Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರೆಡ್ಡಿ ಪಕ್ಷ ಸೇರ್ಪಡೆ ಕುರಿತು ಡಿಕೆಶಿ ಹೇಳಿದ್ದೇನು ?

 

ಬೆಳಗಾವಿ :
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಕಾಂಗ್ರೆಸ್ ಸೇರ್ಪಡೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ ಏನು ಗೊತ್ತೆ ?

ವಿನಯ್ ಕುಲಕರ್ಣಿ ಅವರ ಜನ್ಮದಿನ ಕಾರ್ಯಕ್ರಮ ನಿಮಿತ್ತ ಇಲ್ಲಿಗೆ ಆಗಮಿಸಿದ್ದೇನೆ. ಒಬ್ಬೊಬ್ಬರೂ ಒಂದೊಂದು ಶೈಲಿಯಲ್ಲಿ ಜನ್ಮದಿನ ಆಚರಿಸಿಕೊಳ್ಳುತ್ತಾರೆ. ನಾನು ಕೇದಾರನಾಥ ದೇವಾಲಯಕ್ಕೆ ಕುಟುಂಬ ಸಮೇತ ಹೋಗಿ ಪೂಜೆ ಸಲ್ಲಿಸಿದ್ದೆ. ಸಿದ್ದರಾಮಯ್ಯ ಅವರ ಜನ್ಮದಿನವನ್ನು ಅವರ ಅಭಿಮಾನಿಗಳು ದೊಡ್ಡ ಕಾರ್ಯಕ್ರಮ ಮಾಡಿ ಆಚರಿಸಿದ್ದರು.

ವಿನಯ್ ಅವರಿಗೆ ಪಕ್ಷದಲ್ಲಿ ಉನ್ನತ ಜವಾಬ್ದಾರಿ ನೀಡಲಾಗುವುದೇ ಎಂಬ ಪ್ರಶ್ನೆಗೆ, ' ಅವರಿಗೆ ಈಗಾಗಲೇ ಪಕ್ಷದ ಉಪಾಧ್ಯಕ್ಷ ಸ್ಥಾನ ನೀಡಲಾಗಿದ್ದು, ಜಿಲ್ಲೆಯ ಜವಾಬ್ದಾರಿ ವಹಿಸಲಾಗಿದೆ' ಎಂದರು.

ಈ ಕಾರ್ಯಕ್ರಮದ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, ' ಬಿಜೆಪಿಯವರು ನನ್ನನ್ನು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಕ್ರಿಮಿನಲ್ ಆಗಿ ಬಿಂಬಿಸಿದ್ದಾರೆ. ರಾಜಕೀಯವಾಗಿ ಬಲಿಷ್ಠವಾಗಿ ಬೆಳೆಯುವವರ ವಿರುದ್ಧ ಈ ರೀತಿ ಆರೋಪ ಮಾಡುತ್ತಾರೆ. ಹೆಚ್ಚು ಬಲಶಾಲಿ ಆದಷ್ಟು ಹೆಚ್ಚು ಶತ್ರುಗಳು, ಬಲಶಾಲಿ ಅಲ್ಲದಿದ್ದರೆ ಶತ್ರುಗಳೇ ಇಲ್ಲ. ಬಿಜೆಪಿಯವರು ತಮಗೆ ಯಾರೆಲ್ಲಾ ರಾಜಕೀಯವಾಗಿ ಅಪಾಯ ಎಂದು ತಿಳಿಯುತ್ತಾರೋ ಅವರಿಗೆ ಈ ರೀತಿ ಕಿರುಕುಳ ನೀಡುತ್ತಾರೆ. ಪೊಲೀಸ್ ತನಿಖೆಯಲ್ಲಿ ವಿನಯ್ ಕುಲಕರ್ಣಿ ಅವರ ಮೇಲೆ ಯಾವುದೇ ಆರೋಪ ಇಲ್ಲ ಎಂದು ಪ್ರಕರಣ ಮುಕ್ತಾಯ ಹಂತದಲ್ಲಿ ಇದ್ದಾಗ, ಇವರು ರಾಜಕೀಯ ಉದ್ದೇಶದಿಂದ ಪ್ರಭಾವ ಬೀರಿ ಪ್ರಕರಣವನ್ನು ಸಿಬಿಐಗೆ ನೀಡಿ ಅವರನ್ನು ಸಿಲುಕಿಸುವ ಪ್ರಯತ್ನ ಮಾಡಿದ್ದಾರೆ ' ಎಂದು ತಿಳಿಸಿದರು.

ಇಂಧನ ಇಲಾಖೆ ಯೋಜನೆಗಳ ತನಿಖೆ ಬಗ್ಗೆ ಸಿಎಂ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ಮುಖ್ಯಮಂತ್ರಿಗಳು ನಾನು ಇಂಧನ ಸಚಿವನಾಗಿದ್ದ ಕಾಲದ ಯೋಜನೆಗಳನ್ನು ತನಿಖೆ ಮಾಡಿಸಬೇಕು ಎಂದು ಹೇಳಿದ್ದಾರೆ. ಅವರು ತನಿಖೆ ಮಾಡಿಸಲಿ. ನಾನು ಸ್ವಾಗತಿಸುತ್ತೇನೆ. ನಾನು ಕೂಡ ಕಣ್ಣು ಮುಚ್ಚಿಕೊಂಡು ಕುಳಿತಿಲ್ಲ.

ಇಂಧನ ಇಲಾಖೆ, ನೀರಾವರಿ ಇಲಾಖೆ ಎಲ್ಲವನ್ನೂ ಮಾಡಲಿ. ಬಿಜೆಪಿ ಆಡಳಿತದಲ್ಲಿ ಏನೆಲ್ಲಾ ಆಗಿದೆ, 100 ಕೋಟಿ ಯೋಜನೆಯನ್ನು 300 ಕೋಟಿ ಯೋಜನೆ ಹೇಗೆ ಮಾಡಿದ್ದಾರೆ, 300 ಕೋಟಿ ಯೋಜನೆಯನ್ನು 700 ಕೋಟಿ ಮಾಡಿ ಗುತ್ತಿಗೆಗೆ ಹೇಗೆ ನೀಡಿದ್ದಾರೆ. ಈ ಜಿಲ್ಲೆಯಲ್ಲಿ ಸಾಕಷ್ಟು ಉದಾಹರಣೆಗಳಿವೆ. ನಾನು ಕಣ್ಣು ಮುಚ್ಚಿಕೊಂಡು ರಾಜಕಾರಣ ಮಾಡುತ್ತಿಲ್ಲ. ಜಾಗತಿಕ ಬಂಡವಾಳ ಹೂಡಿಕೆಯಲ್ಲಿ 10 ಲಕ್ಷ ಕೋಟಿ ಬಂಡವಾಳಕ್ಕೆ ಸಹಿ ಎಂದು ಹೇಳಿದ್ದಾರೆ. ಸಮಯ ಬರಲಿ, ಎಲ್ಲದಕ್ಕೂ ನಾನು ಉತ್ತರ ನೀಡುತ್ತೇನೆ.

ಸರ್ಕಾರಿ ಕಾರ್ಯಕ್ರಮಕ್ಕೆ ಶಿಕ್ಷಕರ ಹಾಜರಿ ಕಡ್ಡಾಯದ ಬಗ್ಗೆ ಕೇಳಿದಾಗ, ' ಸರ್ಕಾರ ಪ್ರತಿಯೊಬ್ಬರನ್ನೂ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಶಿಕ್ಷಕರು ಯಾಕೆ ಬರಬೇಕು? ಕಾರ್ಯಕರ್ತರು ಹಾಗೂ ಜನರನ್ನು ಕರೆದುಕೊಂಡು ಬಂದು ಕಾರ್ಯಕ್ರಮ ಮಾಡಲಿ. ಶಿಕ್ಷಕರನ್ನು ಇವರ ರಾಜಕಾರಣಕ್ಕೆ ಬಳಸಿಕೊಳ್ಳಲು ಈ ರೀತಿ ಆದೇಶ ಹೊರಡಿಸಿದ್ದಾರೆ. ಶಿಕ್ಷಕರ ದಿನದಂದು ಅವರಿಗೆ ಅಭಿನಂದನೆ ಸಲ್ಲಿಸಲಿ ' ಎಂದರು.

ಜನಾರ್ದನ ರೆಡ್ಡಿ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಾರಾ ಎಂಬ ಪ್ರಶ್ನೆಗೆ, ' ಈ ಬಗ್ಗೆ ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ. ಬೇರೆ ಕೆಲವು ನಾಯಕರು ಸಂಪರ್ಕದಲ್ಲಿದ್ದು, ಪಕ್ಷಕ್ಕೆ ಸೇರಲು ಅರ್ಜಿ ಹಾಕಿದ್ದಾರೆ. ಕೆಲವರು ಸದಸ್ಯತ್ವ ತೆಗೆದುಕೊಂಡಿದ್ದು, ಅವರು ಪಕ್ಷ ಸೇರುವಾಗ ಜಿಲ್ಲಾವಾರು ಪಟ್ಟಿ ನೀಡುತ್ತೇವೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತ, ನಾಯಕತ್ವದಲ್ಲಿ ನಂಬಿಕೆ ಇಟ್ಟವರು ಪಕ್ಷ ಸೇರಲು ಅರ್ಜಿ ಹಾಕಬಹುದು ' ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ