Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಟ್ರಂಪ್ ‘ಸುಂಕ’ ಸಮರಕ್ಕೆ ಭಾರತದ ಉತ್ತರ ಹೇಗಿರಬೇಕು..? ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ ಕಂಡುಬಂದ ಜನಾಭಿಪ್ರಾಯವೇನು..?

ನವದೆಹಲಿ :ಅಮೆರಿಕದ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಜಾಗತಿಕ ವ್ಯಾಪಾರ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದ್ದಾರೆ.

ಸ್ನೇಹ-ವ್ಯಾಪಾರ ಎರಡನ್ನೂ ವ್ಯವಹಾರಿಕವಾಗಿಯೇ ನೋಡುತ್ತಿರುವ ಟ್ರಂಪ್, ಮಿತ್ರ ರಾಷ್ಟ್ರಗಳನ್ನೂ ಬಿಡದೆ ಭಾರಿ ಪ್ರಮಾಣದ ಆಮದು ಸುಂಕ ವಿಧಿಸುತ್ತಿದ್ದಾರೆ. ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಟ್ರಂಪ್‌ ಭಾರತದ ಮೇಲೂ ಅತಿಹೆಚ್ಚು ಅಂದರೆ ಶೇ. 50ರಷ್ಟು ಸುಂಕ ವಿಧಿಸಿದ್ದಾರೆ.
ವಾಣಿಜ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಡಿಸೆಂಬರ್ 2025ರಲ್ಲಿ ಅಮೆರಿಕಕ್ಕೆ ಭಾರತದ ರಫ್ತು ಪ್ರಮಾಣವು ಶೇ. 1.83ರಷ್ಟು ಕುಸಿದಿದ್ದು, 6.88 ಬಿಲಿಯನ್ ಡಾಲರ್ (ಸುಮಾರು ₹63,300 ಕೋಟಿ) ಗೆ ತಲುಪಿದೆ. ಟ್ರಂಪ್ ಅವರ ಸುಂಕದ ಬಿಸಿ ಭಾರತದ ಆರ್ಥಿಕತೆಯ ಮೇಲೆ ಸ್ವಲ್ಪಮಟ್ಟಿಗೆ ಪ್ರಭಾವ ಬೀರುತ್ತಿರುವುದು ಸ್ಪಷ್ಟವಾಗುತ್ತಿದೆ.
ಆದರೆ ಟ್ರಂಪ್ ಶೀಘ್ರದಲ್ಲೇ ಸುಂಕಗಳನ್ನು ಕಡಿಮೆ ಮಾಡದಿದ್ದರೆ ಅಮೆರಿಕದ ಸರಕುಗಳ ಮೇಲೆ ಭಾರತವೂ ಪ್ರತಿ ಸುಂಕಗಳನ್ನು ವಿಧಿಸಬೇಕೆಂದು ಬಹುಪಾಲು ಭಾರತೀಯರು ಒತ್ತಾಯಿಸಿದ್ದಾರೆ ಎಂದು ಇಂಡಿಯಾ ಟುಡೇ-ಸಿವೋಟರ್ ಮೂಡ್ ಆಫ್ ದಿ ನೇಷನ್ ಸಮೀಕ್ಷೆ ತಿಳಿಸಿದೆ. ಸಮೀಕ್ಷೆಯ ಪ್ರಕಾರ, ಅಮೆರಿಕದ ಈ ಏಕಪಕ್ಷೀಯ ನಿರ್ಧಾರಕ್ಕೆ ಭಾರತೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಮೆರಿಕ ತನ್ನ ನಿರ್ಧಾರವನ್ನು ಹಿಂಪಡೆಯದಿದ್ದರೆ, ಭಾರತವೂ ಸಹ ಅಮೆರಿಕದ ಉತ್ಪನ್ನಗಳ ಮೇಲೆ ಅಷ್ಟೇ ಪ್ರಮಾಣದ ಸುಂಕ ವಿಧಿಸಬೇಕು ಎಂದು ಶೇ. 45ರಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ. ಕಳೆದ ನವೆಂಬರ್‌ನಲ್ಲಿ ಅಮೆರಿಕದ ಧಾನ್ಯಗಳ (Pulses) ಮೇಲೆ ಭಾರತ ಶೇ. 30ರಷ್ಟು ಸುಂಕ ವಿಧಿಸಿತ್ತು. ಇದು ಯಾವುದೇ ಅಬ್ಬರವಿಲ್ಲದೆ ಅಮೆರಿಕದ ಮಾರುಕಟ್ಟೆಗೆ ಬಿಸಿ ಮುಟ್ಟಿಸುವಲ್ಲಿ ಯಶಸ್ವಿಯಾಗಿದೆ.
ಟ್ರಂಪ್ 2.0 ಆಡಳಿತದಲ್ಲಿ ಭಾರತ-ಅಮೆರಿಕ ಸಂಬಂಧ ಹದಗೆಟ್ಟಿದೆ ಎಂದು ಶೇ. 54ರಷ್ಟು ಜನರು ನಂಬಿದ್ದಾರೆ. ಕೇವಲ ಶೇ. 21ರಷ್ಟು ಮಂದಿ ಮಾತ್ರ ಸಂಬಂಧ ಸುಧಾರಿಸಿದೆ ಎಂದಿದ್ದಾರೆ.
ಅಮೆರಿಕದ ಕಠಿಣ ನಿಲುವುಗಳ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ವಾಕ್ಸಮರಕ್ಕೆ ಇಳಿಯದೆ ಪ್ರೌಢಿಮೆ ಮೆರೆದಿದ್ದಾರೆ. ಅಮೆರಿಕದ ಮೇಲಿನ ಅವಲಂಬನೆ ತಗ್ಗಿಸಲು ಭಾರತವು ಇತರೆ ರಾಷ್ಟ್ರಗಳೊಂದಿಗೆ ಕೈಜೋಡಿಸುತ್ತಿದೆ ಎಂದು ಹೆಚ್ಚಿನ ಜನರು ಹೇಳಿದ್ದಾರೆ.
ಜಿಎಸ್‌ಟಿ ಕಡಿತಕ್ಕೆ ಆಗ್ರಹ: ಸಮೀಕ್ಷೆಯಲ್ಲಿ ಶೇ. 34ರಷ್ಟು ಜನ ಜಿಎಸ್‌ಟಿ ದರಗಳನ್ನು ಇನ್ನಷ್ಟು ಕಡಿತಗೊಳಿಸುವ ಮೂಲಕ ಮಧ್ಯಮ ವರ್ಗದ ಕೈಗೆ ಹೆಚ್ಚಿನ ಹಣ ಸಿಗುವಂತೆ ಮಾಡಬೇಕು ಎಂದು ಬಯಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳುಸಾವಿರಾರು ಕೋಟಿ ಹೂಡಿಕೆ ಮಾಡಿದವರಿಗೆ ಆತಂಕ :  ICE CREAM ಮಾರುತ್ತಿದ್ದವ ಈ ಪರಿ ಬೆಳೆದದ್ದು ಹೇಗೆ ?ಕೊನೆಗೂ ಶಿವಾನಂದ ನೀಲಣ್ಣವರ ಬಂಧನ..!ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆ