Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಶ್ವಕರ್ಮ ಸಮಾಜ ಕಂದಾಚಾರ ಬಿಟ್ಟು ಹೊರ ಬರಬೇಕು- ಪ್ರಾಚಾರ್ಯೆ ನಿರ್ಮಲಾ ಬಟ್ಟಲ

ಚಿಕ್ಕೋಡಿ: 'ವಿಶ್ವಕರ್ಮ ಸಮುದಾಯದ ಉಪ ಜಾತಿಗಳು ಒಂದಾದಾಗ ಮಾತ್ರ ಸಮಾಜದಲ್ಲಿ ಬೆಲೆ ಸಿಗುತ್ತದೆ. ಕಂದಾಚಾರ ಬಿಟ್ಟು ಹೊರಬಂದು, ಜ್ಞಾನದ ತಳಹದಿಯ ಮೇಲೆ ವಿಶ್ವಕರ್ಮ ಸಮಾಜ ಕಟ್ಟುವ ಹೊಣೆಗಾರಿಕೆ ಎಲ್ಲರದ್ದಾಗಿದೆ' ಎಂದು ಬೆಳಗಾವಿಯ ಶಿಕ್ಷಣ ಕಾಲೇಜಿನ ಪ್ರಾಚಾರ್ಯೆ ನಿರ್ಮಲಾ ಬಟ್ಟಲ ಹೇಳಿದರು.

ಪಟ್ಟಣದ ದಾನಲಿಂಗ ದೇವಸ್ಥಾನದ ಆವರಣದಲ್ಲಿ ದಾನಲಿಂಗ ದೇವಸ್ಥಾನ ಟ್ರಸ್ಟ್ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ದಾನಲಿಂಗ ಸ್ವಾಮಿ ಆರಾಧನಾ ಮಹೋತ್ಸವ ಉದ್ಘಾಟಿಸಿ ಮಾತನಾಡಿದರು.

'ಕುಲಕಸುಬು ಮಾಡುವುದರೊಂದಿಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದ್ದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಬಹುದು. ಉದ್ಯೋಗದಲ್ಲಿ ಇರುವವರಿಗೂ ಹೆಣ್ಣು ಕೊಟ್ಟು ಮದುವೆ ಮಾಡಲು ಮುಂದಾಗಬೇಕು' ಎಂದು ಸಲಹೆ ನೀಡಿದರು.

ವಿಶ್ವಕರ್ಮ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷ ಪ್ರಭಾಕರ ಬಡಿಗೇರ ಮಾತನಾಡಿ, 'ನಮ್ಮವರೊಂದಿಗೆ ನಾವೇ ಸ್ಪರ್ಧೆಗಿಳಿಯಬಾರದು. ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದ ಸಮಾಜದವರನ್ನು ಮುಂದೆ ತರಲು ಯತ್ನಿಸಬೇಕು' ಎಂದು ಹೇಳಿದರು.

ಸವದತ್ತಿಯ ಸೋಮಲಿಂಗಯ್ಯಸ್ವಾಮಿ ವಡಿಯರ ಸಾನ್ನಿಧ್ಯ, ದಾನಯ್ಯಸ್ವಾಮಿ ವಡಿಯರ ಅಧ್ಯಕ್ಷತೆ ವಹಿಸಿದ್ದರು. ಉಮ್ಮಳವಾಡದ ರಾಮಯ್ಯ ವಡಿಯರ, ಮುರುಘರಾಜ ಹಲ್ಯಾಳಕರ, ರಾಜು ದೀಕ್ಷಿತ, ಮಹೇಶ ಬಡಿಗೇರ, ಎಚ್ಚರಪ್ಪ ಬೇನಾಳ, ರಾಘವೇಂದ್ರ ಪತ್ತಾರ, ಶ್ರೀಕಾಂತ ಪತ್ತಾರ, ಅಜೀತ ಪೋದ್ದಾರ ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ