Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಅಧಿಸೂಚನೆ: ಆಕ್ಷೇಪಣೆ ಸಲ್ಲಿಸಲು ಮನವಿ

ಬೆಂಗಳೂರು: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ (ಇಎಸ್‌ಎ) ಘೋಷಣೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸುವ ಮುನ್ನ ಆಕ್ಷೇಪಣೆಗಳನ್ನು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಆಹ್ವಾನಿಸಿದೆ. ತೊಂದರೆಗೆ ಒಳಗಾಗುವ ಗ್ರಾಮದವರು ಕೂಡಲೇ ಆಕ್ಷೇಪಣೆ ಸಲ್ಲಿಸಬೇಕು ಎಂದು ಮಲೆನಾಡು ಕರಾವಳಿ ಜನಪರ ಒಕ್ಕೂಟ ಹೇಳಿದೆ.


ಸಚಿವಾಲಯ ಪ್ರಕಟಿಸಿರುವ ಹೊಸ ಕರಡು ಅಧಿಸೂಚನೆಯಲ್ಲಿ ಮಲೆನಾಡು ಭಾಗದ ಸಾವಿರಾರು ಗ್ರಾಮಗಳನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಿರುವುದು ಮಲೆನಾಡಿಗರಿಗೆ ಆಘಾತ ತಂದಿದೆ. ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು, ರೈತರು, ಗ್ರಾಮ ಪಂಚಾಯಿತಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳು ಆಕ್ಷೇಪಣೆ ಅಥವಾ ಸಲಹೆಗಳನ್ನು ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿದೆ ಎಂದು ಒಕ್ಕೂಟದ ರಾಜ್ಯ ಸಂಚಾಲಕ ಅನಿಲ್ ಹೊಸಕೊಪ್ಪ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪಶ್ಚಿಮ ಘಟ್ಟ ವ್ಯಾಪ್ತಿಯ ಹಲವು ಗ್ರಾಮಗಳನ್ನು ಪರಿಸರ ಸೂಕ್ಷ್ಮ ವಲಯಕ್ಕೆ ಸೇರಿಸುವ ಪ್ರಸ್ತಾಪ ಮಾಡಲಾಗಿದೆ. ಅಧಿಸೂಚನೆಯ ಅನುಬಂಧ
'ಸಿ'ಯಲ್ಲಿ ಜಿಲ್ಲೆ, ತಾಲ್ಲೂಕು ಹಾಗೂ ಗ್ರಾಮವಾರು ಅಧಿಕೃತ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಆಕ್ಷೇಪಣೆ ಸಲ್ಲಿಸಲು ಬಯಸುವವರು ಕೂಡಲೇ ಅಭಿಪ್ರಾಯಗಳನ್ನು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಕಾರ್ಯದರ್ಶಿಗೆ ಲಿಖಿತ ರೂಪದಲ್ಲಿ ಅಥವಾ esz [email protected] ಇ-ಮೇಲ್ ಮೂಲಕ ಕಳುಹಿಸಬಹುದು ಎಂದು ಹೇಳಿದ್ದಾರೆ.

'ಈಗಿರುವ ಅರಣ್ಯ ಕಾನೂನುಗಳೇ ರೈತರ ಉಸಿರುಗಟ್ಟಿಸಿವೆ. ಆರು ಜಿಲ್ಲೆಗಳ ಸಂಸದರು ನಿದ್ದೆ ಮಾಡಿದ್ದಾರೆ. ಇನ್ನೂ ಇತ್ತ ಗಮನ ಹರಿಸದಿದ್ದರೆ ಮಲೆನಾಡು ಕರಾವಳಿ ಜನಪರ ಒಕ್ಕೂಟದಿಂದ ಸಂಸದರ ಕಚೇರಿ ಎದುರು ಧರಣಿ ನಡೆಸಲಾಗುವುದು' ಎಂದು ಅನಿಲ್‌ ಹೊಸಕೊಪ್ಪ ಎಚ್ಚರಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ.ಪ್ರಭಾಕರ ಕೋರೆಯವರ ಹುಟ್ಟುಹಬ್ಬ ಪ್ರಯುಕ್ತ ನಂದನ ಅನಾಥಾಶ್ರಮದ ಅನಾಥ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಅಧಿಸೂಚನೆ: ಆಕ್ಷೇಪಣೆ ಸಲ್ಲಿಸಲು ಮನವಿಡಾ.ಪ್ರಭಾಕರ ಕೋರೆಯವರಿಗೆ ಹೆಚ್ಚಿನ ಸ್ಥಾನಮಾನ ದೊರೆಯಲಿ: ಶ್ರೀ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗುಡ್ಡ ಕುಸಿತ ; 3 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವುಸಂಗೊಳ್ಳಿ ರಾಯಣ್ಣ ಘಟಕ ಕಾಲೇಜಿನಲ್ಲಿ ಪ್ರೇಮಚಂದ್ ಜಯಂತಿಇದು ನನ್ನ ಮೊದಲ ಮತ್ತು ಕೊನೆಯ ತಪ್ಪು’ : ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ್ದ 15 ವರ್ಷದ ಬಾಲಕಿಯ ಕ್ಷಮೆಯಾಚನೆಬೆಳಗಾವಿ : ಟಿಳಕರ ತತ್ವ ಪಾಲನೆಗೆ ಕಿರಣ ಜಾಧವ ಕರೆವಾಣಿಜ್ಯ ಬಳಕೆ ಎಲ್‌ಪಿಜಿ ದರ ಮತ್ತೆ ಇಳಿಕೆಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರಿ ಮಳೆ ಸಾಧ್ಯತೆ !150 ವರ್ಷಗಳ ನಂತರ ಗ್ರಂಥಾಲಯಕ್ಕೆ ವಾಪಸ್ ಬಂದ ಅಪರೂಪದ ಪುಸ್ತಕ ; ಈಗ ಅದರ ದಂಡದ ಮೊತ್ತವೇ ₹19 ಲಕ್ಷ…!