Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿಜಯ ಕರ್ನಾಟಕ ಬೆಳಗಾವಿ-ಬಾಗಲಕೋಟೆ ಆವೃತ್ತಿಯ ಸ್ಥಾನಿಕ ಸಂಪಾದಕ ಕೆ. ಸುರೇಶ್ ಸೇರಿ 28 ಪತ್ರಕರ್ತರಿಗೆ ದತ್ತಿ ಪ್ರಶಸ್ತಿ

ಬೆಳಗಾವಿ/ಬೆಂಗಳೂರು:

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಪ್ರಸಕ್ತ ಸಾಲಿನ 'ಮಹದೇವ ಪ್ರಕಾಶ್' ಪ್ರಶಸ್ತಿಗೆ ವಿಜಯ ಕರ್ನಾಟಕದ ಬೆಳಗಾವಿ-ಬಾಗಲಕೋಟೆ ಅವೃತ್ತಿಯ ಸ್ಥಾನಿಕ ಸಂಪಾದಕ ಕೆ. ಸುರೇಶ್ ಸೇರಿದಂತೆ 28 ಮಂದಿಯನ್ನು ನಾನಾ ದತ್ತಿ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ.

ಪ್ರತಿಷ್ಠಿತ 'ದತ್ತಿನಿಧಿ ಪ್ರಶಸ್ತಿ'ಗಳನ್ನು ವೃತ್ತಿ ಸೇವೆ, ಸಾಮಾಜಿಕ ಬದ್ಧತೆ ಹಾಗೂ ಮಾಧ್ಯಮ ರಂಗದ ಸಾಧನೆಗಳನ್ನು ಪರಿಗಣಿಸಿ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿರುವ ಪತ್ರಕರ್ತರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 5 ಸಾವಿರ ರೂ. ನಗದು ಬಹುಮಾನ, ಪ್ರಶಸ್ತಿ ಫಲಕ ಒಳಗೊಂಡಿದೆ. ಚಿಕ್ಕಮಗಳೂರಿನಲ್ಲಿ ಜು. 25ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುರೇಶ್ ಪರಿಚಯ : 
ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಮೂಲದವರಾದ ಸುರೇಶ್ ಅವರು ಬೆಳಗಾವಿಯ ಜೊತೆಗೆ ಬಾಗಲಕೋಟೆ ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕರಾಗಿ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಈ ಮೊದಲು ವಿಜಯವಾಣಿ, ಉದಯವಾಣಿ, ರೂಪತಾರಾ, ಹೊಸದಿಗಂತ ಪತ್ರಿಕೆಗಳಲ್ಲಿ ಸುಮಾರು ಎರಡು ದಶಕಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿ ಅಪಾರವಾದ ಅನುಭವ ಹೊಂದಿದ್ದಾರೆ. ಇವರ ಅನುಪಮ ಪತ್ರಿಕಾ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.


ಕೆ.ಎಚ್. ರುದ್ರಯ್ಯ ಪ್ರಶಸ್ತಿ: ರವಿಪ್ರಕಾಶ್,
ಗೊಮ್ಮಟ ಮಾಧ್ಯಮ ಪ್ರಶಸ್ತಿ: ಗಿರೀಶ್ ರಾವ್ ಹತ್ವಾರ್ (ಜೋಗಿ), ಎಚ್. ಎಸ್. ದೊರೆಸ್ವಾಮಿ ಡಿವಿಜಿ ಪ್ರಶಸ್ತಿ: ಬಿ.ವಿ.ಗೋಪಿನಾಥ್ ಕೋಲಾರ, ಜಯಶೀಲರಾವ್ ಪ್ರಶಸ್ತಿ: ಮೀನಾ ಮೈಸೂರು, ಸಿ.ಆರ್.ಕೃಷ್ಣರಾವ್: ಅನಂತ ಚಿನಿವಾರ, ಡಾ.ಎಂ.ಎಂ.ಕಲ್ಬುರ್ಗಿ ಪ್ರಶಸ್ತಿ: ಜಾನ್ ಮಥಾಯಿಸ್, ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ: ಮಾವಳ್ಳಿ ಶಂಕರ್, ಪಾಟೀಲ್‌ ಪುಟ್ಟಪ್ಪ ಪ್ರಶಸ್ತಿ: ಅಡಿವೇಂದ್ರ ಇನಾಂದಾರ. ವಿಶೇಷ ಪ್ರಶಸ್ತಿ: ಇಬ್ರಾಹಿಂ ಅಡ್ಡಸ್ಥಳ, ಮಂಗಳೂರು.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು