Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಯುವಕರು ಆಸೆ ಆಮಿಷಗಳಿಗೆ ಒಳಗಾಗದೆ ನಿರ್ಭಯವಾಗಿ ಮತದಾನ ಮಾಡಿ

 

ಬೆಳಗಾವಿ : ನಗರದ ಕೆ.ಎಲ್.ಇ ಸಂಸ್ಥೆಯ ರಾಜಾಲಖಮಗೌಡ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ದಿನಾಂಕ ೨೫-೦೧-೨೦೨೫ ರಂದು “ರಾಷ್ಟ್ರೀಯ ಮತದಾರರ ದಿನಾಚರಣೆ” ಆಚರಿಸಲಾಯಿತು.

ಮಹಾವಿದ್ಯಾಲಯದ ಪ್ರಾಚಾರ್ಯ ವಿಶ್ವನಾಥ. ಚ. ಕಾಮಗೋಳ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ, ಪ್ರಜಾಪ್ರಭುತ್ವವಿರುವ ರಾಷ್ಟ್ರಗಳಲ್ಲಿ ಮತದಾನವು ಪವಿತ್ರವಾದುದು. ಮತದಾನವು ದೇಶದ ನಾಗರಿಕರ ಹಕ್ಕು ಮತ್ತು ಕರ್ತವ್ಯವಾಗಿರುತ್ತದೆ. ಇಂದಿನ ಯುವಕರೆ ಮುಂದಿನ ನಾಗರಿಕರು ಮತ್ತು ನಾಯಕರಾಗುವರು. ನಾಗರಿಕರಾಗಿ ತಮ್ಮನ್ನು ಪ್ರತಿನಿಧಿಸುವ ಪ್ರತಿನಿಧಿಯನ್ನು ಆಯ್ಕೆ ಮಾಡುವ ಹೊಣೆಗಾರಿಕೆ ಯುವಕರ ಮೇಲೆ ಇರುತ್ತದೆ. ಯುವಕರು ಆಸೆ ಆಮಿಷಗಳಿಗೆ ಒಳಗಾಗದೆ ನಿರ್ಭಯವಾಗಿ ಮತದಾನ ಮಾಡಿ ಪ್ರತಿನಿಧಿಯನ್ನು ಚುನಾಯಿಸುವುದು ಆದ್ಯ ಕರ್ತವ್ಯವಾಗಿರುತ್ತದೆ ಎಂದು ಮತದಾನದ ಪ್ರಾಮುಖ್ಯತೆಯನ್ನು ವಿವರಿಸಿದರು.

ಕನ್ನಡ ಉಪನ್ಯಾಸಕ ಸಹದೇವ ಬ ಬನ್ನಿಮಟ್ಟಿ ಮತದಾರರ ಪ್ರತಿಜ್ಞಾ ವಿಧಿ ಭೋದಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಉಪ ಪ್ರಾಚಾರ್ಯ ಡಾ. ಸಂದೀಪ ಜವಳಿ ಅವರು, ಮತದಾರರ ಸಾಕ್ಷರತಾ ಕ್ಲಬ್‌ನ ಸಂಯೋಜಕ ನಟರಾಜ ಎಮ್ ಪಾಟೀಲ, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ