Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

Viral..Happy birthday ಹೆತ್ತವರಿಗೆ ತಂದಳು ಕೀರ್ತಿ..!

ಜನ ಜೀವಾಳ ಸರ್ಚ್ ಲೈಟ್ ಬೆಳಗಾವಿ :ತನ್ನ ಹುಟ್ಟುಹಬ್ಬಕ್ಕೆ ಈ ಯುವತಿ ಮಾಡಿದ್ದೇನು ಗೊತ್ತೇ...?ಬೆಳಗಾವಿಯ ಯುವತಿ ತನ್ನ ಹುಟ್ಟು ಹಬ್ಬಕ್ಕೆ ಮಾಡಿದ ಸಣ್ಣ ಕಾರ್ಯವೊಂದು ಇದೀಗ ಸಾರ್ವಜನಿಕರ ಮನ ಗೆಲ್ಲುವಂತಾಗಿದೆ. ಜತೆಗೆ ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ವೈರಲ್ ಗೆ ಕಾರಣವಾಗಿದೆ.

ಬೆಳಗಾವಿಗೆ ಹೊಂದಿಕೊಂಡಿರುವ ಕಣಬರಗಿಯ ಯುವತಿ ಕೀರ್ತಿ ಧಾಮಣೆಕರ ತನ್ನ ಹುಟ್ಟುಹಬ್ಬವನ್ನು ಈ ವರ್ಷ ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಹುಟ್ಟು ಹಬ್ಬದ ಸಲುವಾಗಿ ಎರಡು ದಿನಗಳ ಕಾಲ ಕಣಬರಗಿಯ ವಿಶಾಲ ಕೆರೆಯಲ್ಲಿ ಕಣ್ಣು ಕುಕ್ಕುವ ರೀತಿಯಲ್ಲಿ ಸಾರ್ವಜನಿಕರು ಎಸೆದಿದ್ದ ಪ್ಲಾಸ್ಟಿಕ್‌ಗಳು, ಹೂವಿನ ಹಾರಗಳು ಸೇರಿದಂತೆ ಇತರ ವಸ್ತುಗಳನ್ನು ಕೆರೆಯಿಂದ ಎತ್ತಿ ಚೀಲಕ್ಕೆ ತುಂಬಿಸಿ ಅಲ್ಲಿಂದ ಹೊರ ಹಾಕುವ ಮೂಲಕ ಭಾರೀ ಚರ್ಚೆಗೆ ಗ್ರಾಸವಾಗಿದ್ದಾರೆ.

ಈ ಮೂಲಕ ಕೆರೆಯ ನೀರು ಮಲಿನವಾಗುವುದನ್ನು ತಪ್ಪಿಸಲು ತನ್ನ ಅಳಿಲು ಸೇವೆಯನ್ನು ಮಾಡಿದ್ದಾರೆ. ಇಂದು ತಮ್ಮ ಹುಟ್ಟು ಹಬ್ಬವನ್ನು ಆಡಂಬರವಾಗಿ ಆಚರಿಸಿಕೊಂಡು ಸಾಕಷ್ಟು ದುಂದು ವೆಚ್ಚ ಮಾಡಿಕೊಳ್ಳುತ್ತಾರೆ. ಅದರಲ್ಲೂ ವಾಟ್ಸಾಪ್ ಸ್ಟೇಟಸ್ ಮೂಲಕ ಹುಟ್ಟುಹಬ್ಬವನ್ನು ಆಚರಿಸುವವರೆ ಜಾಸ್ತಿ. ಅಂತಹ ಜನರಿಗೆ ಈ ಸಾಮಾಜಿಕ ಕಳಕಳಿ ಹೊಂದಿರುವ ಈ ಯುವತಿ ಮಾದರಿಯಾಗಿ ನಿಂತಿದ್ದಾರೆ.

ಜೊತೆಗೆ ಕಣಬರಗಿ ಕೆರೆಗೆ ಹಾರ, ಪ್ಲಾಸ್ಟಿಕ್ ಸೇರಿದಂತೆ ಇತರ ಕಸಗಳನ್ನು ಎಸೆಯುವ ಜನರಿಗೆ ಇನ್ನು ಮುಂದೆ ಕಸ ಎಸೆಯದಂತೆ ಪರೋಕ್ಷವಾಗಿ ಎಚ್ಚರಿಕೆ ರವಾನಿಸಿದ್ದಾರೆ. ಎರಡು ದಿನಗಳ ಕಾಲ ಯುವತಿ ಕೆರೆಯಲ್ಲಿ ಇಳಿದು ಕಸವನ್ನು ಸ್ವಚ್ಛಗೊಳಿಸುತ್ತಿರುವ ದೃಶ್ಯ ಎಲ್ಲರ ಗಮನ ಸೆಳೆದಿದೆ. ಮಾತ್ರವಲ್ಲ ಇಂತಹ ಜನರಿದ್ದರೆ ಸಮಾಜ ಸುಧಾರಣೆ ಸ್ವಲ್ಪ ಮಟ್ಟಿಗಾದರೂ ಸಾಧ್ಯವಿದೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.

ಒಟ್ಟಾರೆ, ಸಾಮಾಜಿಕ ಕಳಕಳಿ ಹೊಂದಿರುವ ಈ ಯುವತಿಯ ಕಾರ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ. ಯುವತಿ ತನ್ನ ಹುಟ್ಟು ಹಬ್ಬವನ್ನು ವಿಶೇಷ ಹಾಗೂ ವಿಭಿನ್ನವಾಗಿ ಆಚರಿಸಿಕೊಳ್ಳುತ್ತಿರುವ ಚಿಂತನೆಗೆ ಜನ ಮನಸೋತಿದ್ದು ಹುಟ್ಟುಹಬ್ಬಕ್ಕೆ ವಿಶೇಷವಾಗಿ ಶುಭ ಹಾರೈಕೆ ಮಾಡುತ್ತಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ