Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಂಚಾರ ನಿಯಮ ಉಲ್ಲಂಘನೆ : ಕಠಿಣ ಕ್ರಮಕ್ಕೆ ಪರಂ ಸೂಚನೆ

 

ಬೆಳಗಾವಿ :
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ಕಟ್ಟಲು ಏಳು ದಿನಗಳ ಕಾಲಾವಕಾಶ ನೀಡಬೇಕು. ಇದಾದ ಬಳಿಕ ನ್ಯಾಯಾಲಯದಿಂದ ಸಮನ್ಸ್ ಹೋಗಬೇಕು; ದಂಡ ಕಟ್ಟದಿದ್ದರೆ ಅಥವಾ ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ವಾಹನ ಸೀಜ್ ಮಾಡಬೇಕು ಎಂದು ಗೃಹ ಸಚಿವ ಪರಮೇಶ್ವರ್ ಸೂಚಿಸಿದರು.

ನಗರ ಪೊಲೀಸ್ ಕಮಿಶನರ್ ಕಚೇರಿಗೆ ಭೇಟಿ ನೀಡಿದ ಅವರು, ಸಂಚಾರ ನಿಯಮ ಉಲ್ಲಂಘನೆ ದಂಡ ವಿಧಿಸುವ ವಿಧಾನ, ಚಲನ್ ಜನರೇಟ್ ಮಾಡುವ ವಿಧಾನವನ್ನು ಪರಿಶೀಲಿಸಿದರು.

ಸಿಸಿಟಿವಿ ದೃಶ್ಯಾವಳಿ ವೀಕ್ಷಣೆ: ಬೆಳಗಾವಿ ನಗರದ ವಿವಿಧ ವೃತ್ತಗಳು ಹಾಗೂ ರಸ್ತೆಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಗೃಹಸಚಿವ ಜಿ.ಪರಮೇಶ್ಚರ ವೀಕ್ಷಿಸಿದರು.

ಸಿಸಿಟಿವಿ ಮೇಲೆ ನಿಗಾವಹಿಸಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಪ್ರತಿಯೊಂದು ಕ್ಯಾಮೆರಾ ಅಳವಡಿಸಿರುವ ವೃತ್ತ ಮತ್ತು ರಸ್ತೆ ಕುರಿತು ಸಂಪೂರ್ಣ ಮಾಹಿತಿ ಇರಬೇಕು.

ಸ್ಮಾರ್ಟ್ ಸಿಟಿ ಯೋಜನೆಯಡಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳ ಮೇಲೆ ಕೂಡ ನಿಗಾವಹಿಸಬೇಕು ಎಂದು ಸೂಚನೆ ನೀಡಿದರು.

ಪೊಲಿಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಅವರು, ವಿವಿಧ ಘಟಕಗಳ ಕಾರ್ಯನಿರ್ವಹಣೆ ಕುರಿತು ವಿವರಿಸಿದರು.

ಸಾಮಾಜಿಕ ಜಾಲತಾಣ ನಿಗಾ ಘಟಕವು ಕ್ರಿಯಾಶೀಲವಾಗಿದ್ದು, ಪ್ರತಿಯೊಂದು ಚಟುವಟಿಕೆಗಳ ಮೇಲೆ ನಿಗಾವಹಿಸಲಾಗಿದೆ. ಇತ್ತೀಚೆಗೆ ಪ್ರಕರಣಗಳನ್ನು ಕೂಡ ದಾಖಲಿಸಲಾಗಿದೆ ಎಂದರು.

ಅಧಿವೇಶನ ಸಂದರ್ಭದಲ್ಲೂ ಯಾವುದೇ ರೀತಿಯ ಅಹಿತಕರ ಘಟನೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ತೀವ್ರ ನಿಗಾ ವಹಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಸಿದ್ದರಾಮಪ್ಪ ತಿಳಿಸಿದರು.

ನಗರದಲ್ಲಿ ಯಾವುದೇ ರೀತಿಯ ಆಕ್ಷೇಪಾರ್ಹ ಪೋಸ್ಟ್ ಗಳು, ಕೋಮುಭಾವನೆ ಕೆರಳಿಸುವ ಪೋಸ್ಟ್, ಪ್ರಚೋದಾತ್ಮಕ ಹೇಳಿಕೆ, ಘಟನೆಗಳು ಕಂಡುಬಂದರೆ ಕೂಡಲೇ ಐಟಿ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಡಿಸಿಪಿ ರೋಹನ್ ಜಗದೀಶ್ ವಿವರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಅಧೀಕ್ಷಕ ಡಾ.ರವೀಂದ್ರ ಗಡಾದಿ, ಬೆಳಗಾವಿ ನಗರ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಸ್ನೇಹಾ ಸೇರಿದಂತೆ ಪೊಲೀಸ್ ಆಯುಕ್ತಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ