Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ಣಾಟಕ ಬ್ಯಾಂಕ್ ಸಿಇಒ ರಾಜೀನಾಮೆ : ಕಾರಣವೇನು ?

ಬೆಂಗಳೂರು: ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಶ್ರೀಕೃಷ್ಣನ್ ಹರಿಹರ ಶರ್ಮ ಅವರ ರಾಜೀನಾಮೆಯನ್ನು ಬ್ಯಾಂಕ್‌ನ ಆಡಳಿತ ಮಂಡಳಿ ಅಂಗೀಕರಿಸಿದೆ. ಆ ಸ್ಥಾನಕ್ಕೆ ಹೊಸಬರನ್ನು ಗುರುತಿಸಲು ಶೋಧ ಸಮಿತಿಯನ್ನು ರಚಿಸಿದೆ.

ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕ ಶೇಖರ ರಾವ್ ಅವರ ರಾಜೀನಾಮೆಯನ್ನೂ ಆಡಳಿತ ಮಂಡಳಿ ಒಪ್ಪಿದೆ. ಶೋಧ ಸಮಿತಿಯು ಅವರ ಸ್ಥಾನಕ್ಕೆ ಹೊಸಬರನ್ನು ಹುಡುಕಲಿದೆ.

ಶರ್ಮ ಅವರು ರಾಜೀನಾಮೆಗೆ ವೈಯಕ್ತಿಕ ಕಾರಣ ನೀಡಿದ್ದಾರೆ, ಮುಂಬೈಗೆ ವಾಪಸ್ಸಾಗುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಶರ್ಮ ಅವರ ರಾಜೀನಾಮೆಯು ಜುಲೈ 15 ರಿಂದ ಅನ್ವಯ ಆಗಲಿದೆ. ರಾವ್ ಅವರ ರಾಜೀನಾಮೆ ಜುಲೈ 31ರಿಂದ ಅನ್ವಯ ಆಗಲಿದೆ ಎಂದು ಹೇಳಿದೆ.

ಇದೀಗ ಇಬ್ಬರ ಹುದ್ದೆಯನ್ನು ಬಲಿ ಪಡೆಯುವ ಹಂತಕ್ಕೆ ಬ್ಯಾಂಕ್ ತಲುಪಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಬ್ಯಾಂಕಿನ ಲಾಭದಲ್ಲಿಯೂ ಕಡಿಮೆಯಾಗಿರುವುದು ಸಿಇಒ ಮತ್ತು ಕಾರ್ಯ ನಿರ್ವಾಹಕ ನಿರ್ದೇಶಕರ ತಲೆಗೆ ಬಂದಿತ್ತು. ಇದರ ನಡುವೆ ಅನಗತ್ಯ ವೆಚ್ಚ ಎಂದು ಅಡಿಟರ್ಸ್‌ ಪಟ್ಟಿ ಮಾಡಿರುವುದು ಬ್ಯಾಂಕಿನ ಆಡಳಿತದಲ್ಲಿ ಸಂಚಲನ ಮೂಡಿಸಿತ್ತು.

ನಿರ್ದಿಷ್ಟ ವೆಚ್ಚಕ್ಕೆ ಸಂಬಂಧಿಸಿ ಆಡಳಿತ ಮಂಡಳಿಯ ಜೊತೆಗೆ ತಲೆದೋರಿದ್ದ ಬಿಕ್ಕಟ್ಟು ತೀವ್ರತೆ ಪಡೆದುಕೊಂಡ ನಂತರ ಸಿಇಓ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕಾರ್ಯ ನಿರ್ವಾಹಕ ನಿರ್ದೇಶಕ ಶೇಖರ್ ರಾವ್ ಜುಲೈ 30 ರೊಳಗೆ ಕೆಳಗಿಳಿಯುವ ಸಾಧ್ಯತೆ ಇದೆ.

ಕರ್ಣಾಟಕ ಬ್ಯಾಂಕ್‌ ಮಾಡಿದ ಒಂದು ನಿರ್ದಿಷ್ಟ ವೆಚ್ಚದ ಕುರಿತು ಶ್ರೀಕೃಷ್ಣನ್ ಹರಿಹರ ಶರ್ಮಾ ಮತ್ತು ಶೇಖ‌ರ್ ರಾವ್ ಹಾಗೂ ಬ್ಯಾಂಕಿನ ಆಡಳಿತ ಮಂಡಳಿಯ ನಡುವೆ ತಿಕ್ಕಾಟ ಏರ್ಪಟ್ಟಿತ್ತು. ಇದು ಬ್ಯಾಂಕಿನ ಅತ್ಯುನ್ನತ ಹುದ್ದೆಯಲ್ಲಿದ್ದವರು ರಾಜೀನಾಮೆ ನೀಡುವ ಹಂತಕ್ಕೆ ಬಂದಿದೆ.

ಕಳೆದ ಮೇ ತಿಂಗಳಲ್ಲಿ ಅಡಿಟ್ ರಿಪೋರ್ಟ್ ಸಂದರ್ಭದಲ್ಲಿ ಬ್ಯಾಂಕಿನ ಪೂರ್ಣಾವಧಿ ನಿರ್ದೇಶಕರ ಅಧಿಕಾರವನ್ನು ಮೀರಿ ಇತರ ಉದ್ದೇಶಗಳಿಗಾಗಿ ಮಾಡಿದ 1.53 ಕೋಟಿ ರೂ. ವೆಚ್ಚದ ಬಗ್ಗೆ ಉಲ್ಲೇಖಿಸಲಾಗಿತ್ತು. ಇದಕ್ಕೆ ಆಡಳಿತ ಮಂಡಳಿಯ ಅನುಮೋದನೆ ಪಡೆದುಕೊಂಡಿರಲಿಲ್ಲ. ಈ ಸಂಬಂಧ ಸಿಇಒ, ಕಾರ್ಯ ನಿರ್ವಾಹಕ ನಿರ್ದೇಶಕರು ಮತ್ತು ಆಡಳಿತ ನಡುವೆ ವ್ಯತ್ಯಾಸಗಳು ಹುಟ್ಟಿಕೊಂಡಿದ್ದವು. 'ಈ ಮೊತ್ತವನ್ನು ಸಂಬಂಧಪಟ್ಟ ನಿರ್ದೇಶಕರಿಂದ ವಸೂಲಿ ಮಾಡಬಹುದು ಎಂದು ಹೇಳಿದ್ದರಿಂದ ಬಿಸಿ ತಾರಕಕ್ಕೇರಿತ್ತು. ಲೆಕ್ಕಪರಿಶೋಧಕರು
ವೆಚ್ಚದ ಬಗ್ಗೆ ಸಿಇಒ ಹರಿಹರ ಶರ್ಮ ಸೂಕ್ತ ಸ್ಪಷ್ಟನೆ ನೀಡಲು ಸಾಧ್ಯವಾಗದೆ, ಅದು ಸಿಲ್ಲಿ ಮ್ಯಾಟರ್ ಎಂದಿದ್ದರು. ಇದೇ ವಿಚಾರದಲ್ಲಿ ಹುಟ್ಟಿಕೊಂಡಿದ್ದ ವಿವಾದವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ