Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಾಯುಭಾರ ಕುಸಿತ : ಕರ್ನಾಟಕದ 20 ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ವ್ಯಾಪಕ ಮಳೆ: ಮುನ್ಸೂಚನೆ

ಬೆಂಗಳೂರು : ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ 9ರ ವರೆಗೆ ಗಾಳಿ ಸಹಿತ ಮಳೆ ಆಗಲಿದೆ ಎಂದು ಐಎಂಡಿ ವರದಿ ತಿಳಿಸಿದೆ. ಪಶ್ಚಿಮ-ಮಧ್ಯ ಮತ್ತು ವಾಯುವ್ಯ ಬಂಗಾಳ ಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಕರ್ನಾಟಕದ ವಿವಿಧೆಡೆ ಧಾರಾಕಾರ ಮಳೆ ಆಗುತ್ತಿದೆ. ಮಳೆಯೊಂದಿಗೆ ಚಳಿಯ ವಾತಾವರಣವೂ ಇರಲಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿಯಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಶನಿವಾರ (ಅಕ್ಟೋಬರ್ 4) ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗಲಿದೆ. ಶನಿವಾರ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಆಗಲಿದೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!