Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

We agree for disagree:ಅಶೋಕ ಚಂದರಗಿ ಸರಕಾರಕ್ಕೆ ಕಿವಿಮಾತು ಏನು ?

 

ಬೆಳಗಾವಿ:
ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಇಂದು ಸಂಜೆ 7ಕ್ಕೆ ಕೇಂದ್ರ ಗೃಹ ಸಚಿವ ಅಮಿತ ಶಾ ನೇತೃತ್ವದಲ್ಲಿ ಎರಡೂ ರಾಜ್ಯಗಳ ಸಿಎಂ ಗಳ ಸಭೆ ನವದೆಹಲಿಯಲ್ಲಿ ನಡೆಯಲಿದೆ.
ಈ ಮಧ್ಯೆ ಅಂದಿನ ಕರ್ನಾಟಕ ಮುಖ್ಯಮಂತ್ರಿ ಬಿ.‌ಡಿ.ಜತ್ತಿ ಅವರು 1960ರಲ್ಲೇ ಅಂದಿನ ಕೇಂದ್ರ ಗೃಹ ಸಚಿವ ಗೋವಿಂದ ವಲ್ಲಭ ಪಂತ ಅವರ ಸೂಚನೆ ಮೇರೆಗೆ ಮುಂಬೈಗೆ ತೆರಳಿ ಗಡಿ ಸಮಸ್ಯೆ ಬಗ್ಗೆ ಅಂದಿನ‌ ಮಹಾರಾಷ್ಟ್ರ ಮುಖ್ಯಮಂತ್ರಿ ವೈ. ಬಿ. ಚವ್ಹಾನ ಅವರೆದುರು ಮಾತುಕತೆಗೆ ಕುಳಿತು ಕರ್ನಾಟಕದ ಹಿತಾಸಕ್ತಿ ಕಾಯ್ದುಕೊಂಡಿದ್ದರು. ವೈ. ಬಿ. ಚವ್ಹಾನ ಅವರ ಜೊತೆ ನಡೆದ ಮಾತುಕತೆಯ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ 'we agree for disagree' ಎಂದಿದ್ದರು. ಆ ಹೇಳಿಕೆಯನ್ನೇ ಇಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಮಿತ ಷಾ ಮುಂದೆ ಯಾವುದೇ ಅಳುಕಿಲ್ಲದೇ ನುಡಿದು ಬರಬೇಕು ಎಂದು ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ ಸರಕಾರಕ್ಕೆ ಪತ್ರ ಬರೆದು ತುರ್ತು ಸಂದೇಶ ನೀಡಿದ್ದಾರೆ.

ಮಹಾರಾಷ್ಟ್ರದ ನಾಟಕ ಮತ್ತು ಒತ್ತಡ ತಂತ್ರಕ್ಕೆ ನಮ್ಮ‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಗೃಹ ಸಚಿವರ ಎದುರು ಮಂಡಿಯೂರಕೂಡದು ಎಂದು ಬೆಳಗಾವಿ ಕನ್ನಡಿಗರು ಆಗ್ರಹಿಸಿದ್ದಾರೆ.

ಅಂದು 1966ರಲ್ಲಿ ಮತ್ತೊಬ್ಬ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರು ಗಡಿವಿವಾದ ಸಂಬಂಧ ಮಹಾಜನ ಕಮಿಷನ್ ನೇಮಕ ಮಾಡುವ ಅಂದಿನ‌ ಪ್ರಧಾನಿ ಇಂದಿರಾ ಗಾಂಧಿ ಅವರ ಒತ್ತಡದ ನಿರ್ಧಾರಕ್ಕೆ‌ ಮಣಿದು ಒಪ್ಪಿಗೆ ಸೂಚಿಸಿದ್ದರು.
ನಿಜಲಿಂಗಪ್ಪನವರ ಹಾದಿ ತುಳಿಯದೇ, ಬಿ. ಡಿ. ಜತ್ತಿ ಅವರಂತೆ ಕಠಿಣವಾಗಿ ವರ್ತಿಸಬೇಕು, ಯಾವುದೇ ಒತ್ತಡಕ್ಕೆ ಒಳಗಾಗಬಾರದು ಎಂದು ಅಶೋಕ ಚಂದರಗಿ ಸರಕಾರಕ್ಕೆ ಕಿವಿಮಾತು ಹೇಳಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ