Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ನಾಮಫಲಕದಲ್ಲಿ ಪ್ರತಿಶತ 60 ರಷ್ಟು ಕನ್ನಡ: ಸುಗ್ರೀವಾಜ್ಞೆ ವಾಪಸ್ ಕಳಿಸಿದ ರಾಜ್ಯಪಾಲರ ನಡೆಯ ಹಿಂದೆ ಯಾರ ಕುಮ್ಮಕ್ಕು ಇದೆ ?

 

ಕರ್ನಾಟಕ, ಕನ್ನಡಿಗರ ವಿರೋಧಿ ನಿಲುವನ್ನು ಸಚಿವ ಸಂಪುಟವೇ ಖಂಡಿಸಬೇಕು ಮತ್ತೆ ರಾಜಭವನಕ್ಕೇ ಕಳಿಸಬೇಕು! ಕರ್ನಾಟಕದಲ್ಲಿ ವಾಣಿಜ್ಯ ಸಂಸ್ಥೆಗಳ, ಅಂಗಡಿ ಮುಗ್ಗಟ್ಟುಗಳ ನಾಮಫಲಕಗಳಲ್ಲಿ
ಪ್ರತಿಶತ 60 ರಷ್ಟು ಕನ್ನಡವೇ ಇರಬೇಕು ಎಂದು ಕಡ್ಡಾಯಗೊಳಿಸಿರುವ ರಾಜ್ಯ ಸರಕಾರ ಇದೇ ಫೆಬ್ರುವರಿ 28 ರ ಗಡುವು ವಿಧಿಸಿತ್ತು.ಈ ಸಂಬಂಧದ ಸುಗ್ರೀವಾಜ್ಞೆಗೆ
ಸಹಿ ಹಾಕಲು ರಾಜ್ಯಪಾಲರಿಗೆ ಕಳಿಸಿತ್ತು.ಆದರೆ ರಾಜ್ಯಪಾಲ ಥಾವರಚಂದ್ ಗೆಲ್ಹೊಟ್ ಅವರು ಸುಗ್ರೀವಾಜ್ಞೆಗೆ ಸಹಿ ಹಾಕದೇ ಸರಕಾರಕ್ಕೆ ವಾಪಸ್ ಕಳಿಸಿದ್ದಾರೆ!

ರಾಜ್ಯಪಾಲರ ಈ ನಡೆಯು ಕರ್ನಾಟಕ ಹಾಗೂ ಕನ್ನಡಿಗರ ವಿರೋಧಿ ಕ್ರಮವಾಗಿದ್ದು ಈ ನಡೆಯ ಹಿಂದೆ ಕನ್ನಡೇತರ ಉದ್ದಿಮೆದಾರ ಮತ್ತು ವಾಣಿಜ್ಯ ಸಂಸ್ಥೆಗಳು ಇರಬಹುದೆಂಬ ಶಂಕೆ ವ್ಯಕ್ತವಾಗತೊಡಗಿದೆ.
ದೇಶದ ಕೆಲವು ಬಿಜೆಪಿ ಯೇತರ ಸರಕಾರವಿರುವ ರಾಜ್ಯಗಳ ರಾಜ್ಯಪಾಲರು ಈಗಾಗಲೇ ಅಲ್ಲಿಯ ಸರಕಾರಗಳೊಂದಿಗೆ ಸಂಘರ್ಷಕ್ಕೆ ಇಳಿದಿದ್ದಾರೆ.ಆ ರಾಜ್ಯಪಾಲರ ದಾರಿಯಲ್ಲಿಯೇ ಗೆಲ್ಹೊಟ್ ಅವರೂ
ಹೊರಟಿದ್ದಾರೆಯೆ?

ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ನಡೆಯನ್ನು ಹೇಗೆ ಸ್ವೀಕರಿಸುತ್ತರೆ ಎಂಬುದು ಕುತೂಹಲಕಾರಿ ರಾಜ್ಯದ ಕನ್ನಡಿಗರಿಗೆ ಅವರು ನೀಡಿದ ಭರವಸೆಯಂತೆ ಫೆಬ್ರುವರಿ 28 ರ
ಗಡುವಿಗೆ ಸರಕಾರ ಬದ್ಧವಿರಲೇ ಬೇಕಾಗಿದೆ.
ಈ ಹಿನ್ನೆಲೆಯಲ್ಲಿ ನಾಳೆ ಗುರುವಾರವೇ
ನಡೆಯಬಹುದಾದ ಸಚಿವ ಸಂಪುಟ ದಲ್ಲಿ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಸುಗ್ರೀವಾಜ್ಞೆಯನ್ನು ,ಸಹಿಗಾಗಿ,ಮತ್ತೊಮ್ಮೆ ರಾಜಭವನಕ್ಕೆ ಕಳಿಸಲೇ ಬೇಕು.

ರಾಜ್ಯಪಾಲರ ಕನ್ನಡಿಗರ ವಿರೋಧಿ ನಿಲುವನ್ನು ಜವಾಬ್ದಾರಿಯುತ ಪ್ರತಿಪಕ್ಷದ ಸ್ಥಾನದಲ್ಲಿರುವ ಬಿಜೆಪಿ ಯು ಸಹ ಖಂಡಿಸಬೇಕಾಗುತ್ತದೆ.ಅವರ ತಪ್ಪಿನ
ಬಗ್ಗೆ ತಿಳಿಹೇಳಬೇಕಾಗುತ್ತದೆ. ರಾಜ್ಯಪಾಲರು ತಮ್ಮ ತಪ್ಪನ್ನು ತಿದ್ದಿಕೊಂಡು ಸುಗ್ರೀವಾಙ್ಞೆಗೆ ಸಹಿ ಮಾಡಿ
ಕಳಿಸದಿದ್ದರೆ ನಾಡಿನಾದ್ಯಂತದ ಕನ್ನಡ ಸಂಘ ಸಂಸ್ಥೆಗಳು ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಮಾಡುವದು
ಅನಿವಾರ್ಯವಾಗುತ್ತದೆ.

ಅಶೋಕ ಚಂದರಗಿ
ಅಧ್ಯಕ್ಷರು,ಬೆಳಗಾವಿ ಜಿಲ್ಲಾ
ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ
ಬೆಳಗಾವಿ

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು