Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಜೆಪಿ ಸ್ನೇಹಿತರಿಗೆ ಡಿಕೆಶಿ ಹೇಳಿದ್ದೇನು ?

 

ಬೆಂಗಳೂರು :
ಅನ್ನ ಭಾಗ್ಯ ಭರವಸೆ ಜಾರಿ ಕಾರ್ಯಕ್ರಮದ ಮೂಲಕ ಕೇವಲ ಕರ್ನಾಟಕ ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಸಂದೇಶ ರವಾನೆಯಾಗುತ್ತಿದೆ
ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

 

ಅನ್ನಭಾಗ್ಯ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತುಗಳು:

ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾದ ದಿನವೇ ಬಸವ ಜಯಂತಿಯಂದು ಅನ್ನಭಾಗ್ಯ ಯೋಜನೆ ಜಾರಿ ಮಾಡಿದ್ದನ್ನು ಈ ದಿನ ಸ್ಮರಿಸುತ್ತೇನೆ. ನಂತರ ನಮ್ಮ ಸರ್ಕಾರ ಆ ಯೋಜನೆಯಲ್ಲಿ ಅಕ್ಕಿಯ ಪ್ರಮಾಣವನ್ನು 7 ಕೆ.ಜಿಗೆ ಹೆಚ್ಚಳ ಮಾಡಿತ್ತು. ನಂತರದ ಸರ್ಕಾರ ಅದನ್ನು 5 ಕೆ.ಜಿಗೆ ಇಳಿಸಿತ್ತು.

ನಂತರ ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ 10 ಕೆ.ಜಿ ಅಕ್ಕಿ ನೀಡುವುದಾಗಿ ನಮ್ಮ ಐದು ಗ್ಯಾರಂಟಿ ಯೋಜನೆಗಳಲ್ಲಿ ಸೇರಿಸಿದ್ದೆವು ಎಂದು ಹೇಳಿದರು.

ನಮ್ಮ ಈ ಯೋಜನೆಗಳ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ಅದರ ಜತೆಗೆ ರಾಜಕೀಯ ಕೂಡ ನಡೆಯುತ್ತಿದೆ. ಈ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ನೀಡಿ ಕೇಂದ್ರ ಸರ್ಕಾರ ತನ್ನ ಹೃದಯ ಶ್ರೀಮಂತಿಕೆ ಮೆರೆಯಬಹುದಿತ್ತು. ಆದರೆ ಅವರು ಅದನ್ನು ಮಾಡಲಿಲ್ಲ.

ಈ ಸಂದರ್ಭದಲ್ಲಿ ಬಿಜೆಪಿ ಸ್ನೇಹಿತರಿಗೆ ಒಂದು ಮಾತು ಹೇಳಬಯಸುತ್ತೇನೆ. ಆಹಾರ ಭದ್ರತೆ ಕಾಯ್ದೆ ತಂದವರು ಯಾರು? ಏಕೆ ತಂದರು ಎಂದು ಅರಿಯಬೇಕು. ದೇಶವನ್ನು ಹಸಿವುಮುಕ್ತ ಮಾಡುವ ಉದ್ದೇಶದಿಂದ ಯುಪಿಎ ಸರ್ಕಾರ ಆಹಾರ ಭದ್ರತಾ ಕಾಯ್ದೆ ಜಾರಿ ಮಾಡಿ ಬಡ ಜನರಿಗೆ ಆಹಾರ ಧಾನ್ಯ ನೀಡುವುದನ್ನು ಸಂವಿಧಾನದ ಹಕ್ಕಾಗಿ ತಂದಿದ್ದನ್ನು ನೆನಪಿಸಿಕೊಳ್ಳಬೇಕು.

ಸೋನಿಯಾ ಗಾಂಧಿ ಅವರು ಯುಪಿಎ ಅಧ್ಯಕ್ಷೆಯಾಗಿ, ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿ ಆಗಿದ್ದಾಗ ಇದನ್ನು ಜಾರಿಗೆ ತರಲಾಗಿತ್ತು. ಆದರೆ ಬಿಜೆಪಿಯ ಕೇಂದ್ರ ಸರ್ಕಾರ ಬಡವರಿಗೆ ಅಕ್ಕಿ ಯೋಜನೆ ಜಾರಿ ಮಾಡಿದೆ ಎಂದು ಕೆಲವರು ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಇದು ಯುಪಿಎ ಸರ್ಕಾರದ ಯೋಜನೆ ಎಂಬುದು ಸತ್ಯ ಎಂದರು.

ನಮ್ಮ ರಾಜ್ಯದಲ್ಲಿ ಮಾತ್ರ ಅನ್ನಭಾಗ್ಯ ಯೋಜನೆ ಮೂಲಕ ಜನರಿಗೆ ಉಚಿತವಾಗಿ ಅಕ್ಕಿ ನೀಡಿ, ರಾಜ್ಯವನ್ನು ಹಸಿವುಮುಕ್ತ ಮಾಡುವ ಪ್ರಯತ್ನ ನಡೆದಿದೆ. ದೇಶದ ಬೇರೆ ಯಾವುದೇ ರಾಜ್ಯದಲ್ಲಿ ಈ ರೀತಿ ಜಾರಿ ಮಾಡಿಲ್ಲ.

ಈಗ ನಾವು ಕೊಟ್ಟ ಮಾತಿನಂತೆ ಅನ್ನಭಾಗ್ಯ ಯೋಜನೆ ಜಾರಿ ಮಾಡಿದ್ದೇವೆ. 10 ಕೆ.ಜಿ ಅಕ್ಕಿ ನೀಡುವವರೆಗೂ ಹೆಚ್ಚುವರಿ ಐದು ಕೆ.ಜಿ ಅಕ್ಕಿಯ ಹಣವನ್ನು ಜನರಿಗೆ ನೀಡಲು ಸರ್ಕಾರ ತೀರ್ಮಾನಿಸಿದ್ದು, ಇಂದು ಫಲಾನುಭವಿಗಳಿಗೆ ಹಣ ನೀಡುತ್ತಿದ್ದೇವೆ. ಪ್ರತಿ ನಿತ್ಯ ನಾಲ್ಕೈದು ಜಿಲ್ಲೆಯ ಫಲಾನುಭವಿಗಳ ಖಾತೆಗೆ ಹಣ ಜಮಾವಣೆ ಆಗಲಿದೆ.

ಈ ವರ್ಷ ನಾವು ಕೊಟ್ಟ ಮಾತಿನಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ. ಈ ಸಂದರ್ಭದಲ್ಲಿ ನಾನು ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ಸದನದಲ್ಲಿ ಯಾರಿಗೆ ಉತ್ತರ ನೀಡಬೇಕೋ ನೀಡುತ್ತೇನೆ ಎಂದು ಹೇಳಿದರು.

ನಾವು ಬಸವಣ್ಣನ ನಾಡಿನವರು, ನುಡಿದಂತೆ ನಡೆದಿದ್ದೇವೆ. ನಾನು ಈ ಹಿಂದೆ ಹೇಳಿದ್ದಂತೆ 200 ಯೂನಿಟ್ ಉಚಿತ, 2 ಸಾವಿರ ಖಚಿತ 10 ಕೆ.ಜಿ ಅಕ್ಕಿ ನಿಶ್ಚಿತ ಎಂಬುದನ್ನು ಮಾಡಿದ್ದೇವೆ. ನಮ್ಮ ಈ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ. ನಾವು ಈ ಅನ್ನಭಾಗ್ಯ ಯೋಜನೆಯನ್ನು ಯಾವ ರೀತಿ ಜಾರಿಗೆ ತರುತ್ತಿದ್ದೇವೆ ಎಂಬುದರ ಬಗ್ಗೆ ವಿವಿಧ ರಾಜ್ಯಗಳ ವಿವಿಧ ಪಕ್ಷಗಳ ನಾಯಕರು ಮಾಹಿತಿ ಪಡೆಯುತ್ತಿದ್ದಾರೆ.

ದೇಶದಲ್ಲಿ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ನೆರವಾಗಲು ನಮ್ಮ ಐದು ಗ್ಯಾರಂಟಿ ಯೋಜನೆಗಳಿಂದ ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ 4-5 ಸಾವಿರ ರೂಪಾಯಿಯಷ್ಟು ನೆರವಾಗಲಿದೆ. ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನರಿಗೆ ಈ ರೀತಿ ನೆರವು ನೀಡುತ್ತಿದೆ. ಆಹಾರ ಸಚಿವರ ನೇತೃತ್ವದಲ್ಲಿ ಈ ಯೋಜನೆಯನ್ನು ಬಹಳ ಉತ್ತಮವಾಗಿ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ