Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿ ಆರ್ ಎಲ್ ಚೇರ್ಮನ್ ಡಾ. ವಿಜಯ ಸಂಕೇಶ್ವರ್ ಅವರ ಮೀಡಿಯಾ ಸ್ಕೂಲ್ ಕಾರ್ಯಾರಂಭ

 

ಬೆಂಗಳೂರು :
ನಾಡಿನ ಪ್ರಸಿದ್ಧ ಪತ್ರಿಕೆ ಹಾಗೂ ವಿ ಆರ್ ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಹೆಸರಿನಲ್ಲಿ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ವಿಶ್ವ ದರ್ಶನ ಎಜುಕೇಶನ್ ಸೊಸೈಟಿಯಲ್ಲಿ ಮೀಡಿಯಾ ಸ್ಕೂಲ್ ಸ್ಥಾಪನೆಯಾಗಿದೆ. ಅದು ಶೀಘ್ರವೇ ಕಾರ್ಯ ಆರಂಭಿಸಲಿದೆ.

ಪತ್ರಕರ್ತರನ್ನು ವೃತ್ತಿಪರವಾಗಿ ರೂಪಿಸುವ ನಿಟ್ಟಿನಲ್ಲಿ ಮೀಡಿಯಾ ಸ್ಕೂಲ್ ಕಾರ್ಯ ನಿರ್ವಹಿಸಲಿದ್ದು ಕರ್ನಾಟಕ ವಿಶ್ವವಿದ್ಯಾಲಯದ ಮಾನ್ಯತೆಯನ್ನು ಸಹಾ ಪಡೆದುಕೊಂಡಿದೆ. ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮದಲ್ಲಿ ಒಂದು ವರ್ಷದ ಪಿಜಿ ಡಿಪ್ಲೋಮಾ ಕೋರ್ಸ್ ಇದಾಗಿದೆ. ಪ್ರಸ್ತುತ ಅಗತ್ಯಕ್ಕೆ ತಕ್ಕಂತೆ ಮುದ್ರಣ ಮತ್ತು ಟಿವಿ ಮಾಧ್ಯಮಗಳಲ್ಲಿ ವೃತ್ತಿ ಪರವಾಗಿ ಕಾರ್ಯ ನಿರ್ವಹಿಸುವ ರೀತಿಯಲ್ಲಿ ಬೋಧನೆ ಮತ್ತು ತರಬೇತಿ ಇರಲಿದೆ ಎಂದು ವಿಶ್ವ ದರ್ಶನ ಎಜುಕೇಶನ್ ಸೊಸೈಟಿ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಹರಿಪ್ರಕಾಶ ಕೋಣೆಮನೆ ತಿಳಿಸಿದ್ದಾರೆ.

ಪದವೀಧರರು ಅಥವಾ ಈಗ ಅಂತಿಮ ಪದವಿ ಪರೀಕ್ಷೆ ಬರೆಯುತ್ತಿರುವವರು ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 15 ರಿಂದ 30 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ಅಕ್ಟೋಬರ್ 1, 2 ರಂದು ಪ್ರವೇಶ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ವೃತ್ತಿಪರ ಬೋಧಕ ವರ್ಗದ ಜೊತೆಗೆ ಮುದ್ರಣ, ಡಿಜಿಟಲ್ ಹಾಗೂ ಟಿವಿ ಮಾಧ್ಯಮಗಳಲ್ಲಿ ಹೆಸರಾಂತ ಹಾಗೂ ನುರಿತ ಪತ್ರಕರ್ತರಿಂದಲೂ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ. ಮಾಹಿತಿಗೆ ಮೀಡಿಯಾ ಸ್ಕೂಲ್ ಪ್ರಾಚಾರ್ಯ ನಾಗರಾಜ ಇಳೆಗುಂಡಿ (8884432196) ಹಾಗೂ ವಿಶ್ವ ದರ್ಶನ ಎಜುಕೇಶನ್ ಸೊಸೈಟಿ ಸಿಇಒ ಅಜಯ್ (8904134073) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ