೋಹನ್, ಶಿವಣ್ಣ ಮಲ್ಲವಳ್ಳಿ ಅವರ ಹೆಸರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂತಿಮಗೊಳಿಸಿದ್ದಾರೆ.
