Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಿವೃತ್ತಿ ಘೋಷಣೆ ಮಾಡಿದ ವಿರಾಟ್ ಕೊಹ್ಲಿ !

ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅತ್ಯಂತ ಸೊಗಸಾಗಿ ಬ್ಯಾಟಿಂಗ್ ನಡೆಸಿದ್ದು ವಿಶ್ವದಲ್ಲೇ ಅಗ್ರಸ್ಥಾನ ಅಲಂಕರಿಸಿದ್ದರು. ಇದೀಗ ಅವರು ಟಿ20 ವಿಶ್ವಕಪ್ ನಲ್ಲಿ ಭಾರತಕ್ಕೆ ಅಮೋಘ ಜಯ ತಂದು ಕೊಟ್ಟಿದ್ದಾರೆ. ಜೊತೆಗೆ ತಮ್ಮ t20 ವಿಶ್ವಕಪ್ ಜೀವನಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.ವಿಶ್ವ ಕಪ್ ಫೈನಲ್ ಪಂದ್ಯದಲ್ಲಿ ಅವರು ಅಮೋಘ 76 ರನ್ ಬಾರಿಸಿದ್ದಾರೆ.ವಿಶ್ವ ಕಪ್ ಪಂದ್ಯವನ್ನು ಗೆದ್ದ ನಂತರ ಇದು ತಮ್ಮ ಕೊನೆಯ ಟಿ 20 ವಿಶ್ವಕಪ್ ಎಂದು ಘೋಷಣೆ ಮಾಡಿದ್ದಾರೆ. ಈಗ ಮುಂದಿನ ಪೀಳಿಗೆಗೆ ಭಾರತೀಯ ಕ್ರಿಕೆಟ್ ಅನ್ನು ತೆಗೆದುಕೊಂಡು ಹೋಗುವ ಸಮಯ ಬಂದಿದೆ ಎಂದು ಅವರು ತಿಳಿಸಿದ್ದಾರೆ. ಭಾರತ ಇಂದು ವಿಶ್ವಕಪ್ ಗೆದ್ದ ನಂತರ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಪರಸ್ಪರ ಅಪ್ಪಿಕೊಂಡು ಅಳಲು ಪ್ರಾರಂಭಿಸಿದರು. ಒಟ್ಟಾರೆ 140 ಕೋಟಿ ಜನಸಂಖ್ಯೆಯ ಭಾರತ ಎರಡನೇ ಬಾರಿಗೆ ವಿಶ್ವಕಪ್ ಗೆದ್ದಿರುವುದು ಎಲ್ಲರ ಸಂತಸಕ್ಕೆ ಕಾರಣವಾಗಿದೆ. ಭಾರತ ತಂಡದ ಪ್ರತಿಯೊಬ್ಬ ಆಟಗಾರರು ಪಂದ್ಯ ಗೆದ್ದ ನಂತರ ಆನಂದ ಭಾಷ್ಪ ಸುರಿಸಿದರು.

ಸರಣಿಯುದ್ದಕ್ಕೂ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಕೊಹ್ಲಿ ಫೈನಲ್ ಪಂದ್ಯದಲ್ಲಿ ಅಮೋಘ ಆಟವಾಡಿ 76(59 ಎಸೆತ) ರನ್ ಗಳಿಸಿದ್ದರು.
ಪಂದ್ಯ ಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ 35 ರ ಹರೆಯದ ಕೊಹ್ಲಿ ”ಇದನ್ನೇ ನಾವು ಸಾಧಿಸಲು ಬಯಸಿದ್ದೆವು. ದೇವರು ದೊಡ್ಡವನು.ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆವು. ಇದು ಬಹಿರಂಗ ರಹಸ್ಯವಾಗಿತ್ತು.ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ. ಐಸಿಸಿ ಟೂರ್ನಮೆಂಟ್ ಗೆಲ್ಲಲು ನಾವು ಕಾಯುತ್ತಿದ್ದೇವೆ. ನೀವು ರೋಹಿತ್‌ನಂತಹವರನ್ನು ನೋಡಿ, ಅವರು 9 ಟಿ20 ವಿಶ್ವಕಪ್‌ಗಳನ್ನು ಆಡಿದ್ದಾರೆ ಮತ್ತು ಇದು ನನ್ನ ಆರನೇ ವಿಶ್ವಕಪ್. ಅವರು ಅದಕ್ಕೆ ಅರ್ಹರು. ಭಾವನೆಗಳನ್ನು ಹಿಡಿದಿಟ್ಟುಕೊಳ್ಳುವುದು ಕಷ್ಟಕರವಾಗಿದೆ ಮತ್ತು ಅದು ನಂತರ ಮುಳುಗುತ್ತದೆ ಎಂದು ನಾನು ಭಾವಿಸುತ್ತೇನೆ. ಇದು ಅದ್ಭುತ ದಿನ ಮತ್ತು ನಾನು ಕೃತಜ್ಞನಾಗಿದ್ದೇನೆ’ ಎಂದು ಸಂಭ್ರಮದಲ್ಲೇ ವಿದಾಯ ಹೇಳಿದ್ದಾರೆ.
ಕೊಹ್ಲಿ ತಮ್ಮ 125ಪಂದ್ಯಗಳ ಟಿ 20 ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ಭಾರತದ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಸ್ವರೂಪದಲ್ಲಿ ಕೊನೆಗೊಳಿಸಿದ್ದಾರೆ. 4188 ರನ್, 48.69 ಸರಾಸರಿ ಮತ್ತು ಸ್ಟ್ರೈಕ್ ರೇಟ್ 137.04 ಹೊಂದಿದ್ದಾರೆ. ಈ ಟಿ 20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ 59 ಎಸೆತಗಳಲ್ಲಿ 76 ರನ್ ಮಾಡುವ ಮೊದಲು ಏಳು ಇನ್ನಿಂಗ್ಸ್‌ಗಳಲ್ಲಿ ಕೇವಲ 75 ರನ್ ಮಾತ್ರ ಗಳಿಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ