Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪತ್ನಿ ಸ್ಪರ್ಧೆ ಬಗ್ಗೆ ಬೆಳಗಾವಿಯಲ್ಲಿ ಶಿವರಾಜ್ ಕುಮಾರ್ ಹೇಳಿದ್ದೇನು ?

ಬೆಳಗಾವಿ : ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಗೀತಾ ಶಿವರಾಜಕುಮಾರ್ ಅವರ ಬಗ್ಗೆ ನಟ ಶಿವರಾಜ್ ಕುಮಾರ್ ಮಹತ್ವದ ಮಾತು ಆಡಿದ್ದಾರೆ. ಕರಟಕ ದಮನಕ ಚಿತ್ರದ ಪ್ರಚಾರಕ್ಕೆ ಸೋಮವಾರ ಬೆಳಗಾವಿಗೆ ಆಗಮಿಸಿದ್ದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.

ಪತ್ನಿ ಗೀತಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ಅವರ ಗೆಲುವಿಗೆ ಬೆಂಬಲವಾಗಿ ನಿಲ್ಲುವುದು ನನ್ನ ಕರ್ತವ್ಯ. ಸಮಯ ಸಿಕ್ಕರೆ ಕಾಂಗ್ರೆಸ್ ಪಕ್ಷದ ಇತರ ಅಭ್ಯರ್ಥಿಗಳ ಪ್ರಚಾರಕ್ಕೆ ಹೋಗುವೆ. ಈ ವರ್ಷ ಚುನಾವಣೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುತ್ತೇನೆ. ಬಿಸಿಲು ಹೆಚ್ಚಿರುವ ಕಾರಣ ನಟರನ್ನು ಕರೆತರಲ್ಲ. ನಾನು ಕರೆದರೆ ಅವರೆಲ್ಲ ಬರುತ್ತಾರೆ. ಆದರೆ ಯಾರಿಗೂ ತೊಂದರೆ ಕೊಡಲು ನನಗೆ ಇಷ್ಟವಿಲ್ಲ.

ಗೀತಾ ಅವರ ತವರು ಶಿವಮೊಗ್ಗ. ಅಲ್ಲಿ ಶಿಕ್ಷಣ ಪಡೆದಿದ್ದಾರೆ. ಆದ ಕಾರಣ ಶಿವಮೊಗ್ಗದಿಂದ ಸ್ಪರ್ಧಿಸುತ್ತಿದ್ದು ಮನೆಯನ್ನು ಮಾಡಲಾಗಿದೆ. ಈ ಬಾರಿ ಗೀತಾ ಗೆಲುವಿನ ವಿಶ್ವಾಸವಿದೆ. ಜನಪ್ರತಿನಿಧಿಯಾದರೆ ಜನಸೇವೆ ಮಾಡಲು ಶಕ್ತಿ ಸಿಗುತ್ತದೆ. ರಾಜಕಾರಣದ ಅಗತ್ಯವಿದೆ. ಈ ಸಲ ಗೀತಾರನ್ನು ಗೆಲ್ಲಿಸಲು ಯೋಜನೆ ರೂಪಿಸಲಾಗಿದೆ. ಕಳಸಾ ಬಂಡೂರಿ ಹೋರಾಟಕ್ಕೆ ನಟರು ಬರಬೇಕು. ಈ ಸಲ ಹೋರಾಟ ಆರಂಭವಾದರೆ ನಾನೇ ಖುದ್ದು ಎಲ್ಲ ನಟರನ್ನು ಕರೆದುಕೊಂಡು ಬರುವೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಕುಟುಂಬದವರನ್ನು ಒಂದಾಗಿಸಲು ನಾನು ಯಾರು ? ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನಾನು ಅವರ ಮನೆಯ ಅಳಿಯ. ಅವರೇ ಒಂದಾಗಬೇಕು. ನಾನೇನು ಮಾಡಲು ಸಾಧ್ಯವಿಲ್ಲ ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ