Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಮಾತ್ರ ಹೊಸ ಜಿಲ್ಲೆ : ಸಿಎಂ ಹೇಳಿದ್ದೇನು ?

ಗೌರಿಬಿದನೂರು : ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.

ಅವರು ಇಂದು ಗೌರಿಬಿದನೂರಿನಲಗಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

*ರಾಜ್ಯಪಾಲರು ತಾವಾಗಿಯೇ ಬರಲಿಲ್ಲ: ಆಹ್ವಾನ ನೀಡಲಾಗಿತ್ತು.*

ಜೂನ್ 4 ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಆರ್.ಸಿ. ಬಿ ಯ ವತಿಯಿಂದ ಆರ್.ಸಿ. ಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನನಗೆ ಅಂದು ಬೆಳಿಗ್ಗೆ 11.29 ನಿಮಿಷಕ್ಕೆ ಕೆ.ಎಸ್.ಸಿ.ಎ ವತಿಯಿಂದ ಶಂಕರ್ ಮತ್ತು ಜಯರಾಮ್ ಅವರು ಆಹ್ವಾನ ನೀಡಿ ಮನವಿ ಮಾಡಿಕೊಂಡರು.

ಇದಕ್ಕೆ ನಾನು ಒಪ್ಪಿಗೆ ನೀಡಿದೆ. ಬಳಿಕ ಅವರು ರಾಜ್ಯಪಾಲರನ್ನು ಆಹ್ವಾನ ಮಾಡಿರುವುದಾಗಿ ತಿಳಿಸಿದರು. ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ರಾಜ್ಯಪಾಲರು ಅವರಾಗಿಯೇ ಬಂದಿದ್ದರು ಎಂದು ಪ್ರಾಚಾರವಾಗಿದ್ದು ಅದು ತಪ್ಪು ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿದ್ದ ಗೋವಿಂದರಾಜು ಅವರು ರಾಜ್ಯಪಾಲರಿಗೆ ಕರೆ ಮಾಡಿ ಫೋನ್ ನನಗೆ ಕೊಟ್ಟರು. ಆಗ ನಾನು ಕೂಡ ಕಾರ್ಯಕ್ರಮಕ್ಕೆ ತೆರಳುತ್ತಿದ್ದು ನೀವು ಬನ್ನಿ ಎಂದು ಆಹ್ವಾನಿಸಿದೆ ಎಂದರು.

ರಾಜ್ಯಪಾಲರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿದರು. ಸನ್ಮಾನ ಕಾರ್ಯಕ್ರಮ 20 ನಿಮಿಷಗಳಲ್ಲಿ ಮುಗಿದುಹೋಯಿತು ಎಂದರು.

ಮಾಧ್ಯಮಗಳು ಹಾಗೂ ಸುದ್ದಿ ವಾಹಿನಿಗಳಲ್ಲಿ ರಾಜ್ಯಪಾಲರು ತಾವಾಗಿಯೇ ಬಂದಿದ್ದಾರೆ ಎಂದು ವರದಿಯಾದ್ದರಿಂದ ಸ್ಪಷ್ಟೀಕರಣ ನೀಡುತ್ತಿದ್ದೇನೆ ಎಂದರು.

*ಪರಿಹಾರ ನೀಡಲಾಗಿದೆ*

ಕಾಲ್ತುಳಿತದಲ್ಲಿ ಮಾಡಿದವರ ಕುಟುಂಬಕ್ಕೆ ತಲಾ 25 ಲಕ್ಷ ರೂ.ಗಳನ್ನೂ ಈಗಾಗಲೇ ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

*ಕನ್ನಡದ ಅಭಿವೃದ್ಧಿಗೆ ಅನುದಾನ ಲಭ್ಯವಿದೆ*

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನದ ಅಗತ್ಯವಿದ್ದರೆ ಅನುದಾನ ಒದಗಿಸಲಾಗುವುದು. ಕನ್ನಡದ ಅಭಿವೃದ್ಧಿಗೆ ಯಾವುದೇ ಕಾರಣಕ್ಕೂ ಅನುದಾನವಿಲ್ಲ ಎಂದು ಹೇಳುವುದಿಲ್ಲ ಎಂದರು.

*ವಿಧಾನ ಪರಿಷತ್ ಸದಸ್ಯರ ನಾಮ ನಿರ್ದೇಶನದ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ*

ವಿಧಾನ ಪರಿಷತ್ ಸದಸ್ಯರ ನಾಮ ನಿರ್ದೇಶನದ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಈ ವಿಚಾರದ ಬಗ್ಗೆ ಚರ್ಚೆ ಮಾಡಬೇಕಿದ್ದು ಅದನ್ನು ಮುಂದಕ್ಕೆ ಹಾಕಿದ್ದೇವೆ ಎಂದರು.

*ಹೊಸ ಜಿಲ್ಲೆ ರಚನೆ*: *ಚರ್ಚಿಸಿ ತೀರ್ಮಾನ*

ಬೆಳಗಾವಿಯಲ್ಲಿ ಮಾತ್ರ ಹೊಸ ಜಿಲ್ಲೆ ರಚಿಸುವ ಬಗ್ಗೆ ಬೇಡಿಕೆ ಇದ್ದು, ಇದಕ್ಕೆ ಸಂಬಂಧಿಸಿದಂತೆ ಶಾಸಕರು, ಸಚಿವರು ಮಾತು ಸಂಸದರ ಸಭೆಯನ್ನು ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

*ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ*

ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿರುವುದು ಈ ಭಾಗದ ಜನರಲ್ಲಿ ನಿರೀಕ್ಷೆ ಹುಟ್ಟುಹಾಕಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬೆಂಗಳೂರು ವಿಭಾಗಕ್ಕೆ ಸಂಬಂಧಿಸಿದಂತೆ 19 ರಂದು ಸಚಿವ ಸಂಪುಟ ನಡೆಯುತ್ತಿದೆ. ಅಲ್ಲಿ ಪ್ರಸ್ತಾಪವಾಗುವ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

*ಮಾವಿಗೆ ಬೆಂಬಲ ಬೆಲೆ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ*

ಮಾವಿನ ಬೆಲೆ ಕುಸಿತದ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ ಆಂಧ್ರದಲ್ಲಿ ತೋತಾಪುರಿ ಮಾವಿಗೆ ಒಂದು ಕೆಜಿ ಗೆ 4 ರೂ. ನೀಡಲಾಗುತ್ತಿದ್ದು, ಇಲ್ಲಿಯೂ ಕೊಡಬೇಕು ಎನ್ನುವ ಬೇಡಿಕೆಯನ್ನು ಸಚಿವ ಎಂ.ಸಿ.ಸುಧಾಕರ್ ಅವರು ಮಾಡಿದ್ದು, ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ