Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗಣೇಶೋತ್ಸವ ಕುರಿತು ನಡೆದ ಮಹತ್ವದ ಸಭೆಯಲ್ಲಿ ಏನೇನು ಚರ್ಚೆ ನಡೆಯಿತು ?

ಬೆಳಗಾವಿ : ಗಣೇಶ ಹಬ್ಬ ಅದ್ದೂರಿ ಆಚರಣೆಯಲ್ಲಿ ಬೆಳಗಾವಿ ಜಿಲ್ಲೆ ಮುಂಚೂಣಿಯಲ್ಲಿದೆ. ಪ್ರತಿವರ್ಷದಂತೆ ಗಣೇಶ ಹಬ್ಬನ್ನು ಅದ್ದೂರಿಯಾಗಿ ಆಚರಿಸೋಣ. ಈ ನಿಟ್ಟಿನಲ್ಲಿ ಶಾಂತಿ, ಸೌಹಾರ್ದತೆಯ ಗಣೇಶ ಹಬ್ಬ ಆಚರಣೆಗೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.



ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಮಂಗಳವಾರ ನಡೆದ ಗಣೇಶ ಉತ್ಸವದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗಣೇಶ ಹಬ್ಬದ ಆಚರಣೆಯ ನೆಪದಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪರಿಸರ ಹಾಳಾಗದಂತೆ ಮಣ್ಣಿನ ಮೂರ್ತಿಯ ಗಣಪತಿಗಳನ್ನು ಸ್ಥಾಪಿಸುವುದು ಅವಶ್ಯ, ಮೂರ್ತಿ ಸ್ಥಾಪನೆಯ ಮುನ್ನ ಪ್ರತಿವರ್ಷದಂತೆ ಸಂಬಂಧಿಸಿದ ಇಲಾಖೆಯ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದರು.

ಗಣೇಶ ಮಂಟಪದಲ್ಲಿ ಪ್ರವೇಶ ದ್ವಾರ ಹಾಗೂ ನಿರ್ಗಮಿಸುವ ದ್ವಾರವನ್ನು ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ನಗರದ ಎಲ್ಲಾ ಗಣೇಶ ಮೂರ್ತಿ ವಿಸರ್ಜನೆ ಹೊಂಡಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ. ಸಾರ್ವಜನಿಕರಿಗೆ ಮಹಾನಗರ ಪಾಲಿಕೆಯಿಂದ ನೀರಿನ ವ್ಯವಸ್ಥೆ ಕೂಡ ಮಾಡಲಾಗುವುದು ಎಂದರು.

ಪೂರ್ವಾನುಮತಿ ಕಡ್ಡಾಯ:
ಗಣೇಶ ಪ್ರತಿಷ್ಠಾನಕ್ಕಾಗಿ ನಗರದ ಎಂಟು ಪೊಲಿಸ್ ಠಾಣೆಗಳಲ್ಲಿ ಏಕಗವಾಕ್ಷಿ ಪದ್ಧತಿಯಲ್ಲಿ ಅನುಮತಿಗಾಗಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿರುತ್ತದೆ. ವಿದ್ಯುತ್ ಸಂಪರ್ಕಕ್ಕೆ ಹೆಸ್ಕಾಂ ಕಚೇರಿಗಳಿಂದ ಸೂಕ್ತ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಗಣೇಶ ವೀಕ್ಷಣೆಗೆ ಬರುವ ಮಹಿಳೆ ಹಾಗೂ ಪುರುಷರಿಗೆ ಪ್ರತ್ಯೇಕ ಮಾರ್ಗ ಕಲ್ಪಿಸಬೇಕು. ಮೂರ್ತಿ ವಿಸರ್ಜನೆ ಮಾಡುವ ದಿನ, ಸಮಯದ ಕುರಿತು ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಗಣೇಶ ಮಹಾ ಮಂಡಳಿ ಪದಾಧಿಕಾರಿಗಳು ಮಾತನಾಡಿ, ಜಿಲ್ಲಾಡಳಿತ ನಿರ್ದೇಶದಂತೆ ಸರ್ಕಾರದ ಮಾರ್ಗಸೂಚಿ ಅನ್ವಯ ಪ್ರತಿ ವರ್ಷ ಜಿಲ್ಲೆಯಲ್ಲಿ ಗಣೇಶ ಉತ್ಸವ ಆಚರಣೆ ಮಾಡಲಾಗುತ್ತಿದೆ. ಕಳೆದ ಎರಡು, ಮೂರು ವರ್ಷಗಳಿಂದ ವಿದ್ಯುತ್ ಸಮಸ್ಯೆಯಾಗಿದೆ. ಆದ್ದರಿಂದ ಹೆಸ್ಕಾಂ ಹಾಗೂ ಪೊಲೀಸ್ ಇಲಾಖೆ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಗಣೇಶ ಮೂರ್ತಿಗಳ ಮೆರವಣಿಗೆ ಮಾಡುವ ಸಂದರ್ಭದಲ್ಲಿ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ರಸ್ತೆಯಲ್ಲಿ ಬಂದಿರುವ ಗಿಡ ಮರಗಳ ಕೊಂಬೆಗಳನ್ನು ಕಟಾವು ಮಾಡಲು ಹಾಗೂ ವಿವಿಧ ದೂರ ಸಂಪರ್ಕ ಕೇಬಲ್ ಗಳ ತೆರೆವಿಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಹೆಚ್ಚಿನ ಬಸ್ ಕಾರ್ಯಾಚರಣೆ:
ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಐದು ದಿನಗಳ ನಂತರ ಸಾರ್ವಜನಿಕರು ಹೆಚ್ಚು ಭಾಗವಹಿಸುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ಗ್ರಾಮೀಣ ಭಾಗದ ಜನರಿಗೆ ಅನುಕೂಲಗುವ ನಿಟ್ಟಿನಲ್ಲಿ ಕೆ.ಎಸ್.ಆರ್.ಟಿ.ಸಿ ಯಿಂದ ಹೆಚ್ಚಿನ ಬಸ್ ಗಳ ಕಾರ್ಯಾಚರಣೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.
ಗಣೇಶ ಉತ್ಸವದ ಸಂಪೂರ್ಣ ಜವಾಬ್ದಾರಿಯನ್ನು ಸಂಬಂಧಿಸಿದ ಇಲಾಖೆಗಳು ವಹಿಸಿಕೊಳ್ಳಬೇಕು. ಎಲ್ಲ ಇಲಾಖೆಯ ಅಧಿಕಾರಿಗಳ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ಮಹಾಮಂಡಳಿಗಳ ಸಮನ್ವಯದೊಂದಿಗೆ ಎಲ್ಲ ಇಲಾಖೆಯ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚನೆ ನೀಡಿದರು.

ಪೊಲೀಸ್ ಆಯುಕ್ತ ಯಡಾ ಮಾರ್ಟಿನ ಮಾರ್ಬನ್ಯಾಂಗ್ ಮಾತನಾಡಿ, ಗಣೇಶ ಮೂರ್ತಿಗಳು ಹೆಚ್ಚು ಎತ್ತರವಾಗಿರದಂತೆ ನೋಡಿಕೊಳ್ಳಬೇಕು. ಇದರಿಂದ ಸಂಭವನೀಯ ಅನಾಹುತಗಳನ್ನು ತಡೆಗಟ್ಟಬಹುದಾಗಿದೆ. ಡಿ.ಜೆ ಅಳವಡಿಕೆಯಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸುವರ ಮೇಲೆ ಕ್ರಮ ಜರುಗಿಸಲಾಗುವದು ಎಂದು ಎಚ್ಚರಿಕೆ ನೀಡಿದರು.
ಗಣೇಶ ಮಹಾಮಂಡಳಿಗಳು ಸ್ವಯಂ ಸೇವಕರನ್ನು ನೇಮಿಸುವುದರ ಜೊತೆಗೆ ಗಣೇಶ ವಿಸರ್ಜನೆ ಪ್ರಾರಂಭದಿಂದ ಕೊನೆಯ ವರೆಗೆ ಕಡ್ಡಾಯವಾಗಿ ಹಾಜರಿರಬೇಕು. ಇದರ ಜೊತೆಗೆ ಮಂಡಳಿಗಳ ಮುಖ್ಯಸ್ಥರು ಪೋಲಿಸ್ ಸಿಬ್ಬಂದಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಗಣೇಶ ಉತ್ಸವದ ಸಂದರ್ಭದಲ್ಲಿ ಯಾವುದೇ ಗಲಭೆ ಅಥವಾ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುವವರು ಕಂಡು ಬಂದಲ್ಲಿ ಅಂತಹವರ ವಿರುದ್ಧ ಯಾವುದೇ ಮುಲಾಜಿಲ್ಲದೇ ಕ್ರಮ ಜರುಗಿಸಲಾಗುವುದು ಎಂದರು.

ಅಪಾಯಕಾರಿ ಬ್ಯಾನರ್ ಅಳವಡಿಕೆ ನಿಷೇಧ:
ಡಿಸಿಪಿ ರೋಹನ್ ಜಗದೀಶ್ ಮಾತನಾಡಿ ಅತೀ ದೊಡ್ಡ ಬ್ಯಾನರ್ ಗಳನ್ನು ಅಳವಡಿಸಿದಲ್ಲಿ ಎಲೆಕ್ಟ್ರಿಕ್ ವೈರ್ ತಗುಲಿ ಅಪಾಯ ಎದುರಾಗುವ ಸಂಭವವಿರುತ್ತದೆ. ಬ್ಯಾನರ್ ಅಳವಡಿಕೆಯಿಂದ ಸಾರ್ವಜನಿಕರಿಗೆ ತೊಂದರೆ ಆಗಬಾರದು. ಹಸಿರು ಪಟಾಕಿ ಮಾತ್ರ ಖರೀದಿ ಮಾಡಬೇಕು. ಒಂದು ವೇಳೆ ಅನಧಿಕೃತ ಪಟಾಕಿಗಳನ್ನು ಖರೀದಿ ಅಥವಾ ಮಾರಾಟ ಮಾಡುವದು ಕಂಡುಬಂದಲ್ಲಿ ಅಂತವರ ವಿರುದ್ಧ ಕಾಯ್ದೆಯಡಿ ಕ್ರಮ ಜರುಗಿಲಾಗುವುದು ಎಂದು ತಿಳಿಸಿದರು.

ವಿವಿಧ ಗಣೇಶ ಉತ್ಸವ ಮಹಾ ಮಂಡಳಿಯ ಅಧ್ಯಕ್ಷರು, ಪದಾಧಿಕಾರಿಗಳು, ನಗರದಲ್ಲಿ ಈಗಾಗಲೇ ಸುಮಾರು ವರ್ಷಗಳಿಂದ ಗಣೇಶ ಉತ್ಸವ ಪಾರಂಪರಿಕವಾಗಿ ಅದ್ದೂರಿಯಾಗಿ ಆಚರಿಸುತ್ತಾ ಬಂದಿದೆ. ದೇಶದಲ್ಲೇ ಎರಡನೇ ಅತಿ ದೊಡ್ಡ ಗಣೇಶ ಉತ್ಸವ ಆಚರಣೆ ನಮ್ಮ ಜಿಲ್ಲೆಯಲ್ಲಿ ನಡೆಯುತ್ತದೆ. ಗಣೇಶ ಮೂರ್ತಿ ವಿಸರ್ಜನೆಯ ಸುಮಾರು ಎಂಟು ಹೊಂಡಗಳಿವೆ. ಎಲ್ಲವನ್ನೂ ಸ್ವಚ್ಛಗೊಳಿಸಬೇಕು. ಗಣೇಶ ಮಂಟಪಗಳಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಬೇಕು ಎಂದು ಮನವಿ ಮಾಡಿಕೊಂಡರು.

ಗಣೇಶ ಮೂರ್ತಿ ವೀಕ್ಷಿಸಲು ಬರುವ ಸಾರ್ವಜನಿಕರಲ್ಲಿ ಮಹಿಳೆಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ ಹಾಗಾಗಿ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಮೈಸೂರು ದಸರಾ ಉತ್ಸವ ಮಾದರಿಯಲ್ಲಿ ಬೆಳಗಾವಿಯಲ್ಲಿ ಗಣೇಶ ಉತ್ಸವ ಆಚರಣೆಯಾಗಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರುತಿ, ಎಸಿಪಿ ಸದಾಶಿವ ಕಟ್ಟಿಮನಿ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಮಹಾನಗರ ಪಾಲಿಕೆ ನಗರ ಸೇವಕರು, ವಿವಿಧ ಗಣೇಶ ಮಹಾಮಂಡಳಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ